ಫೆ.3ರಿಂದ ಆರಂಭವಾಗುವ ರಾಜ್ಯ ಮಟ್ಟದ ಒಲಿಂಪಿಕ್ಸ್ ಗೆ ಸಕಲ ಸಿದ್ಧತೆ
ಹುಬ್ಬಳ್ಳಿ, ಜನವರಿ. 25 : ರಾಜ್ಯಮಟ್ಟದ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಫೆಬ್ರವರಿ 3ರಿಂದ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ನಡೆಸಲು ಎಲ್ಲಾ ರೀತಿ ಸಕಲ ಸಿದ್ಧತೆಗಳು ನಡೆದಿವೆ.
ಧಾರವಾಡ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ನಗರದ ನೆಹರು ಮೈದಾನದಲ್ಲಿ ಕ್ರೀಡಾಕೂಟದ ಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿ, ಈ ರಾಜ್ಯ ಮಟ್ಟದ ಒಲಿಂಪಿಕ್ಸ್ ನಲ್ಲಿ ಒಟ್ಟು 4,500 ಕ್ರೀಡಾಪಟುಗಳು, 500 ತಾಂತ್ರಿಕ ಸಿಬ್ಬಂದಿ ಹಾಗೂ ಇತರೆ 500 ಜನರು ಸೇರಿದಂತೆ ಒಟ್ಟು 5,500 ಜನರು ಈ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೆ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. [ಫೆಬ್ರವರಿಯಲ್ಲಿ ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ]

ಕ್ರೀಡೆಗಳು ಎಲ್ಲೆಲ್ಲಿ ?; ಧಾರವಾಡದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಉದ್ಘಾಟನೆಗೊಳ್ಳಲಿದ್ದು ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯ, ಯುನಿವರ್ಸಿಟಿ ಪಬ್ಲಿಕ್ ಸ್ಕೂಲ್ ಆವರಣ, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ, ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ವಿವಿಧ ಕ್ರೀಡೆಗಳು ನಡೆಯಲಿವೆ.
ಈಜು ಸ್ಪರ್ಧೆಗಳು ಹುಬ್ಬಳ್ಳಿಯ ಅಂತಾರಾಷ್ಟ್ರೀಯ ಮಟ್ಟದ ಈಜುಗೊಳದಲ್ಲಿ, ನೆಹರು ಮೈದಾನದಲ್ಲಿ ಕಬಡ್ಡಿ ಮತ್ತು ವಾಲಿಬಾಲ್, ಗೋಕುಲ ರಸ್ತೆಯಲ್ಲಿ ಸೈಕ್ಲಿಂಗ್ ಸ್ಪರ್ಧೆಗಳು ಜರುಗಲಿವೆ.
ಹುಬ್ಬಳ್ಳಿಯಲ್ಲಿ ಜರುಗುವ ಸ್ಪರ್ಧಾಳುಗಳಿಗೆ ನಗರದ ಲ್ಯಾಮಿಂಗ್ಟನ್ ಹೈಸ್ಕೂಲ್ನಲ್ಲಿ ವಾಸ್ತವ್ಯ ಕಲ್ಪಿಸಲಾಗುವುದು. ಮತ್ತು ಎಲ್ಲರಿಗೆ ಸಾರಿಗೆ ವ್ಯವಸ್ಥೆ ಮತ್ತು ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಆಯ್ಕೆಯಲ್ಲಿ ಅನ್ಯಾಯವಾಗಿಲ್ಲ: ಕೆಲವರು ಕ್ರೀಡಾಕೂಟಕ್ಕೆ ಆಯ್ಕೆ ಮಾಡುವಲ್ಲಿ ಅನ್ಯಾಯವಾಗಿದೆ ಎಂದು ದೂರುತ್ತಿದ್ದಾರೆ. ಆದರೆ, ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಪ್ರಶಸ್ತಿ ಪಡೆದವರನ್ನು ಈ ಕ್ರೀಡಾಕೂಟಕ್ಕೆ ಆಯ್ಕೆ ಮಾಡಲಾಗಿದೆ ಎಂದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications