ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿ.12ರಂದು ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ಉದ್ಘಾಟನೆ

|
Google Oneindia Kannada News

ಹುಬ್ಬಳ್ಳಿ, ಡಿಸೆಂಬರ್ 07 : ಹುಬ್ಬಳ್ಳಿ ವಿಮಾನ ನಿಲ್ದಾಣದ ಅಭಿವೃದ್ಧಿ ಕಾರ್ಯ ಪೂರ್ಣಗೊಂಡಿದ್ದು ಡಿಸೆಂಬರ್ 12ರಂದು ಅಂತರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ. ಬೆಂಗಳೂರು-ಹುಬ್ಬಳ್ಳಿ-ಮುಂಬೈ ವಿಮಾನ ಸೇವೆಗೂ ಚಾಲನೆ ಸಿಗಲಿದೆ.

ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಅವರು ಗುರುವಾರ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದರು. ನಂತರ ಉದ್ಘಾಟನಾ ಕಾರ್ಯಕ್ರಮದ ಕುರಿತು ಮಾಹಿತಿಯನ್ನು ನೀಡಿದರು. ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಏರ್‌ ಇಂಡಿಯಾದಿಂದ ಹುಬ್ಬಳ್ಳಿ-ಮುಂಬೈ ನಡುವೆ ವಿಮಾನ ಸೇವೆಏರ್‌ ಇಂಡಿಯಾದಿಂದ ಹುಬ್ಬಳ್ಳಿ-ಮುಂಬೈ ನಡುವೆ ವಿಮಾನ ಸೇವೆ

Hubballi airport new terminal to be inaugurated on Dec 12, 2017

'ಕೇಂದ್ರ ವಿಮಾನಯಾನ ಸಚಿವ ಗಜಪತಿರಾಜು ಅವರು ವಿಮಾನ ನಿಲ್ದಾಣದ ನೂತನ ಟರ್ಮಿನಲ್, ವಿಸ್ತರಣೆಗೊಂಡ ರನ್‌ವೇಯನ್ನು ಡಿ.12ರಂದು ಉದ್ಘಾಟಿಸಲಿದ್ದಾರೆ' ಎಂದು ಪ್ರಹ್ಲಾದ್ ಜೋಶಿ ಹೇಳಿದರು.

Hubballi airport new terminal to be inaugurated on Dec 12, 2017

2016ರಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿತ್ತು. ನೂತನ ಟರ್ಮಿನಲ್ ನಿರ್ಮಾಣ ಮಾಡಲಾಗಿದ್ದು, 2,600 ಮೀ.ಗೆ ರನ್‌ವೇ ವಿಸ್ತರಣೆ ಮಾಡಲಾಗಿದೆ. ಉತ್ತರ ಕರ್ನಾಟಕ ಭಾಗದ ದೊಡ್ಡ ವಿಮಾನ ನಿಲ್ದಾಣವಾಗಿ ಪರಿವರ್ತನೆಯಾಗಿದೆ.

ಏರ್ ಇಂಡಿಯಾದ ಮುಖ್ಯಸ್ಥರಾಗಿ ಪ್ರದೀಪ್ ಸಿಂಗ್ ಖರೋಲ ನೇಮಕಏರ್ ಇಂಡಿಯಾದ ಮುಖ್ಯಸ್ಥರಾಗಿ ಪ್ರದೀಪ್ ಸಿಂಗ್ ಖರೋಲ ನೇಮಕ

ನೂತನ ವಿಮಾನ ಸೇವೆ : ಡಿ.12ರಿಂದ ಬೆಂಗಳೂರು-ಹುಬ್ಬಳ್ಳಿ-ಮುಂಬೈ ನಡುವೆ ವಿಮಾನ ಸೇವೆಯೂ ಆರಂಭವಾಗಲಿದೆ. ಏರ್ ಇಂಡಿಯಾ ವಿಮಾನ ವಾರದಲ್ಲಿ ಮೂರು ದಿನ (ಮಂಗಳವಾರ, ಬುಧವಾರ, ಶನಿವಾರ) ಈ ಮಾರ್ಗದಲ್ಲಿ ಸಂಚಾರ ನಡೆಸಲಿದೆ.

ವೇಳಾಪಟ್ಟಿ : ಬೆಂಗಳೂರಿನಿಂದ ಮಧ್ಯಾಹ್ನ 12ಕ್ಕೆ ಹೊರಡುವ ವಿಮಾನ 12.50ಕ್ಕೆ ಹುಬ್ಬಳ್ಳಿ ತಲುಪಲಿದೆ. 1.25ಕ್ಕೆ ಹುಬ್ಬಳ್ಳಿಯಿಂದ ಹೊರಡಲಿದ್ದು, 2.30ಕ್ಕೆ ಮುಂಬೈ ತಲುಪಲಿದೆ.

3.25ಕ್ಕೆ ಮುಂಬೈನಿಂದ ಹೊರಡಲಿರುವ ವಿಮಾನ 4.35ಕ್ಕೆ ಹುಬ್ಬಳ್ಳಿಗೆ ತಲುಪಲಿದೆ. 6.10ಕ್ಕೆ ಹುಬ್ಬಳ್ಳಿಯಿಂದ ಹೊರಟು ರಾತ್ರಿ 7.30ಕ್ಕೆ ಬೆಂಗಳೂರು ತಲುಪಲಿದೆ. ಹುಬ್ಬಳ್ಳಿ-ಮುಂಬೈ ಮಾರ್ಗದ ಬುಕ್ಕಿಂಗ್‌ ಈಗಾಗಲೇ ಆರಂಭವಾಗಿದೆ.

English summary
Dharwad MP Pralhad Joshi said Hubballi airport new terminal will be inaugurated on Dec 12, 2017 by Civil Aviation Minister Ashok Gajapathi Raju.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X