ಹುಬ್ಬಳ್ಳಿ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿ ಸದ್ದಾಂ ಹುಸೇನ್ ಮೇಲೆ ಗುಂಡಿನ ದಾಳಿ
ಹುಬ್ಬಳ್ಳಿ ಮೇ 4: ಹುಬ್ಬಳ್ಳಿಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸದ್ದಾಂ ಹುಸೇನ್ ಮೇಲೆ ಗುಂಡಿನ ದಾಳಿ ಮಾಡಲಾಗಿದೆ.
ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಸದ್ದಾಂ ಹುಸೇನ್ ಪರಾರಿಯಾಗಲು ಯತ್ನಿಸಿದ್ದನು. ಈ ವೇಳೆ ಪೊಲೀಸರು ಆರೋಪಿ ಸದ್ದಾಂ ಹುಸೇನ್ ಎಡಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂಗಮೇಶ ಹಾಗೂ ಕಾನ್ಸ್‌ಟೇಬಲ್ ಅರುಣ್ ಅವರಿಗೆ ಹಲ್ಲೆಯಿಂದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಗಾಯಗೊಂಡ ಆರೋಪಿ ಸದ್ದಾಂ ಹುಸೇನ್‌ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಸದ್ದಾಂ ಹುಸೇನ್ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆರೆ ಹಿಡಿದಿದ್ದಾರೆ. ಬಳಿಕ ಆರೋಪಿ ಸದ್ದಾಂ ಹುಸೇನ್ ಪೊಲೀಸ್ ವಾಹನ ಹತ್ತುವಾಗ ಅಧಿಕಾರಿಗಳ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಪರಾರಿಯಾಗಲು ಯತ್ನಿಸಿದ್ದರು.
ಆರೋಪಿ ಸದ್ದಾಂ ಹುಸೇನ್ ಲಿಂಬುವಾಲೆ ಹುಬ್ಬಳ್ಳಿಯ ಈಶ್ವರನಗರದವನು ಎಂದು ಗುರುತಿಸಲಾಗಿದೆ. ಅಪ್ರಾಪ್ತ ಜತೆ ಸಲುಗೆ ಬೆಳೆಸಿ, ಪ್ರೀತಿಸುವಂತೆ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಮನೆಯಲ್ಲಿ ಹೇಳಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾನೆ. ಕಳೆದ ಮೂರ್ನಾಲ್ಕು ದಿನದಿಂದ ಬಾಲಕಿ ವಾಂತಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಿದ್ದರು.
ಆದರೂ ವಾಂತಿ ಕಡಿಮೆಯಾಗದಿದ್ದಾಗ ವೈದ್ಯರು ಪರೀಕ್ಷೆಗೆ ಒಳಪಡಿಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಆ ವೇಳೆ ಬಾಲಕಿ ವಿಚಾರಿಸಿದಾಗ ಸದ್ದಾಂ ಹುಸೇನ್ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಬಾಲಕಿ ಪೋಷಕರು ದೂರು ದಾಖಲಿಸಿದ್ದಾರೆ.
ಆರೋಪಿ ಸದ್ದಾಂ ಹುಸೇನ್ ವಿರುದ್ಧ ಐಪಿಸಿ 376, 506 ಜಾತಿ ನಿಂದನೆ ಮತ್ತು ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ಚಿಕಿತ್ಸೆಗಾಗಿ ಇಲ್ಲಿನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಶುಕ್ರವಾರ ಸಂಝೆ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದವು.












Click it and Unblock the Notifications