ಭಯೋತ್ಪಾದಕ ಸಂಘಟನೆ ನಂಟು ಹೊಂದಿದ್ದ ಹುಬ್ಬಳ್ಳಿ ವ್ಯಕ್ತಿ ಬಂಧನ
ಹುಬ್ಬಳ್ಳಿ, ಅಕ್ಟೋಬರ್ 22: ಅಂತರರಾಷ್ಟ್ರೀಯ ಭಯೋತ್ಪಾದಕ ಸಂಘಟನೆ ಜತೆ ನಂಟು ಹೊಂದಿದ್ದ ಹುಬ್ಬಳ್ಳಿ ಮೂಲದ ವ್ಯಕ್ತಿಯನ್ನು ಐಎಸ್ ಡಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಹಿಂದೂ ಸಂಘಟನೆ ಮುಖಂಡ ಕಲ್ಮೇಶ ತಿವಾರಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ಪೊಲೀಸರು ಅರವಿಂದ ನಗರದ ಮೊಹಮ್ಮದ್ ಜಾಫರ್ ಸಾಧೀಕ್ ನನ್ನು ಬಂಧಿಸಿದ್ದಾರೆ.
ಹುಬ್ಬಳ್ಳಿಯ ರೈಲ್ವೆ ಇಲಾಖೆಯ ಕಾರ್ಯಾಗಾರದಲ್ಲಿ ಕಳೆದ ಹಲವು ವರ್ಷಗಳಿಂದ ನೌಕರನಾಗಿ ಮಹಮ್ಮದ್ ಕೆಲಸ ಮಾಡುತಿದ್ದ. ಕೆಲ ವರ್ಷಗಳಿಂದ ಸಿಮಿ ಸೇರಿದಂತೆ ಹಲವು ಸಂಘಟನೆಗಳ ಜತೆ ಗುರುತಿಸಿಕೊಂಡಿದ್ದ.

ಸೂಕ್ತ ಮಾಹಿತಿ ಮೇರೆಗೆ ಹಳೆ ಹುಬ್ಬಳ್ಳಿ ಪೊಲೀಸ್ ಮತ್ತು ಎಸ್ ಐಡಿ ಪೊಲೀಸರು ಜಂಟಿ ಕಾರ್ಯಾಚರಣೆ ಮಾಡಿ ಮಹಮ್ಮದ್ ನನ್ನು ಬಂಧಿಸಿದ್ದಾರೆ. ಸದ್ಯ ಆಂತರಿಕ ಭದ್ರತಾ ಸಿಬ್ಬಂದಿ ವಿಚಾರಣೆ ಬಳಿಕ ರಾಷ್ಟ್ರೀಯ ಭದ್ರತಾ ತಂಡದ ವಶಕ್ಕೆ ಆರೋಪಿಯನ್ನು ಒಪ್ಪಿಸಲಿದ್ದಾರೆ.












Click it and Unblock the Notifications