ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿ: ರಾಷ್ಟ್ರಪತಿ ಕಾರ್ಯಕ್ರಮ ಬಹಿಷ್ಕರಿಸಲು ಕಾಂಗ್ರೆಸ್ ನಿರ್ಧಾರ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಸೆಪ್ಟೆಂಬರ್ 26: ಸೋಮವಾರ ಹುಬ್ಬಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ದ್ರೌಪದಿ ಮುರ್ಮು ಪೌರ ಸನ್ಮಾನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ‌ ತಯಾರಿ ಮಾಡಿಕೊಂಡಿದೆ. ಆದರೆ ರಾಷ್ಟ್ರಪತಿ ಪೌರ ಸನ್ಮಾನ ಕಾರ್ಯಕ್ರಮವನ್ನು ಪಾಲಿಕೆಯ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಬಹಿಷ್ಕರಿಸಲು ನಿರ್ಧಾರ ಮಾಡಿದೆ.

ಈ ಕುರಿತು ತುರ್ತು ಪತ್ರಿಕಾಗೋಷ್ಠಿ ನಡೆಸಿದ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರು, ರಾಷ್ಟ್ರಪತಿಯರ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲಿಕೆ ಪ್ರತಿಪಕ್ಷದ ಕಾಂಗ್ರೆಸ್ ಸದಸ್ಯರನ್ನು ಕಡೆಗಣನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯರೆಲ್ಲರೂ ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮವನ್ನು ಬಹಿಷ್ಕರಿಸಬೇಕೆಂಬ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದರು.

ವಿಮಾನ ಹಾಗೂ ಸ್ಪೋರ್ಟ್ಸ್ ಕಾರ್ ತಯಾರಿ; ಸೀ ಇಂಡಿಯಾ ಸ್ಪರ್ಧೆಯಲ್ಲಿ ಹುಬ್ಬಳ್ಳಿ ವಿದ್ಯಾರ್ಥಿಗಳು ಪ್ರಥಮ ವಿಮಾನ ಹಾಗೂ ಸ್ಪೋರ್ಟ್ಸ್ ಕಾರ್ ತಯಾರಿ; ಸೀ ಇಂಡಿಯಾ ಸ್ಪರ್ಧೆಯಲ್ಲಿ ಹುಬ್ಬಳ್ಳಿ ವಿದ್ಯಾರ್ಥಿಗಳು ಪ್ರಥಮ

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ.‌ ಎಲ್ಲದರಲ್ಲೂ ಬಿಜೆಪಿ ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗಿದೆ. ಪೌರ ಸನ್ಮಾನ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ಮಾಡಲಾಗುತ್ತಿದೆ.‌ ಕಾರ್ಯಕ್ರಮ ಯಶಸ್ಸು ಸಲುವಾಗಿ ಎಲ್ಲಾ ಕಾರ್ಪೋರೆಟರ್‌ಗಳ ಒಳಗೊಂಡು ವಿವಿಧ ಕಮಿಟಿ ರಚಿಸಲಾಗುತ್ತದೆ ಎಂದು ಮೇಯರ್ ತಿಳಿಸಿದ್ದರು. ಆ ಕೆಲಸ ಮಾಡಲಿಲ್ಲ, ಪ್ರತಿ ಹಂತದಲ್ಲಿ ಪ್ರತಿಪಕ್ಷದವರನ್ನು ಕಡೆಗಣಿಸುತ್ತ ಬಂದಿದ್ದಾರೆ‌ ಎಂದು ಪಾಲಿಕೆ ವಿರೋಧ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ‌

Hubballi Congress Decide to Boycott President Draupadi Murmus Civic Honour Program

ರಾಷ್ಟ್ರಪತಿ ಅವರೊಂದಿಗೆ ಪೋಟೋ ಸೇಷನ್‌ಗೂ ನಮಗೆ ಅವಕಾಶ ನೀಡಿಲ್ಲ.‌‌ ಜಾಹೀರಾತು ಬ್ಯಾನರ್‌ಗಳಲ್ಲೂ ಕಾಂಗ್ರೆಸ್ ಸದಸ್ಯರನ್ನು ಕಡೆಗಣಿಸುವ ಮೂಲಕ ಅವಮಾನಿಸಿಲಾಗಿದೆ ಎಂದು ಕಾಂಗ್ರೆಸ್ ಪಾಲಿಕೆ ಸದಸ್ಯರು ದೂರಿದ್ದಾರೆ.

