ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿದವರನ್ನು ಮತ್ತೆ ಬಂಧಿಸಿದ ಪೊಲೀಸರು

|
Google Oneindia Kannada News

ಹುಬ್ಬಳ್ಳಿ, ಫೆಬ್ರವರಿ 17: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಹುಬ್ಬಳ್ಳಿ ಕಾಲೇಜಿನಲ್ಲಿ ಓದುತ್ತಿದ್ದ ಮೂವರು ಕಾಶ್ಮೀರಿ ಯುವಕರನ್ನು ಇಂದು ಮತ್ತೆ ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿಯ ಕೆಎಲ್‌ಇ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದ ಮೂವರು ಕಾಶ್ಮೀರಿ ಯುವಕರು ಪಾಕಿಸ್ತಾನದ ಪರವಾಗಿ ಘೋಷಣೆಗಳನ್ನು ಕೂಗಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರೇ ಪೊಲೀಸರಿಗೆ ದೂರು ನೀಡಿದ್ದರು.

ಪಾಕಿಸ್ತಾನದ ಪರ ಘೋಷಣೆ: ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣಪಾಕಿಸ್ತಾನದ ಪರ ಘೋಷಣೆ: ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ

ದೂರಿನ ಅನ್ವಯ ಮೂವರು ಯುವಕರನ್ನು ಶನಿವಾರ ಪೊಲೀಸರು ಬಂಧಿಸಿದ್ದರು. ಆದರೆ ಭಾನುವಾರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ದೇಶವಿರೋಧಿ ಘೋಷಣೆ ಕೂಗಿದ ಮೂವರನ್ನು ಬಿಡುಗಡೆ ಮಾಡಿದ್ದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪ್ರತಿಭಟನೆಗಳು ಸಹ ನಡೆದಿದ್ದವು.

Hubballi: Police Again Arrested Three Kashmiri Students

ಅದರ ಬೆನ್ನಲ್ಲೇ ಮೂವರು ಕಾಶ್ಮೀರಿ ಯುವಕರನ್ನು ಇಂದು ಮತ್ತೆ ಬಂಧಿಸಲಾಗಿದೆ. ವಿದ್ಯಾರ್ಥಿಗಳಾದ ಅಮೀರ್, ಬಾಸಿತ್, ತಾಲೀಬ್ ಅವರಗಳನ್ನು ಮತ್ತೆ ಅದೇ ಪ್ರಕರಣಕ್ಕಾಗಿ ಬಂಧಿಸಲಾಗಿದೆ.

ಬಂಧಿತ 3 ಕಾಶ್ಮೀರಿ ವಿದ್ಯಾರ್ಥಿಗಳು ಕೆಎಲ್ಇಯಿಂದ ಸಸ್ಪೆಂಡ್ಬಂಧಿತ 3 ಕಾಶ್ಮೀರಿ ವಿದ್ಯಾರ್ಥಿಗಳು ಕೆಎಲ್ಇಯಿಂದ ಸಸ್ಪೆಂಡ್

ಸೆಕ್ಷನ್ 169 ಅಡಿ ವಿದ್ಯಾರ್ಥಿಗಳಿಂದ ಮುಚ್ಚಳಿಕೆ ಬರೆಸಿಕೊಂಡು, ಸಾಕ್ಷ್ಯಾಧಾರಗಳ ಕೊರತೆ ಎಂದು ನಮೂದಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಬಿಡುಗಡೆ ಆಗುತ್ತಿದ್ದಂತೆ ತೀವ್ರ ಸಾರ್ವಜನಿಕ ಆಕ್ರೋಶ ಪೊಲೀಸ್ ಇಲಾಖೆ ಮೇಲೆ ವ್ಯಕ್ತವಾಯಿತು. ಇಂದು ಮತ್ತೆ ಅದೇ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

English summary
Hubballi police again arrested three Kashmiri students who raise pro Pakistan slogans. First they arrested them on Saturday and then released on Sunday on bail. now on Monday police arrested them again.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X