Get Updates
Get notified of breaking news, exclusive insights, and must-see stories!

Anjali Murder: ಮೃತದೇಹ ಎತ್ತದಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆ: ಗೂಂಡಾ ಸರ್ಕಾರ ಎಂದು ಘೋಷಣೆ

ಹುಬ್ಬಳ್ಳಿ, ಮೇ 15: ಹುಬ್ಬಳ್ಳಿಯಲ್ಲಿ ನೇಹಾ ಹಿರಮೇಠ ಹತ್ಯೆ ನಡೆದು ಕೆಲವು ವಾರಗಳ ಬೆನ್ನಲ್ಲೆ ಯುವತಿ ಅಂಜಲಿಯ ಹತ್ಯೆ ನಡೆದಿದೆ. ಮೇಲಿಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಇಂದು ಕಿಮ್ಸ್ ಆಸ್ಪತ್ರೆ ಮುಂದೆ ಯುವತಿ ಮೃತದೇಹ ಅಂತ್ಯಕ್ರಿಯೆಗೆ ರವಾನಿಸಿದಂತೆ ತಡೆ ಹಿಡಿದ ಘಟನೆ ನಡೆದಿದೆ.

ಹೌದು, ಇಂದು ಬೆಳ್ಳಂಬೆಳಗ್ಗೆ ಇಲ್ಲಿನ ವೀರಾಪೂರ ಓಣಿಯಲ್ಲಿರುವ ಅಂಜಲಿ ಮನೆಗೆ ನುಗ್ಗಿದ ಆರೋಪಿ ಗಿರೀಶ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಪ್ರೀತಿ ನಿರಾಕರಿಸಿದ್ದಕ್ಕೆ ಈ ಕೊಲೆ ನಡೆದಿದೆ ಎನ್ನಲಾಗಿದೆ.

Hubballi Anjali Murder Huge Protest in Chennamma circle and Ahead Kims Reacts Mahesh Tenginkai

ಘಟನೆಯಿಂದ ಆಕ್ರೋಶಗೊಂಡಿರುವ ಕುಟುಂಬಸ್ಥರು, ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಜಿಲ್ಲಾಧಿಕಾರಿಗಳು ಅಂಜಲಿ ಮನೆಗೆ ಬರುವವರೆಗೂ ಮೃತ ದೇಹ ಎತ್ತಲು ಬಿಡುವುದಿಲ್ಲ ಎಂದು ಕಿಮ್ಸ್ ಆಸ್ಪತ್ರೆ ಹಾಗೂ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಮೃತದೇಹದ ಆಂಬ್ಯುಲೆನ್ಸ್‌ಗೆ ತಡೆ

ಅಂಜಲಿ ಮೃತದೇಹ ಅಂತಿಮ ಆಸ್ಪತ್ರೆ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ ಆಂಬ್ಯುಲೆನ್ಸ್ ನಲ್ಲಿ ಅಂತ್ಯಕ್ರಿಯೆಗೆ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಪ್ರತಿಭಟನಾಕಾರರು ಆಂಬ್ಯುಲೆನ್ಸ್ ಮುಂದೆ ಸಾಗದಂತೆ ತಡೆ ನೀಡಿದರು. ಇನ್ನೂ ಎಷ್ಟು ಹೆಣ್ಣುಮಕ್ಕಳ ಜೀವ ಬಲಿಯಾಗಬೇಕು ಎಂದೆಲ್ಲ ಕಣ್ಣೀರಿಟ್ಟರು. ಈ ವೇಳೆ ನೇಹಾ ಹಿರೇಮಠ ತಂದೆ ನಿರಂಜನ್ ಹಿರೇಮಠ ಸಹ ಧರಣಿಯಲ್ಲಿದ್ದರು.

ಅಂಜಲಿ ಕೊಂದವನನ್ನು ಗಲ್ಲಿಗೇರಿಸಲು ಆಗ್ರಹ

ಹಂತಕನ್ನೂ ಗಲ್ಲಿಗೇರಿಸುವ ಮೂಲಕ ಯುವತಿ ಸಾವಿಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಗುಂಡಾ ಸರ್ಕಾರ ಅಸ್ತಿತ್ವದಲ್ಲಿರುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ. ಇದೊಂದು ಹೀನ ಕೃತ್ಯ ಎಂದೆಲ್ಲ ಧಿಕ್ಕಾರ ಕೂಗಿದರು. ಸರ್ಕಾರ ಆಡಳಿತ ವಿರುದ್ಧ ಕಿಡಿ ಕಾರಿದರು. ಪ್ರತಿಭಟನೆ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರ ಮಧ್ಯೆ ವಾಗ್ವಾದ, ತಳ್ಳಾಟ ನೂಕಾಟ ನಡೆಯಿತು. ನಂತರ ಪೊಲೀಸರ ಆಂಬ್ಯುಲೆನ್ಸ್ ಸಾಗಲು ಅನುವು ಮಾಡಿದರು.

