ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿ; ಕಿಮ್ಸ್ ಆವರಣದಲ್ಲಿ 24*7 ಸ್ವ್ಯಾಬ್ ಸಂಗ್ರಹ, ಚಿಕಿತ್ಸೆ

|
Google Oneindia Kannada News

ಹುಬ್ಬಳ್ಳಿ, ಜನವರಿ 18; ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಕೋವಿಡ್ ಸೋಂಕಿನ ಲಕ್ಷಣಗಳು ಇರುವವರ ಸ್ವ್ಯಾಬ್ ಸಂಗ್ರಹ ಕಾರ್ಯ ಸಹ ನಡೆಯುತ್ತಿದೆ.

ಧಾರವಾಡ ಜಿಲ್ಲಾಡಳಿತ ಸಹ ಕೋವಿಡ್ ಸೋಂಕು ಹರಡುವಿಕೆ ತಡೆಯಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿವೆ. ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಹುಬ್ಬಳ್ಳಿ ಕಿಮ್ಸ್ ಆವರಣದಲ್ಲಿ ದಿನದ 24 ಗಂಟೆಗಳ ಕಾಲವೂ ಸ್ವ್ಯಾಬ್ ಸಂಗ್ರಹ, ಸೋಂಕಿತರ ಭೌತಿಕ ತಪಾಸಣೆ (ಫಿಜಿಕಲ್ ಟ್ರಯೇಜಿಂಗ್) ಹಾಗೂ ಚಿಕಿತ್ಸೆಗೆ ದಾಖಲಿಸುವ ವ್ಯವಸ್ಥೆ ಪ್ರಾರಂಭಿಸಲಾಗಿದೆ.

ಆಡಳಿತ ಸಹಾಯಕ ಹುದ್ದೆಗೆ ಅರ್ಜಿ ಕರೆದ ಧಾರವಾಡ ಜಿಲ್ಲಾ ಪಂಚಾಯಿತಿ ಆಡಳಿತ ಸಹಾಯಕ ಹುದ್ದೆಗೆ ಅರ್ಜಿ ಕರೆದ ಧಾರವಾಡ ಜಿಲ್ಲಾ ಪಂಚಾಯಿತಿ

ಹುಬ್ಬಳ್ಳಿ ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂತರಠಾಣಿ ಈ ಕುರಿತು ಮಾಹಿತಿ ನೀಡಿದ್ದಾರೆ. "ಹಿಂದಿನ ಎರಡು ಕೋವಿಡ್ ಅಲೆಗಳನ್ನು ಹುಬ್ಬಳ್ಳಿಯ ಕಿಮ್ಸ್ ಸಮರ್ಥವಾಗಿ ಎದುರಿಸಿ, ಸೋಂಕಿತರಿಗೆ ಉತ್ತಮ ಚಿಕಿತ್ಸೆ ಒದಗಿಸಿದೆ. ಈ ಅನುಭವದ ಆಧಾರದಲ್ಲಿ ಪ್ರಸ್ತುತ ಮೂರನೇ ಅಲೆಯನ್ನೂ ಕೂಡ ನಿರ್ವಹಿಸಲು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಅಣಿಗೊಳಿಸಲಾಗಿದೆ" ಎಂದು ಹೇಳಿದ್ದಾರೆ.

ಕೋವಿಡ್ ಸೋಂಕಿತರು ಟೆಲಿಮೆಡಿಸಿನ್ ಸೇವೆ ಪಡೆಯುವುದು ಹೇಗೆ? ಕೋವಿಡ್ ಸೋಂಕಿತರು ಟೆಲಿಮೆಡಿಸಿನ್ ಸೇವೆ ಪಡೆಯುವುದು ಹೇಗೆ?

