ಹುಬ್ಬಳ್ಳಿಯಲ್ಲಿ ಗುಂಡಿನ ಸದ್ದು: ಇಬ್ಬರು ಅಂತಾರಾಜ್ಯ ದರೋಡೆಕೋರರ ಬಂಧನ
ಹುಬ್ಬಳ್ಳಿ, ನವೆಂಬರ್ 24: ಹುಬ್ಬಳ್ಳಿಯಲ್ಲಿ ಭಾನುವಾರ ಪೊಲೀಸ್ ಅಧಿಕಾರಿಗಳು ಬಂದೂಕುಗಳು ಸದ್ದು ಮಾಡಿವೆ. ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಸಿಸಿಬಿ ಪೊಲೀಸರು ಗುಂಡೇಟಿನ ದಾಳಿ ನಡೆಸಿದ್ದಾರೆ. ಇಬ್ಬರು ಅಂತರಾಜ್ಯ ದರೋಡೆಕೋರರಿಗೆ ಕಾಲಿಗೆ ಫೈರಿಂಗ್ ಮಾಡುವ ಮೂಲಕ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಸಿಸಿಬಿ ಪೊಲೀಸರ ದಾಳಿ ಮಾಡಿದಾಗ ಅವರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾರೆ. ಸಿಸಿಬಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಮುಂದಾಗಿದ್ದಾರೆ. ಕೂಡಲೇ ಪ್ರತ್ಯುತ್ತರವಾಗಿ ಗುಂಡಿನ ದಾಳಿ ನಡೆಸಿದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕುರ್ತಾ ಅಲಿಯಾಸ್ ಭರತ್ ಕುಮಾರ್ ಹಾಗೂ ಫಾರೂಕ್ ಅಲಿಯಾಸ್ ಟೊಮೆಟೊ ಫಾರೂಕ್ ಬಂಧಿತ ಆರೋಪಿಗಳು. ಸದ್ಯ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮಂಗಳೂರು ಮೂಲದ ಭರತ್, ಫಾರುಕ್ ಕಾರು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದರು. ಇವರ ಗ್ಯಾಂಗ್‌ನಲ್ಲಿ 15 ಜನರಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿ ಮೂಲದ ರಾಹುಲ್ ಸುರ್ವೆ ಕಾರು ಅಡ್ಡಗಟ್ಟಿದ್ದ ಖದೀಮರು ಬೆದರಿಸಿ ದರೋಡೆ ಮಾಡಿದ್ದರು. ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಹತ್ತಿರ ದರೋಡೆ ಮಾಡಿ ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನವೆಂಬರ್ 8 ರಂದು ಈ ದರೋಡೆ ಘಟನೆ ನಡೆದಿತ್ತು. ಈ ಸಂಬಂಧ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 15 ಜನರ ಗ್ಯಾಂಗ್‌ನಲ್ಲಿ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹುಬ್ಬಳ್ಳಿ ಧಾರವಾಡ ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಇಬ್ಬರನ್ನು ಬಂಧಿಸಿದ್ದರು. ಇಂದು ಸ್ಥಳ ಮಹಜರು ಮಾಡೋ ವೇಳೆ ಖದೀಮರು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಆರೋಪಿಗಳ ಕಾಲಿಗೆ ಸಿಸಿಬಿ ಪೊಲೀಸರು ಗುಂಡು ಹಾರಿಸಿದ್ದಾರೆ.
ಘಟನೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಅವರು ಕಿಮ್ಸ್ ಆಸ್ಪತ್ರೆಗೆ ಭೇಟಿ ಆರೋಪಿಗಳು ಆರೋಗ್ಯ ಪರಿಶೀಲಿಸಿದ್ದಾರೆ. ಆಸ್ಪತ್ರೆಯಲ್ಲಿ ಪೊಲೀಸರು ಆರೋಪಿಗಳ ಜೊತೆಗಿದ್ದಾರೆ.
17ಕ್ಕೂ ಅಧಿಕ ಅಪರಾಧ ಪ್ರಕರಣಗಳಲ್ಲಿ ಭಾಗಿ
ರಾಜ್ಯದಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ನಟೋರಿಯಸ್ ಫಾರುಕ್ ಮೇಲೆ 17 ಕ್ಕೂ ಅಧಿಕ ಅಪರಾಧ ಪ್ರಕರಣಗಳು ದಾಖಲಾಗಿವೆ. ಕೇವಲ ಕರ್ನಾಟಕ ಮಾತ್ರವಲ್ಲದೇ ಹೊರಗಿನ ರಾಜ್ಯಗಳಲ್ಲಿಯೂ ಪ್ರಕರಣಗಳು ದಾಖಲಾಗಿವೆ. ಭರತ್ ಸಹ ವಿವಿಧ ಅಪರಾಧ ಚುವಟಿಕೆಗಳಲ್ಲಿ ತೊಡಗಿಕೊಂಡಿರುವ ಕಾರಣ ಆತ ಸಹ ಕರ್ನಾಟಕದ ವಿವಿಧ ಪೊಲೀಸ್ ಠಾಣೆಗಳಿಗೆ ಬೇಕಾಗಿದ್ದಾನೆ. ಈ ಬಂಧಿತರರ ಸಹಚಕರನ್ನು ಪೊಲೀಸರು ಹುಡುಕುತ್ತಿದ್ದಾರೆ.
ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿ, ಕರ್ನಾಟಕದ ಬೆಂಗಳೂರು, ಕರಾವಳಿಯ ಮಂಗಳೂರು ಹಾಗೂ ಕೇರಳ ರಾಜ್ಯದವರು ಈ ದರೋಡೆಯಲ್ಲಿ ಭಾಗಿಯಾದ ಅನುಮಾನ ಇದೆ. ಶೀಘ್ರವೇ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ಸಹಚರರ ಮಾಹಿತಿ ಕಲೆ ಹಾಕಲಿದ್ದಾರೆ. ಬಂಧಿತರ ಸಹಚರರನ್ನು ಶೀಘ್ರವೇ ಪತ್ತೆ ಮಾಡಲಾಗುವುದು ಎಂದರು.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications