ಈದ್ಗಾ ಮೈದಾನ ಸೇರಿ 1000 ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪನೆ: ಪೊಲೀಸ್ ಆಯುಕ್ತ ಶಶಿಕುಮಾರ್
ಹುಬ್ಬಳ್ಳಿ, ಸೆಪ್ಟಂಬರ್ 07: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಅಯೋಧ್ಯೆಯ ಶ್ರೀ ರಾಮನ ಅವತಾರ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದೆ. ಇಂದಿನಿಂದ ಮೂರು ದಿನ ಅದ್ಧೂರಿ ಗಣೇಶೋತ್ಸವ ನಡೆಯಲಿದೆ. ನಗರದ ಮೂರು ಸಾವಿರ ಮಠದಿಂದ ಮೆರವಣಿಗೆ ನಡೆಸಲಾಯಿತು. ಇಲ್ಲಿನ ಬಿಗಿ ಭದ್ರತೆ ಹಾಗೂ ಹುಬ್ಬಳ್ಳಿ ನಗರದಲ್ಲಿ ಎಷ್ಟು ಸಾರ್ವಜನಿಕ ಗಣೇಶಗಳಿಗೆ ಅನುಮತಿ ನೀಡಲಾಗಿದೆ ಎಂಬೆಲ್ಲ ಪರಿಸ್ಥಿತಿ ಬಗ್ಗೆ ಹುಬ್ಬಳ್ಳಿ ಧಾರವಾಡ ಪೊಲಿಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ಶನಿವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ಮೊದಲು ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯ ತಿಳಿಸಿದರು. ಹುಬ್ಬಳ್ಳಿ ಧಾರವಾಡ ಸೇರಿದಂತೆ ಈದ್ಗಾ ಮೈದಾನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಹೆಚ್ಚುವರಿ ಪೊಲೀಸ್ ಸಿಬ್ಬಂಧಿ ನಿಯೋಜಿಸಲಾಗಿದ್ದು, ಅಗತ್ಯ ಭದ್ರತೆ ಸಹಿತ ಕಟ್ಟೆಚ್ಚರ ವಹಿಸಲಾಗಿದೆ ಎಂದರು.

1000 ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ
ಸದ್ಯ ಹುಬ್ಬಳ್ಳಿ ಧಾರವಾಡ ಅವಳಿನಗರದ 1000 ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಪರವಾನಗೆ ನೀಡಲಾಗಿದೆ. ಈದ್ಗಾ ಮೈದಾನ ಸೇರಿದಂತೆ ಸಾರ್ವಜನಿಕ ಗಣೇಶ ಉತ್ಸವ ವೇಳೆ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬರದಂತೆ ಎಚ್ಚರಿಕೆ ವಹಿಸಿದ್ದೇವೆ.
ಈ ಕಾರಣದಿಂದಲೇ ಶಾಂತಿ ಸಭೆ , ಸರ್ವ ಧರ್ಮಗಳ ಪ್ರಮುಖರ ಸಭೆ ಕರೆಯಲಾಗಿತ್ತು. ಯಾವುದೇ ರೀತಿಯ ಕಾನೂನು ಸುವ್ಯವಸ್ಥೆ ಹಾಳಗದಂತೆ ಕ್ರಮ ಕೈಗೊಳ್ಳಲಾಗಿದೆ. ಸದ್ಯ ನಗರದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾನೆ ನಡೆದಿದೆ.

ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆಯಿಂದ ಗಣೇಶೋತ್ಸವ ನಡೆಸುವಂತೆ ಈಗಾಗಲೇ ಮನವಿ ಮಾಡಿದ್ದೇವೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮೂರು ದಿನ ಅನುಮತಿ ಕೊಡಲಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅವಕಾಶ ಕಲ್ಪಿಸಿದ್ದು, ಇಂದು ಮೊದಲ ದಿನವಾಗಿದೆ.
ಚೆನ್ನಮ್ಮ ವೃತ್ತದ ಪಕ್ಕದಲ್ಲಿರುವ ಈದ್ಗಾ ಮೈದಾನ ಸುತ್ತ ಮುತ್ತ ಸಿಸಿ ಟಿವಿ ಅಳವಡಿಸಲಾಗಿದೆ. ಪೊಲೀಸ್ ಕರ್ತವ್ಯದಲ್ಲಿದ್ದು, ಈ ಭಾಗದಲ್ಲಿ ದಟ್ಟಣೆ ಆಗದಂತೆ, ಶಾಂತಿ ಕದಡದಂತೆ ನೋಡಿಕೊಳ್ಳುತ್ತಿದ್ದಾರೆ.ರ ಶಾಂತಿಯುತ ಆಚರಣೆಗೆ ಕೋರಿದ್ದೇವೆ.
ಶಾಂತಿಯುತ ಆಚರಣೆಗೆ ಪೊಲೀಸ್ ಕರೆ
ಬಂದೋಬಸ್ತ್ ಗಾಗಿ ಸಿಆರ್, ಡಿಆರ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಸಿಬ್ಬಂದಿ ನಿಯೋಜನೆ
ಹುಬ್ಬಳ್ಳಿಯಲ್ಲಿ 11 ದಿನಗಳ ಕಾಲ ಸಾರ್ವಜನಿಕರು ಶಾಂತಿಯಿಂದ ಹಬ್ಬ ಆಚರಿಸಬೇಕಾಗಿದೆ. ಅವಳಿನಗದರಲ್ಲಿ ಬೃಹತ್ ಗಣಪತಿಗಳನ್ನು ಅಲ್ಲಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ.
ಹುಬ್ಬಳ್ಳಿ ಧಾರವಾಡ ಸೇರಿದಂತೆ ಉತ್ತರ ಕರ್ನಾಟಕ ಭಾಗದಿಂದ ಜನರು ಹುಬ್ಬಳ್ಳಿ ಗಣೇಶ ವೀಕ್ಷಣೆಗೆ ಬರುತ್ತಾರೆ. ಮುಂದಿನ ನಾಲ್ಕೈದು ದಿನ ಇಲ್ಲಿಗೆ ಬರುವ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.












Click it and Unblock the Notifications