Hubballi KIMS Now 24*7 Swab Collection And Covid Patients Treatment Facility

ಕಿಮ್ಸ್ ಆವರಣದ ಮೇಕ್ ಶಿಫ್ಟ್ ಆಸ್ಪತ್ರೆಯ ಒಂದು ಭಾಗದಲ್ಲಿ ಸ್ವ್ಯಾಬ್ ಸಂಗ್ರಹಣೆ ಘಟಕವಿದೆ. ದಿನದ 24 ಗಂಟೆಗಳ ಕಾಲವೂ ಅಲ್ಲಿ ಸ್ವ್ಯಾಬ್ ಸಂಗ್ರಹಿಸಲಾಗುತ್ತದೆ. ಸಂಶಯಾಸ್ಪದ ಲಕ್ಷಣಗಳಿರುವ ಯಾವುದೇ ವ್ಯಕ್ತಿ ಅಲ್ಲಿಗೆ ಬಂದು ಸ್ವ್ಯಾಬ್ ನೀಡಬಹುದಾಗಿದೆ.

ಕೋವಿಡ್ 3ನೇ ಅಲೆ: ವಯಸ್ಕರಿಗೆ ಹೋಲಿಸಿದರೆ ಮಕ್ಕಳಲ್ಲಿ ಸೋಂಕು ಕಡಿಮೆ ಕೋವಿಡ್ 3ನೇ ಅಲೆ: ವಯಸ್ಕರಿಗೆ ಹೋಲಿಸಿದರೆ ಮಕ್ಕಳಲ್ಲಿ ಸೋಂಕು ಕಡಿಮೆ

ಅಲ್ಲದೇ ಸೋಂಕು ದೃಢಪಟ್ಟ ವ್ಯಕ್ತಿಗಳ ಭೌತಿಕ ತಪಾಸಣೆ (ಫಿಜಿಕಲ್ ಟ್ರಯೇಜಿಂಗ್ ) ಕೈಗೊಳ್ಳಲು ಇದೇ ಮೇಕ್ ಶಿಫ್ಟ್ ಆಸ್ಪತ್ರೆಯ ಒಂದು ಭಾಗದಲ್ಲಿ ಸ್ಥಳ ನಿಗದಿಪಡಿಸಲಾಗಿದೆ. ಅಲ್ಲಿ ಸೋಂಕಿತರನ್ನು ಖುದ್ದಾಗಿ ಪರಿಶೀಲಿಸಿದ ಬಳಿಕ ಅಗತ್ಯಕ್ಕೆ ಅನುಗುಣವಾಗಿ ಹೋಂ ಐಸೋಲೇಷನ್, ಕೋವಿಡ್ ಕೇರ್ ಸೆಂಟರ್ ಅಥವಾ ಆಸ್ಪತ್ರೆಗೆ ದಾಖಲಾಗಲು ಸೂಚಿಸಲಾಗುತ್ತದೆ.

ಇನ್ನು ಕಿಮ್ಸ್‌ನ ವೇದಾಂತ ಕೋವಿಡ್ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಕೋವಿಡ್ ಕ್ಯಾಸುವಲ್ಟಿ ಪ್ರಾರಂಭಿಸಲಾಗಿದೆ. ದಿನದ 24 ಗಂಟೆಗಳ ಕಾಲವೂ ಇಲ್ಲಿ ಕೋವಿಡ್ ಸೋಂಕಿತರನ್ನು ಚಿಕಿತ್ಸೆಗೆ ದಾಖಲಿಸಿಕೊಳ್ಳಲಾಗುತ್ತದೆ. ಇಲ್ಲಿ ಬೆಡ್, ವೈದ್ಯಕೀಯ ಆಮ್ಲಜನಕ ಸೇರಿದಂತೆ ಎಲ್ಲ ಅಗತ್ಯ ಪರಿಕರಗಳ ವ್ಯವಸ್ಥೆ ಮಾಡಲಾಗಿದೆ.

ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ, ಸ್ಯಾನಿಟೈಸರ್ ಬಳಕೆ ಮೂಲಕ ಕೋವಿಡ್ ಸೋಂಕು ಬಾರದಂತೆ ಪ್ರತಿಯೊಬ್ಬರೂ ಎಚ್ಚರವಹಿಸುವುದು ಅಗತ್ಯವಾಗಿದೆ ಎಂದು ಕರೆ ನೀಡಲಾಗಿದೆ.