ಇನ್ನೂ, ಪೌರ ಸನ್ಮಾನ ಹೆಸರಿನಲ್ಲಿ ದುಂದು ವೆಚ್ಚ ಮಾಡಲಾಗುತ್ತಿದೆ. ಪೆಂಡಾಲ್ ಹಾಕಿದ ಮೇಲೆ ಕೊಟೇಶನ್ ಕರೆಯಲಾಗಿದೆ. ಇದರಲ್ಲೂ ಅವ್ಯವಹಾರವಾಗಿದೆ ಎಂದು ಪಾಲಿಕೆ ಕಾಂಗ್ರೆಸ್ ಸದಸ್ಯರ ಆರೋಪ ಮಾಡಿದರು.

12:15ಕ್ಕೆ ಹುಬ್ಬಳ್ಳಿಗೆ ಆಗಮನ

ಮೈಸೂರಿನಲ್ಲಿ ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ಬಳಿಕ ವಿಶೇಷ ವಿಮಾನದ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಮಧ್ಯಾಹ್ನ 12.15ಕ್ಕೆ ಹುಬ್ಬಳ್ಳಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮದ ಸ್ಥಳಕ್ಕೆ ನೇರವಾಗಿ ಆಗಮಿಸಲಿದ್ದಾರೆ. 12.45ಕ್ಕೆ ರಾಷ್ಟ್ರಪತಿಗಳಿಗೆ ಪೌರ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಸಿಂಗ್ ಗೆಹ್ಲೋಟ್, ರಾಜ್ಯಪಾಲ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಅಶ್ವಥ್ ನಾರಾಯಣ, ಶಂಕರ್ ಪಾಟೀಲ್ ಮುನೇನಕೊಪ್ಪ, ಬೈರತಿ ಬಸವರಾಜ, ಹಾಲಪ್ಪ ಆಚಾರ ಹಾಗೂ ಹುಬ್ಬಳ್ಳಿ ಧಾರವಾಡ ಮೇಯರ್ ಈರೇಶ್ ಅಂಚಟಗೇರಿ ಉಪಸ್ಥಿತರಿರಲಿದ್ದಾರೆ.

ರಾಷ್ಟ್ರಪತಿಗಳಿಗೆ ಸಿದ್ಧಾರೂಢ ಮೂರ್ತಿ ಗಿಫ್ಟ್‌

ರಾಷ್ಟ್ರಪತಿ ಪೌರ ಸನ್ಮಾನಕ್ಕೆ ಸಂಭ್ರಮದ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ದ್ರೌಪದಿ ಮುರ್ಮುರಿಗೆ ಪಾಲಿಕೆ ವತಿಯಿಂದ ನೆನಪಿನ ಕಾಣಿಕೆಯಾಗಿ 900 ಗ್ರಾಂ ತೂಕದ ಬೆಳ್ಳಿಯ ಸಿದ್ಧಾರೂಢ ಮೂರ್ತಿ ನೀಡಿ, ಏಲಕ್ಕಿ ಮಾಲೆಯಿಂದ ಸನ್ಮಾನ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸಿದ್ಧಾರೂಢರು ಹುಬ್ಬಳ್ಳಿಯ ಆರಾಧ್ಯ ದೈವವಾಗಿದ್ದಾರೆ. ಹೀಗಾಗಿ ಅವರ ಆಶೀರ್ವಾದ ದ್ರೌಪದಿ ಮುರ್ಮು ಅವರಿಗೆ ಇರಲಿ ಎಂದು ವಿಶೇಷವಾಗಿ ಸಿದ್ಧಪಡಿಸಿರುವ ಬೆಳ್ಳಿ ಮೂರ್ತಿ ನೀಡಲಾಗುತ್ತಿದೆ. ಪಕ್ಕದ ಹಾವೇರಿ ಜಿಲ್ಲೆ ಏಲಕ್ಕಿ ಮಾಲೆಗೆ ಖ್ಯಾತಿ ಪಡೆದಿದ್ದು, ದೊಡ್ಡ ಗಾತ್ರದ ಏಲಕ್ಕಿ ಹಾರ ಹಾಕಲು ತಯಾರಿ ಮಾಡಿಕೊಳ್ಳಲಾಗಿದೆ. ಜೊತೆಗೆ ಇಲ್ಲಿನ ಪ್ರಸಿದ್ಧ ಧಾರವಾಡ ಪೇಡವನ್ನು ನೀಡಲು ಪಾಲಿಕೆ ನಿರ್ಧರಿಸಿದೆ.

English summary
The Congress corporators of Hubballi have decided to boycott the felicitation program organized by the Hubli Mahanagara Corporation for President Draupadi Murmu on September 26.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X