Hubballi Anjali Murder Huge Protest in Chennamma circle and Ahead Kims Reacts Mahesh Tenginkai

ರಾಜ್ಯ ಗೃಹ ಇಲಾಖೆ ವರ್ಗಾವಣೆಯಲ್ಲಿ ಬ್ಯೂಸಿ

ಕಿಮ್ಸ್‌ನ ಶವಾಗಾರಕ್ಕೆ ಭೇಟಿ ಯುವತಿ ಅಂತಿಮ ದರ್ಶನ ಪಡೆದ ನಂತರ ಮಾತನಾಡಿದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ, ನೇಹಾ ಹಿರೇಮಠ ಕೊಲೆಯಾದ ಕೆಲವೇ ವಾರಗಳಲ್ಲಿ ಯುವತಿ ಅಂಜಲಿ ಕೊಲೆಯಾಗಿದೆ. ಗೃಹ ಇಲಾಖೆ ವರ್ಗಾವಣೆ ವಿಚಾರದಲ್ಲಿ ಬ್ಯೂಸಿಯಾಗಿದೆ. ಪೊಲೀಸರ ವೈಫಲ್ಯವೇ ಅಂಜಲಿ ಕೊಲೆಗೆ ಕಾರಣ ಎಂದು ಅವರು ದೂರಿದರು.

ಎರಡು ವಿಶೇಷ ಪೊಲೀಸ್ ತಂಡ ರಚನೆ

ಇಂದು ನಡೆದಿರುವ ಅಂಜಲಿ ಅಂಬೀಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ​ ರೇಣುಕಾ ಅವರು, ಆರೋಪಿ ಪತ್ತೆಗೆ ಎರಡು ವಿಶೇಷ ತಂಡ ರಚನೆ ಮಾಡಲಾಗಿದೆ ಎಂದರು.

ಅಂಜಲಿ ಅಂಬಿಗೇರಗೆ 4 ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾನೆ. ಅಂಜಲಿ ಕೊಲೆ ಮಾಡಿದ ವಿಶ್ವ ಅಲಿಯಾಸ್ ಗಿರೀಶ್ ಪರಿಚಯಸ್ಥ ಇಂದು ಮುಂಜಾನೆ ಅಂಜಲಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಅವರ ಮನೆಯವರ ದೂರಿನ ಪ್ರಕಾರ ಪ್ರೀತಿಸುವಂತೆ ಪೀಡಿಸುತ್ತಿದ್ದ. ಅಂಜಲಿ ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಆರೋಪಿ ಪತ್ತೆಗಾಗಿ ಎರಡು ವಿಶೇಷ ತಂಡ ರಚನೆ ಮಾಡಲಾಗಿದೆ. ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ವಿರುದ್ಧ ಪ್ರಕರಣಗಳಿವೆ. ವಿಶ್ವನ ವಿರುದ್ಧ ಕಳ್ಳತನ ಸೇರಿದಂತೆ ಹಲವು ಕೇಸ್ ದಾಖಲಾಗಿವೆ. ಎಲ್ಲಾ ಆಯಾಮದಲ್ಲಿ‌ ತನಿಖೆ ಮಾಡ್ತೇವೆ. ಅಂಜಲಿ ಕುಟುಂಬ ಬೆಂಡಿಗೇರಿ‌ ಠಾಣೆಗೆ ಬಂದಿರುವುದು ನಿಜ.

ಈ ಕುರಿತು ಪೊಲೀಸ್​ ಠಾಣೆಯ ಸಿಸಿಕ್ಯಾಮರಾ ದೃಶ್ಯಗಳಿವೆ. ಆದರೆ ಯಾವ ಕಾರಣಕ್ಕೆ ಬಂದಿದ್ದಾರೆ ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ. ಆದ್ರೆ ಸಿಬ್ಬಂದಿ ಬೇರೆ ಪ್ರಕರಣಕ್ಕೆ ಬಂದಿದ್ದರು ಅಂತಾ ಹೇಳ್ತಿದ್ದಾರೆ. ಈ ಬಗ್ಗೆಯೂ ತನಿಖೆ ಆರಂಭಿಸಿದ್ದೇವೆ. ಬೆಂಡಿಗೇರಿ ಠಾಣೆ ಸಿಬ್ಬಂದಿ ಲೋಪದೋಷವಿದ್ದರೆ ಕ್ರಮ ಕೈಗೊಳ್ಳತ್ತೇವೆ ಎಂದು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+