E-Khata: ಇ - ಖಾತಾ ಗೊಂದಲಗಳಿಗೆ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯಿಂದ ಬ್ರೇಕ್!
ರಾಜ್ಯದಲ್ಲಿ ಆಸ್ತಿ ತೆರಿಗೆ ಸಂಗ್ರಹ ಸುಧಾರಿಸುವುದು ಹಾಗೂ ಆಸ್ತಿಗಳ ಸಂರಕ್ಷಣೆ ಸೇರಿದಂತೆ ವಿವಿಧ ಮಾದರಿಗಳನ್ನು ರಾಜ್ಯ ಸರ್ಕಾರವು ತೆಗೆದುಕೊಂಡಿದೆ. ಬೆಂಗಳೂರಿನಲ್ಲಿ ಎಲ್ಲಾ ಮಾದರಿಯ ಆಸ್ತಿಗಳಿಗೆ ಇ - ಖಾತಾ ಆಸ್ತಿ ಕಡ್ಡಾಯ ಮಾಡಲಾಗಿದೆ. ಇದೇ ಮಾದರಿಯನ್ನು ರಾಜ್ಯದಾದ್ಯಂತ ರಾಜ್ಯ ಸರ್ಕಾರವು ಕಡ್ಡಾಯ ಮಾಡಿದೆ. ಇದೀಗ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲೂ ಇ - ಖಾತಾ ಕಡ್ಡಾಯ ಮಾಡಲಾಗಿದ್ದು. ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯಿಂದ ಹೊಸ ಅಭಿಯಾನವನ್ನು ನಡೆಸಲಾಗುತ್ತಿದೆ. ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯು ಇ - ಆಸ್ತಿ ಹಾಗೂ ಇ -ಖಾತಾಗೆ ಸಂಬಂಧಿಸಿದಂತೆ ಯಾವ ಸುಧಾರಣಾ ಕ್ರಮಗಳನ್ನು ಅನುಸರಿಸುತ್ತಿದೆ. ಮೇಳಕ್ಕೆ ಜನರ ಪ್ರತಿಕ್ರಿಯೆ ಹೇಗಿದೆ ಎನ್ನುವ ವಿವರ ಇಲ್ಲಿದೆ.
ಇ - ಖಾತಾಗೆ ಸಂಬಂಧಿಸಿದಂತೆ ರಾಜ್ಯದ ಪ್ರಮುಖ ಮಹಾನಗರ ಪಾಲಿಕೆಗಳಲ್ಲಿ ಗೊಂದಲ ಹಾಗೂ ಸಮಸ್ಯೆ ಉಂಟಾಗಿದೆ. ಆದರೆ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯು ಇ - ಖಾತಾಗೆ ಸಂಬಂಧಿಸಿದಂತೆ ಸಾರ್ವಜನಿಕರ ಗೊಂದಲಗಳನ್ನು ಪರಿಹರಿಸುತ್ತಿದೆ. ಅಲ್ಲದೆ ಆಸ್ತಿಗಳಿಗೆ ಸಂಬಂಧಿಸಿದ ಗೊಂದಲ ಹಾಗೂ ಇ - ಖಾತಾಗಾಗಿ ವಿಶೇಷ ಅಭಿಯಾನವನ್ನು ನಡೆಸಲಾಗುತ್ತಿದೆ. ಹುಬ್ಬಳ್ಳಿ - ಧಾರವಾಡ ಪಾಲಿಕೆಯು ವತಿಯಿಂದ ಎಲ್ಲಾ ವಲಯ ಕಚೇರಿಗಳಲ್ಲೂ "ಇ-ಆಸ್ತಿ ಮೇಳ ಮತ್ತು ಆಸ್ತಿ ತೆರಿಗೆ ಮೇಳ"ವನ್ನು ಆಯೋಜಿಸಲಾಗಿದೆ. ಇದಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಫೆಬ್ರವರಿಯಿಂದ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಈ ಮೇಳವನ್ನು ಪಾಲಿಕೆಯ ಎಲ್ಲಾ ವಲಯ ಕಚೇರಿಗಳಲ್ಲೂ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಪಾಲಿಕೆಯ ಈ ಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಆಸ್ತಿಗಳಿಗೆ ಸಂಬಂಧಿಸಿದ ಪ್ರಮುಖ ಸೇವೆಗಳು ಲಭ್ಯ
ಅವಳಿ ನಗರಗಳಾದ ಹುಬ್ಬಳ್ಳಿ - ಧಾರವಾಡದಲ್ಲಿ ಆಸ್ತಿದಾರರಿಗೆ ಅನುಕೂಲ ಹಾಗೂ ಗೊಂದಲಗಳನ್ನು ತಪ್ಪಿಸುವ ಉದ್ದೇಶದಿಂದ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ಇ - ಆಸ್ತಿ ಹಾಗೂ ಆಸ್ತಿ ತೆರಿಗೆ ಮೇಳವನ್ನು ಆಯೋಜಿಸಲಾಗುತ್ತಿದೆ. ಇದಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಮೇಳ / ಅಭಿಯಾನದಲ್ಲಿ ಆಸ್ತಿಗೆ ಸಂಬಂಧಿಸಿದ 5 ಪ್ರಮುಖ ಸೇವೆಗಳನ್ನು ನೀಡಲಾಗುತ್ತಿದೆ.
* ಸಾರ್ವಜನಿಕರಿಗೆ ಅವರ ಆಸ್ತಿಗಳಿಗೆ ಇ - ಆಸ್ತಿ ನೀಡುವ ಸೇವೆ
* ಆಸ್ತಿ ತೆರಿಗೆಯಿಂದ ಹೊರಗುಳಿದ ಆಸ್ತಿಗಳ ನೋಂದಣಿ
* ಮಾಲೀಕತ್ವ ಬದಲಾವಣೆ / ಖಾತಾ ಬದಲಾವಣೆ
* ಆಸ್ತಿಗಳ ವಿವರದಲ್ಲಿ ಲೋಪದೋಷಗಳ ತಿದ್ದುಪಡಿ
* ಆಸ್ತಿ ತೆರಿಗೆ ಮತ್ತು ನೀರಿನ ಟ್ಯಾಕ್ಸ್ ನೇರವಾಗಿ ಕಟ್ಟಲು ಸಹಕಾರಿ.
ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ: ಆಸ್ತಿಗೆ ಸಂಬಂಧಿಸಿದ ಎಲ್ಲಾ ಸೇವೆಗಳನ್ನು ಒಂದೇ ಸೂರಿನ ಅಡಿಯಲ್ಲಿ ಕೊಡುತ್ತಿರುವ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಕ್ರಮದ ಬಗ್ಗೆ ಸಾರ್ವಜನಿಕರಿಂದ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗಿದೆ. ಆಸ್ತಿಗಳಿಗೆ ಸಂಬಂಧಿಸಿ ಗೊಂದಲ ಸೃಷ್ಟಿಯಾಗುತ್ತಿತ್ತು. ಅಲ್ಲದೆ ಕಚೇರಿಗೆ ಅಲೆದಾಡಬೇಕಿತ್ತು. ಆದರೆ ಇದೀಗ ಹೊಸ ಕ್ರಮದಿಂದ ಸಹಾಯವಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ. ಸಾರ್ವಜನಿಕರಿಂದ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗಿರುವುದನ್ನು ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಹಂಚಿಕೊಂಡಿದೆ.












Click it and Unblock the Notifications