ಸಹಾಯವಾಣಿ ಆರಂಭ; ಧಾರವಾಡ ಜಿಲ್ಲಾಡಳಿತ ಕೋವಿಡ್ 3ನೇ ಅಲೆಯನ್ನು ನಿಯಂತ್ರಿಸಿ, ಜಿಲ್ಲೆಯಲ್ಲಿನ ಸೋಂಕಿತರಿಗೆ ಅಗತ್ಯ ಮಾಹಿತಿ ನೀಡಿ ಸಕಾಲಕ್ಕೆ ನೆರವು ನೀಡಲು ಕೋವಿಡ್ ಕಂಟ್ರೋಲ್ ರೂಂ ಮತ್ತು ಸಹಾಯವಾಣಿ ಆರಂಭಿಸಿದೆ.

ಸೋಂಕು ದೃಢಪಟ್ಟವರಿಗೆ ಅಗತ್ಯ ಮಾಹಿತಿ ನೀಡಲು, ಆಸ್ಪತ್ರೆಗೆ ದಾಖಲಾಗಲು ಬಯಸಿದರೆ ಕೋವಿಡ್ ವಾರ್‌ ರೂಂ ಸಿಬ್ಬಂದಿ ಅಗತ್ಯ ಮಾರ್ಗದರ್ಶನ ನೀಡಲಿದ್ದಾರೆ. ಹುಬ್ಬಳ್ಳಿಯ ದೇಶಪಾಂಡೆ ಫೌಂಡೇಶನ್‍ನಲ್ಲಿ ಆರಂಭಿಸಿರುವ ಸಹಾಯವಾಣಿಗೆ ದಿನದ 24 ಗಂಟೆಯೂ ಕಾರ್ಯ ನಿರ್ವಹಣೆ ಮಾಡಲಿದೆ.

ಒಟ್ಟು ಮೂರು ಶಿಫ್ಟ್‌ಗಳಲ್ಲಿ ಕಾರ್ಯ ನಿರ್ವಹಣೆ ಮಾಡಲು ಸಿಬ್ಬಂದಿ ನೇಮಕ ಮಾಡಲಾಗಿದೆ. ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನೀಡಲು ಕಿಮ್ಸ್, ಜಿಲ್ಲಾ ಆಸ್ಪತ್ರೆ, ತಾಲೂಕಾ ಆಸ್ಪತ್ರೆಗಳು, ಎಲ್ಲ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಹಾಸಿಗೆಗಳನ್ನು ಮೀಸಲಿಡಲಾಗಿದೆ.

ಕೋವಿಡ್‌ಗೆ ಸಂಬಂಧಿಸಿದ ಆರೋಗ್ಯ ಸಲಹೆ, ಯಾವುದೇ ತೊಂದರೆ, ಸಮಸ್ಯೆಗಳಿದ್ದಲ್ಲಿ ಸಹಾಯಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ 1077, ಆರೋಗ್ಯ ಸಹಾಯವಾಣಿ 104 ಮತ್ತು ಹುಬ್ಬಳ್ಳಿ ದೇಶಪಾಂಡೆ ಫೌಂಡೇಶನ್‍ನಲ್ಲಿ ಆರಂಭಿಸಿರುವ ಸಹಾಯವಾಣಿ 8047168111 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Recommended Video

Usman Khawajaರನ್ನು stage ಮೇಲೆ ಕರೆಯಲು Pat Cummins ಮಾಡಿದ್ದೇನು | Oneindia Kannada

ಸೋಮವಾರ ಹೆಲ್ತ್ ಬುಲೆಟಿನ್ ಪ್ರಕಾರ ಕರ್ನಾಟಕದಲ್ಲಿ 27156 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದ ಸಕ್ರಿಯ ಪ್ರಕರಣಗಳು 217297. ಧಾರವಾಡ ಜಿಲ್ಲೆಯಲ್ಲಿ 784 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯ ಸಕ್ರಿಯ ಪ್ರಕರಣಗಳು 3149.

English summary
Karnataka Institute of Medical Sciences (KIMS) Hubballi now 24*7 swab collection and Covid patients treatment facility.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X