ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
ಬೆಂಗಳೂರು, ಏಪ್ರಿಲ್ 19: ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಹುಬ್ಬಳ್ಳಿಯಲ್ಲಿನ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಹಿರೇಮಠ ಕೊಲೆ ನಡೆದಿದೆ. ಕಿಮ್ಸ್‌ನ ಶಾವಾಗಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದರು. ಪ್ರಕರಣವನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.
ಮೃತ ಯುವತಿ ನೇಹಾ ಹಿರೇಮಠ ಹತ್ಯೆ ಕುರಿತು ಮಾಹಿತಿ ಪಡೆದು ಮಾತನಾಡಿದ ಪ್ರಹ್ಲಾದ್ ಜೋಶಿ ಅವರು, ನೇಹಾ ಹಿರೇಮಠ ಎಂಬ ಯುವತಿ ಬರ್ಬರ ಹತ್ಯೆಯಾಗಿದೆ. ಇದನ್ನು ನೋಡಿದರೆ ಕಾನೂನು ಸುವ್ಯವಸ್ಥಿತ ರಾಜ್ಯದಲ್ಲಿ ಹದೆಗಟ್ಟಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ ಎಂಬುದು ಗೊತ್ತಾಗುತ್ತದೆ.

ರಾಜ್ಯದಲ್ಲಿ ಸಮಾಜ ಘಾತಕರಿಗೆ ಭಯ ಇಲ್ಲ
ಮೊನ್ನೆಯಷ್ಟೇ ಐದು ಜನ ಯುವಕರು ಬೈಕ್ ಮೇಲೆ ಹೊಗೋವಾಗ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಹ್ಯೇಯ ಘಟನೆ ನಡೆದಿತ್ತು. ಸರ್ಕಾರದ ತುಷ್ಟೀರಣ ನೀತಿ ಕಾರಣದಿಂದ ರಾಜ್ಯದಲ್ಲಿ ಸಮಾಜ ಘಾತಕರಿಗೆ ಭಯ ಇಲ್ಲದಂತಾಗಿದೆ. ಇಂತಹ ಘಟನೆಗಳನ್ನು ಕಾಂಗ್ರೆಸ್ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು.
ನಾನು ಅವರ ಮೃತ ಯುವತಿ ತಂದೆ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅವರೊಂದಿಗೆ ಮಾತನಾಡಿದ್ದೇನೆ. ಪುತ್ರಿ ನೇಹಾ ಯಾವುದೇ ಪ್ರೀತಿ ಮಾಡಿಲ್ಲ. ಲವ್ ಮಾಡಿದರೆ ಅವರನ್ನು ಕೊಲೆ ಮಾಡಬೇಕು ಎಂದೇನಾದರೂ ಇದಿಯೇ? ಎಂದು ಪ್ರಶ್ನಿಸಿದರು. ಲವ್ ಜಿಹಾದ್ ಬಗ್ಗೆ ಅವರ ತಂದೆಯೇ ಮಾತನಾಡಿದ್ದಾರೆ.
ಗೃಹ ಸಚಿವರು ಏನು ಹೇಳುತ್ತಾರೆ?
ಈ ಕೊಲೆ ಪ್ರಕರಣ ಬಗ್ಗೆ ಸಮಗ್ರ ತನಿಖೆ ಆಗಬೇಕು. ಅಮಾಯಕ ಅಮಾಯಕ ಹೆಣ್ಣು ಮಗಳ ಕೊಲೆಯಾಗಿದೆ. ಈ ಕುರಿತು ರಾಜ್ಯದ ಗೃಹ ಸಚಿವರ ಜಿ.ಪರಮೇಶ್ವರ ಅವರು ಏನು ಉತ್ತರ ಕೊಡುತ್ತಾರೆ? ಎಂದು ಕೇಳಿದರು.

ಈ ಹಿಂದೆ ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ, ಪ್ರಕರಣ, ಹುಬ್ಬಳ್ಳಿ ಗಲಭೆ ಪ್ರಕರಣಗಳು ನಡೆದಿವೆ. ಹೀಗೆ ಮುಸ್ಲಿಂ ಲೀಗ್ ಧ್ವಜ ಇರಬಹುದು ಎಲ್ಲವೂ ಇಂತವರಿಗೆ ಪ್ರಚೋದನೆ ನೀಡಿದಂತಾಗುತ್ತಿದೆ. ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಒತ್ತಾಯಿಸಿದರು.
ಯಾರು ವಕೀಲರು ಕೂಡ ಆರೋಪಿ ಪರ ವಕಾಲತ್ತು ವಹಿಸಿಕೊಳ್ಳಬಾರದು ಎಂದು ಮನವಿ ಮಾಡಿಕೊಳ್ಳುತ್ತೇನೆ. ಈ ಪ್ರಕರಣವನ್ನ ಲವ್ ಜಿಹಾದ್ ಆಯಾಮದಲ್ಲಿ ತನಿಖೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಪ್ರತಿಭಟನೆಗೆ ಕರೆ: ಬಿಗಿ ಬಂದೋಬಸ್ತ್
ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಬೀಕರ ಕೊಲೆ ಪ್ರಕರಣ ವಿರೋಧಿಸಿ ಶುಕ್ರವಾರ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಕರೆಗೆ ಕೊಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿವಿಬಿ ಕಾಲೇಜ್ ನಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಒದಗಿಸಲಾಗಿದೆ.
ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಿರುವ ಡಿಸಿಪಿ ರಾಜೀವ್ ಅವರ ನೇತೃತ್ವದಲ್ಲಿ ಎಲ್ಲ ಮುನ್ನೆಚ್ಚರಿಕೆ ವಹಿಸಲಾಗಿದೆ. ಬಿವಿಬಿ ಕಾಲೇಜು ಆವರಣದಲ್ಲಿ ಪೊಲೀಸರು ಬಿಡು ಬಿಟ್ಟಿದ್ದಾರೆ.
ಒಂದು ಕೆಎಸ್ಆರ್‌ಪಿ ತುಕಡಿ ನಿಯೋಜನೆ ಮಾಡಿದ್ದಾರೆ. 3 ಸಿಪಿಐ 5 ಪಿಎಸ್ಐ ಹಾಗೂ 50 ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ರಾಜೀವ್ ತಿಳಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications