ಹುಬ್ಬಳ್ಳಿ - ಧಾರವಾಡ ಬೈಪಾಸ್: 12.5 ಕೋಟಿ ರೂ. ವೆಚ್ಚದಲ್ಲಿ ಕೆಳಸೇತುವೆ ನಿರ್ಮಾಣ
ಹುಬ್ಬಳ್ಳಿ - ಧಾರವಾಡ ಬೈಪಾಸ್‌ನ ಪ್ರಮುಖ ಜಾಗವಾದ ಇಲ್ಲಿನ ನೂಲ್ವಿ- ಬೆಳಗಲಿ ಕ್ರಾಸ್ ಬಳಿಯಲ್ಲಿ 12.5 ಕೋಟಿ ರೂಪಾಯಿ ವೆಚ್ಚದಲ್ಲಿ ಕೇಳ ಸೇತುವೆ ನಿರ್ಮಾಣ ಮಾಡುವುದಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಭೂಮಿಪೂಜೆ ಮಾಡಿದ್ದಾರೆ. ಈ ಪ್ರದೇಶವು ಸಾವಿನ ಹೆದ್ದಾರಿ ಅಂತಲೇ ಕುಖ್ಯಾತಿಯನ್ನು ಗಳಿಸಿದೆ. ಇದೀಗ ಕೊನೆಗೂ ನೂಲ್ವಿ ಬೆಳಗಲಿ ಕ್ರಾಸ್‌ಗೆ ಅಂತೂ ಇಂತೂ ಮುಕ್ತಿ ಸಿಗುವ ಸಮಯ ಬಂದಿದೆ.
ಬರೋಬ್ಬರಿ 12.5 ಕೋಟಿ ರೂಪಾಯಿ ವೆಚ್ಚದಲ್ಲಿ ಕೇಳ ಸೇತುವೆ ಕಾಮಗಾರಿ ಭೂಮಿ ಪೂಜೆಯನ್ನು ಸೋಮವಾರ (ಜನವರಿ 13)ಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನೆರವೇರಿಸಿದ್ದಾರೆ. ಈ ಮೂಲಕ ಬಹುದಿನಗಳ ಈ ಭಾಗದ ಜನರ ಬೇಡಿಕೆ ಈಡೇರಿದಂತಾಗಿದೆ. ಈ ಮೂಲಕ ಈ ಭಾಗದ ಜನರಲ್ಲಿ ಉತ್ಸಾಹ ಇಮ್ಮಡಿಗೊಂಡಿದೆ. ಅಲ್ಲದೆ ಜನ ಸಮಾಧಾನದ ನಿಟ್ಟುಸಿರನ್ನು ಸಹ ಬಿಟ್ಟಿದ್ದಾರೆ.

ಹುಬ್ಬಳ್ಳಿ ತಾಲ್ಲೂಕಿನ ನೂಲ್ವಿ ಕ್ರಾಸ್ ಸಮೀಪದಲ್ಲಿ ಕಳೆದ ಐದಾರು ವರ್ಷಗಳಲ್ಲಿಯೇ ನೂರಾರು ರಸ್ತೆ ಅಪಘಾತಗಳಲ್ಲಿ ಮೃತಪಟ್ಟಿದ್ದು. ನೂರಾರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ರಸ್ತೆ ಅಪಘಾತಗಳನ್ನು ತಪ್ಪಿಸಬೇಕು ಎನ್ನುವ ನಿಟ್ಟಿನಲ್ಲಿ ನಿರಂತರವಾಗಿ ಈ ಭಾಗದ ಜನರಿಂದ ಅಪಘಾತಗಳನ್ನು ತಪ್ಪಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಬೇಡಿಕೆಗಳು ಕೇಳಿ ಬರುತ್ತಿದ್ದವು. ಇದೀಗ ಈ ಭಾಗದ ಸಂಸದರು ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಮುತುವರ್ಜಿಯಿಂದ 12.5 ಕೋಟಿ ರೂಪಾಯಿ ವೆಚ್ಚದಲ್ಲಿ ಕೆಳ ಸೇತುವೆ ನಿರ್ಮಾಣಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ.
ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಕೆಳ ಸೇತುವೆ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಭೂಮಿ ಪೂಜೆ ನೆರವೇರಿಸಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಅವರ ಕಾಲದಲ್ಲಿಯೇ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಹೊಸ ಅರ್ಥ ಬಂದಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.
ಈ ಭಾಗವು ಸಾವಿನ ಹೆದ್ದಾರಿ ಅಂತಲೇ ಫೇಮಸ್ ಆಗಿತ್ತು. ಯಾಕೆಂದರೆ ಅಷ್ಟೊಂದು ಅಪಘಾತಗಳು ಇಲ್ಲಿ ಸಂಭವಿಸುತ್ತಿದ್ದವು. ಕಳೆದ ಮೂರು ವರ್ಷಗಳ ಹಿಂದೆ ಭೀರಕ ರಸ್ತೆ ಅಪಘಾತ ಸಂಭವಿಸಿತ್ತು. ಅಲ್ಲದೆ ಕಳೆದ ಒಂದು ದಶಕದ ಅವಧಿಯಲ್ಲಿ ಇಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲ್ಲೇ ಇವೆ.
ಇನ್ನೂ ಪೂಣಾ-ಬೆಂಗಳೂರು ರಸ್ತೆಯ ನೂಲ್ವಿ ಕ್ರಾಸನಲ್ಲಿ 12.5 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ರಸ್ತೆ ಕೇಳಸೇತುವೆ ನಿರ್ಮಾಣ ಭೂಮಿ ಪೂಜೆಯ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಮೂಲಕ ಬಹುದಿನಗಳ ಜನರ ಬೇಡಿಕೆಗೆ ಈಗ ಫಲ ಸಿಕ್ಕಂತಾಗಿದೆ. ಇದೇ ಸಂದರ್ಭದಲ್ಲಿ ಕೂಡಲೇ ಕಾಮಗಾರಿ ಆರಂಭಗೊಂಡು ಜನರು ನಿಟ್ಟುಸಿರು ಬಿಟ್ಟು ಓಡಾಡುವಂತಾಗಬೇಕಿದೆ. ಅಲ್ಲದೆ ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಕೇಂದ್ರ ಸಚಿವರಿಗೆ ಜನರು ಕೂಡ ಅಭಿನಂದನೆ ಸಲ್ಲಿಸಿದ್ದಾರೆ.












Click it and Unblock the Notifications