ಅಪ್ರಾಪ್ತೆ ಮೇಲೆ ಅನುಚಿತ ವರ್ತನೆ: ಪೊಲೀಸ್ ಕಾನ್ಸ್ ಸ್ಟೇಬಲ್ ಮೇಲೆ 'ಪೋಕ್ಸೋ' ಕೇಸ್...
ಹುಬ್ಬಳ್ಳಿ, ನವೆಂಬರ್ 04: ಜನರನ್ನು ಕಾಯುವ ರಕ್ಷಕರೆ ಭಕ್ಷಕರಾದರೆ ಸಮಾಜದ ಪರಿಸ್ಥಿತಿ ಹೇಗಿರುತ್ತದೆ ಎಂಬ ಕಲ್ಪನೆ ಸಹ ಮಾಡಲಾಗದು. ಕಾನೂನು ಕಾಯುವವರೇ ಕಾನೂನು ಮೀರಿದರೆ, ಜನರೇ ಬುದ್ಧಿ ಕಲಿಸುತ್ತಾರೆ ಎಂಬ ಮಾತಿಗೆ ವಾಣಿಜ್ಯ ನಗರಿ ಹುಬ್ಬಳ್ಳಿಯು ಸಾಕ್ಷಿಯಾಗಿದೆ. ಅಪ್ರಾಪ್ರೆ ಬಾಲಕಿ ಮೇಲೆ ಅನುಚಿತವಾಗಿ ವರ್ತಿಸಿದ ಪೊಲೀಸಪ್ಪನಿಗೆ ಸಾರ್ವಜನಿಕರೇ ಧರ್ಮದೇಟು ಕೊಟ್ಟಿದ್ದಾರೆ. ಆರೋಪಿ ವಿರುದ್ಧ ಹುಬ್ಬಳ್ಳಿ-ಧಾರವಾಡ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿದ್ದಾರೆ.
ಹೌದು, ಅಪ್ರಾಪ್ತ ಬಾಲಕಿ ಮೇಲೆ ಕಾಮುಕ ಪೊಲೀಸ್ ಹೆಡ್ ಕಾನ್ಸಟೇಬಲ್ ಒಬ್ಬ ಅನುಚಿತ ವರ್ತನೆ ತೋರಿದ್ದಾರೆ. ಈ ಘಟನೆ ಭಾನುವಾರ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆಯಿಂದ ಪೊಲೀಸ್ ಇಲಾಖೆ ತಲೆ ತಗ್ಗಿಸುವಂತಾಗಿದೆ. ಈ ಆರೋಪಿ ಪೊಲೀಸ್ ಹೆಡ್ ಕಾನ್ಸಟೇಬಲ್‌ಗೆ ಮೂವರು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿಗೆ ಹಿಗ್ಗಾ ಮುಗ್ಗಾ ಥಳಿತ
ಹುಬ್ಬಳ್ಳಿಯ ಶಬರಿ ನಗರದ ಮೆಹಬೂಬ್. ಎಂ. ಖಾದಿರನವರ ಎಂಬಾತನ ವಿರುದ್ಧವೇ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈತ ಹುಬ್ಬಳ್ಳಿಯ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸಟೇಬಲ್ ಕಾಗಿ ಕೆಲಸ ಮಾಡುತ್ತಿದ್ದ.
ಈ ಆರೋಪಿ ರವಿವಾರ ಮಧ್ಯಾಹ್ನ 9 ವರ್ಷದ ಬಾಲಕಿಯನ್ನು ಪುಸುಲಾಯಿಸಿ ಮನೆಗೆ ಕರೆಸಿ ಬಾಗಿಲು ಹಾಕಿಕೊಂಡಿದ್ದಾನೆ. ಅನುಚಿತ ವರ್ತನೆ ತೋರಿದ್ದಾನೆ. ಬಳಿಕ ಆ ಬಾಲಕಿ ಮನೆಗೆ ಬಂದು ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಆಗ ಘಟನೆ ಬೆಳಕಿಗೆ ಬಂದಿದೆ.

ಬಾಲಕಿಯ ಪೋಷಕರಿಗೆ ಈ ಪೊಲೀಸ್ ಕಾನ್ಸಟೇಬಲ್ ಅನುಚಿತ ವರ್ತನೆ ತೋರಿದ್ದು ಗೊತ್ತಾಗುತ್ತಿದ್ದಂತೆ ಆರೋಪಿಗೆ ಧರ್ಮಧೇಟು ಕೊಟ್ಟಿದ್ದಾರೆ. ಹಿಗ್ಗಾ ಮುಗ್ಗಾ ಥಳಿಸಿ, ಮೈಮೇಲಿನ ಬಟ್ಟೆ ಹರಿಯುವಂತೆ ಏಟು ಕೊಟ್ಟಿದ್ದಾರೆ. ನಂತರ ಆರೋಪಿಯನ್ನು ಕೇಶ್ವಾಪುರ ಪೊಲೀಸರಿಗೆ ಒಪ್ಪಿಸಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಮೇಲೆಯೆ ನಂಬಿಕೆ ಕಳೆದುಕೊಳ್ಳುವ ಕೃತ್ಯ ಇದಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಪ್ಪು ಯಾರೇ ಮಾಡಿದರೂ ಕಾನೂನು ಮುಂದೆ ಒಂದೆ
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೋಕ್ಸೋ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಸೂಕ್ತ ಕಾನೂನು ರಿತ್ಯಾ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.
ಈ ಕುರಿತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸೋಮವಾರ ಪ್ರತಿಕ್ರಿಯಿಸಿದ್ದಾರೆ. ಇಂದು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊರ್ವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈಗಾಗಲೇ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅನುಚಿತವಾಗಿ ವರ್ತಿಸಿದ ವ್ಯಕ್ತಿ ಯಾರೇ ಆಗಿರಲಿ. ಆತನ ಮೇಲೆ ಕೇಸ್ ದಾಖಲಾಗದ ಮೇಲೆ ಆರೋಪಿ ಆರೋಪಿಯೇ. ಪೊಲೀಸ್ ಇಲಾಖೆಗೆ ಸೇರಿದವರು ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ. ಕಾನೂನಿನ ಮುಂದೆ ಎಲ್ಲರೂ ಒಂದೇ ಎಂದು ತಿಳಿಸಿದ್ದಾರೆ.
ಅಲ್ಲದೇ ಈ ವಿಷಯ ತಿಳಿಯುತಿದ್ದಂತೆ ಖುದ್ದು ಪೊಲೀಸ್ ಕಮೀಷನರ್ ಶಶಿಕುಮಾರ್ ಅವರೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.












Click it and Unblock the Notifications