'ದೇಶ ವಿರೋಧಿ ಘೋಷಣೆ ಕೂಗಿದವರಿಗೆ ಶಿಕ್ಷೆ ಯಾವಾಗ?'

By: ಹುಬ್ಬಳ್ಳಿ ಪ್ರತಿನಿಧಿ
Subscribe to Oneindia Kannada

ಹುಬ್ಬಳ್ಳಿ, ಆಗಸ್ಟ್, 24: ಬೆಂಗಳೂರಲ್ಲಿ ದೇಶದ್ರೋಹದ ಘೋಷಣೆ ಪ್ರಕರಣ ಪ್ರಕರಣ ಇನ್ನು ತಣ್ಣಗಾಗಿಲ್ಲ. ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು. ಅಪರಾಧಿಗಳಿಗೆ ಶಿಕ್ಷೆ ಆಗಲೇಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು.

ಸ್ಥಳೀಯ ಬಿಜೆಪಿ ಪೂರ್ವ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಬುಧವಾರ ನಗರದಲ್ಲಿ ಬೃಹತ್ ಮೆರವಣಿಗೆ ಮಾಡಿ ಪ್ರತಿಭಟಿಸಿದರು. ನಗರದ ಸರಾಫಗಟ್ಟಿಯಿಂದ ಬೃಹತ್ ಮೆರವಣಿಗೆ ಆರಂಭಿಸಿದ ಬಿಜೆಪಿ ಕಾರ್ಯಕರ್ತರು ಕಿತ್ತೂರು ಚೆನ್ನಮ್ಮ ವೃತ್ತದ ಸಂಗೊಳ್ಳಿ ರಾಯಣ್ಣ ಮೂರ್ತಿ ಬಳಿ ರಸ್ತೆ ತಡೆ ನಡೆಸಿದರು.[ಚಿತ್ರಗಳು : ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ವಿರುದ್ಧ ಬಿಜೆಪಿ ಹೋರಾಟ]

hubballi

ಈ ಸಂದರ್ಭದಲ್ಲಿ ಮಾತನಾಡಿದ, ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ, ದೇಶದ್ರೋಹದ ಆರೋಪದ ಹಿನ್ನೆಲೆಯಲ್ಲಿ ದೇಶವಿರೋಧಿ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಬೇಕು, ರಾಷ್ಟ್ರೀಯ ಏಕತೆ ಹಾಗೂ ಸಮಗ್ರತೆಗೆ ಸವಾಲು ಹಾಕಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಲಾಗುತ್ತಿದೆ ಎಂದರು.[ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆಯ ಪರಿಚಯ]

hubballi

ಅಮಾಯಕ ವಿದ್ಯಾರ್ಥಿಗಳನ್ನು ಅಮಾನುಷವಾಗಿ ಥಳಿಸಲಾಗಿದೆ, ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳನ್ನು ಕೂಡಲ ಅಮಾನತುಗೊಳಿಸಬೇಕು, ತನಿಖೆ ಪೂರ್ಣಗೊಳಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು. ನಂತರ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಅರ್ಪಿಸಲಾಯಿತು. [ಎಚ್ಚರ, ಹುಬ್ಬಳ್ಳಿ ಬಿಟ್ಟು ಧಾರವಾಡಕ್ಕೆ ಬಂದ್ರು ಸರಗಳ್ಳರು!]

ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಬಿಜೆಪಿ ಜಿಲ್ಲಾಧ್ಯಕ್ಷ ನಾಗೇಶ ಕಲಬುರ್ಗಿ ಸೇರಿದಂತೆ ಮತ್ತಿತರು ಪಾಲ್ಗೊಂಡಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Hubballi: Karnataka Bharatiya Janata Party on August 24, 2016 took to the streets demanding the legal action against Amnesty International India, which facing sedition case.
Please Wait while comments are loading...