ಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿದವರನ್ನು ಮತ್ತೆ ಬಂಧಿಸಿದ ಪೊಲೀಸರು
ಹುಬ್ಬಳ್ಳಿ, ಫೆಬ್ರವರಿ 17: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಹುಬ್ಬಳ್ಳಿ ಕಾಲೇಜಿನಲ್ಲಿ ಓದುತ್ತಿದ್ದ ಮೂವರು ಕಾಶ್ಮೀರಿ ಯುವಕರನ್ನು ಇಂದು ಮತ್ತೆ ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿಯ ಕೆಎಲ್‌ಇ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದ ಮೂವರು ಕಾಶ್ಮೀರಿ ಯುವಕರು ಪಾಕಿಸ್ತಾನದ ಪರವಾಗಿ ಘೋಷಣೆಗಳನ್ನು ಕೂಗಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರೇ ಪೊಲೀಸರಿಗೆ ದೂರು ನೀಡಿದ್ದರು.
ದೂರಿನ ಅನ್ವಯ ಮೂವರು ಯುವಕರನ್ನು ಶನಿವಾರ ಪೊಲೀಸರು ಬಂಧಿಸಿದ್ದರು. ಆದರೆ ಭಾನುವಾರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ದೇಶವಿರೋಧಿ ಘೋಷಣೆ ಕೂಗಿದ ಮೂವರನ್ನು ಬಿಡುಗಡೆ ಮಾಡಿದ್ದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪ್ರತಿಭಟನೆಗಳು ಸಹ ನಡೆದಿದ್ದವು.

ಅದರ ಬೆನ್ನಲ್ಲೇ ಮೂವರು ಕಾಶ್ಮೀರಿ ಯುವಕರನ್ನು ಇಂದು ಮತ್ತೆ ಬಂಧಿಸಲಾಗಿದೆ. ವಿದ್ಯಾರ್ಥಿಗಳಾದ ಅಮೀರ್, ಬಾಸಿತ್, ತಾಲೀಬ್ ಅವರಗಳನ್ನು ಮತ್ತೆ ಅದೇ ಪ್ರಕರಣಕ್ಕಾಗಿ ಬಂಧಿಸಲಾಗಿದೆ.
ಸೆಕ್ಷನ್ 169 ಅಡಿ ವಿದ್ಯಾರ್ಥಿಗಳಿಂದ ಮುಚ್ಚಳಿಕೆ ಬರೆಸಿಕೊಂಡು, ಸಾಕ್ಷ್ಯಾಧಾರಗಳ ಕೊರತೆ ಎಂದು ನಮೂದಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಬಿಡುಗಡೆ ಆಗುತ್ತಿದ್ದಂತೆ ತೀವ್ರ ಸಾರ್ವಜನಿಕ ಆಕ್ರೋಶ ಪೊಲೀಸ್ ಇಲಾಖೆ ಮೇಲೆ ವ್ಯಕ್ತವಾಯಿತು. ಇಂದು ಮತ್ತೆ ಅದೇ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.












Click it and Unblock the Notifications