ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಫಲಿತಾಂಶ 2023: ಜಗದೀಶ್ ಶೆಟ್ಟರ್‌ಗೆ ಹೀನಾಯ ಸೋಲು, ಮಹೇಶ್ ಟೆಂಗಿನಕಾಯಿ ಗೆಲುವಿನ ನಗೆ
2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು (ಶನಿವಾರ, ಮೇ 13) ಪ್ರಕಟವಾಗಿದ್ದು, ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ ಭಾರೀ ಮುಖಭಂಗ ಅನುಭವಿಸಿದೆ. ಕಾಂಗ್ರೆಸ್ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಪಡೆದು ಸರಳ ಬಹುಮತ ಪಡೆದಿದೆ.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ವಿರುದ್ಧ ಮಹೇಶ್ ಟೆಂಗಿನಕಾಯಿ 35000 ಮತಗಳ ಅಂತರದ ಜಯ ದಾಖಲಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಬಿಜೆಪಿ ನೆಲಕಚ್ಚಿದರೂ, ಪ್ರತಿಷ್ಠೆಯ ಕ್ಷೇತ್ರವಾಗಿದ್ದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೀನಾಯ ಸೋಲು ಕಂಡಿದ್ದಾರೆ.

ಜಗದೀಶ್ ಶೆಟ್ಟರ್ 1994ರಿಂದಲೂ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಶಾಸಕ, ಮಂತ್ರಿ, ಮುಖ್ಯಮಂತ್ರಿ ಹುದ್ದೇಗೇರಿದವರು ಜಗದೀಶ್ ಶೆಟ್ಟರ್. ಟಿಕೆಟ್ ನೀಡದ ಒಂದೇ ಕಾರಣಕ್ಕಾಗಿ ಬಿಜೆಪಿ ಜೊತೆಗಿನ ದೀರ್ಘಕಾಲದ ಸಂಬಂಧ ಮುರಿದುಕೊಂಡು ಕಾಂಗ್ರೆಸ್ ಸೇರಿದ್ದಾರೆ.
ಕರ್ನಾಟಕ ಚುನಾವಣಾ ಫಲಿತಾಂಶ 2023 LIVE ಕ್ಷಣ ಕ್ಷಣದ ಮಾಹಿತಿ
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ವಿರುದ್ಧ ಬಿಜೆಪಿ ಪಕ್ಷದಿಂದ ಮಹೇಶ್ ಟೆಂಗಿನಕಾಯಿ ಸ್ಪರ್ಧಿಸಿದ್ದು, ತೀವ್ರ ಪೈಪೋಟಿ ನೀಡಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಯಾರ ಗೆಲುವು ಸಾಧಿಸಲಿದ್ದಾರೆ ಎಂಬುದಕ್ಕೆ ಶನಿವಾರ ಮಧ್ಯಾಹ್ನ ಸ್ಪಷ್ಟ ಚಿತ್ರಣ ದೊರೆಯಲಿದೆ.

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಜಗದೀಶ್ ಶೆಟ್ಟರ್ ಅವರು ಹಲವು ದಶಕಗಳ ಕಾಲದ ಬಿಜೆಪಿ ಜೊತೆಗಿನ ಸಂಬಂಧವನ್ನು ಕಳೆದುಕೊಂದು ಕಾಂಗ್ರೆಸ್ ಸೇರಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕೈ ಅಭ್ಯರ್ಥಿಯಾಗಿದ್ದಾರೆ. ಇನ್ನು ಮಹಾಂತ ಒಡೆಯರ್ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.
1994ರಿಂದ ಸತತವಾಗಿ 6 ಬಾರಿ ಬಿಜೆಪಿ ಪಕ್ಷದಿಂದ ಗೆಲುವು ಸಾಧಿಸಿದ್ದ ಜಗದೀಶ್ ಶೆಟ್ಟರ್, ಅನಿರೀಕ್ಷಿತ ರಾಜಕೀಯ ಬೆಳವಣಿಗೆಯಲ್ಲಿ ಈ ಬಾರಿ ಕಾಂಗ್ರೆಸ್‌ನಿಂದ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಬಿಜೆಪಿ ಭದ್ರಕೋಟೆಯಾಗಿರುವ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿನ ಮತದಾರ ಯಾರ ಕೈ ಹಿಡಿಯಲಿದ್ದಾನೆ ಎಂಬ ಕುತೂಹಲ ಮೂಡಿದೆ.
ಇನ್ನು 2018ರಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್ ಬರೋಬ್ಬರಿ 75,794 ಮತಗಳನ್ನು ಪಡೆದಿದ್ದರು. ಇನ್ನು ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಡಾ. ಮಹೇಶ್ ನಲ್ವಾಡ್‌ಗೆ ಎರಡನೇ ಬಾರಿ ಸೋಲಿನ ರುಚಿ ತೋರಿಸಿದ್ದರು. ಮಹೇಶ್ ನಲ್ವಾಡ್ 54,488 ಮತಗಳನ್ನು ಪಡೆದಿದ್ದರು.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ವಿವರ
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಒಟ್ಟು 2,45,862 ಮತದಾರರಿದ್ದು, ಅದರಲ್ಲಿ 1,21,872 ಪುರುಷರು ಮತ್ತು 1,23,952 ಮಹಿಳಾ ಮತದಾರರಿದ್ದಾರೆ. ಇನ್ನು 38 ಲೈಂಗಿಕ ಅಲ್ಪಸಂಖ್ಯಾತರಿದ್ದಾರೆ.
ಈ ಬಾರಿಯ ಚುನಾವಣೆ ನನ್ನ ಸ್ವಾಭಿಮಾನದ ಹೋರಾಟವೇ ಹೊರತು ರಾಜಕೀಯ ಆಕಾಂಕ್ಷೆಗಾಗಿ ಅಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಯಿತು. ಹಾಗಾಗಿ ಬಿಜೆಪಿ ತೊರೆದು ಬೇಷರತ್ತಾಗಿ ಕಾಂಗ್ರೆಸ್ ಪಕ್ಷ ಸೇರಿದ್ದೇನೆ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಜಾತಿ ಲೆಕ್ಕಾಚಾರ
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ 80 ಸಾವಿರಕ್ಕೂ ಅಧಿಕ ಲಿಂಗಾಯತರು, 10 ಸಾವಿರ ಕುರುಬರು, 37 ಸಾವಿರ ಮುಸ್ಲಿಮರು, 18 ಸಾವಿರ ಬ್ರಾಹ್ಮಣರು, 13 ಸಾವಿರ ಕ್ರಿಶ್ಚಿಯನ್, ಎಸ್‌ಸಿ, ಎಸ್‌ಟಿಗೆ ಸೇರಿದ 28 ಸಾವಿರ ಮತಗಳಿವೆ.
ಎಲ್ಲ ಅಭ್ಯರ್ಥಿಗಳು ಬಹುತೇಕ ಲಿಂಗಾಯತ ಸಮುದಾಯದವರೇ ಅಗಿರುವುದರಿಂದ ಮತ ವಿಭಜನೆ ಆಗಲಿದ್ದು, ಮುಸ್ಲಿಂ, ಎಸ್‌ಸಿ, ಎಸ್‌ಟಿ ಮತಗಳು ನಿರ್ಣಾಯಕವಾಗಲಿವೆ.












Click it and Unblock the Notifications