• search
 • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾಲೇಜು ಆರಂಭಿಸುವ ಬಗ್ಗೆ ಡಿಸಿಎಂ ಡಾ. ಅಶ್ವಥ್ ನಾರಾಯಣ ಹುಬ್ಬಳ್ಳಿಯಲ್ಲಿ ಸ್ಪಷ್ಟನೆ!

|
Google Oneindia Kannada News

ಹುಬ್ಬಳ್ಳಿ, ಜು. 12: ಕೊರೊನಾ ವೈರಸ್ ಕಳೆದ ಒಂದೂವರೆ ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರಕ್ಕೆ ಬಲವಾದ ಹೊಡೆತ ಕೊಟ್ಟಿದೆ. ಕೋವಿಡ್‌ನಿಂದಾಗಿ ಶಾಲಾ-ಕಾಲೇಜುಗಳ ಶೈಕ್ಷಣಿಕ ಚಟುವಟಿಕೆ ಕುಂಠಿತಗೊಂಡಿವೆ. ಇದೀಗ ಕಾಲೇಜುಗಳನ್ನು ಆರಂಭಿಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದ್ದು, ಆ ಬಗ್ಗೆ ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರು ಹುಬ್ಬಳ್ಳಿಯಲ್ಲಿ ಸರ್ಕಾರದ ನಿರ್ಧಾರ ಪ್ರಕಟಿಸಿದ್ದಾರೆ.

ಕಾಲೇಜುಗಳನ್ನು ಆರಂಭಿಸುವ ಕುರಿತು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಅವರು, "ಕಾಲೇಜು ಆರಂಭಕ್ಕೆ ಸರಕಾರ ಇನ್ನೂ ಯಾವುದೇ ತೀಮಾನ ಮಾಡಿಲ್ಲ. ಆದರೆ, ಭೌತಿಕ ತರಗತಿಗಳ ಆರಂಭಕ್ಕೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಲಸಿಕೆ ಕೊಡುವ ಕೆಲಸ ಭರದಿಂದ ಸಾಗುತ್ತಿದೆ. ಲಸಿಕೆ ಕಾರ್ಯ ಮುಗಿಯುತ್ತಿದ್ದಂತೆ ಕಾಲೇಜುಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು" ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

"ಕಾಲೇಜುಗಳನ್ನು ತೆರೆಯಲು ಸವಾಲುಗಳಿರುವುದು ನಿಜ. ಆದರೆ ಎಷ್ಟು ದಿನವೆಂದು ಹಾಗೇ ಇರಲು ಸಾಧ್ಯ? ಜೀವನ ಸಾಗುತ್ತಲೇ ಇರಬೇಕು. ಸುರಕ್ಷತೆಯ ಜತೆ ಜತೆಗೇ ಜೀವನ ಸಾಗುತ್ತಿರಬೇಕು. ಈ ನಿಟ್ಟಿನಲ್ಲಿ ಲಸಿಕೆ ಮಾತ್ರವೇ ಪರಿಹಾರ" ಎಂದು ಡಿಸಿಎಂ ಹೇಳಿದ್ದಾರೆ.

ಸರಕಾರ ಎಲ್ಲೂ ಮೈಮರೆತಿಲ್ಲ

ಸರಕಾರ ಎಲ್ಲೂ ಮೈಮರೆತಿಲ್ಲ

"ಸರಕಾರ ಎಲ್ಲೂ ಮೈಮರೆತಿಲ್ಲ. ಒಂದೆಡೆ ಲಸಿಕೀಕರಣದ ವೇಗ ಹೆಚ್ಚಿಸುತ್ತಲೇ ಇನ್ನೊಂದೆಡೆ ಆರೋಗ್ಯ ವ್ಯವಸ್ಥೆಯ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗುತ್ತಿದೆ. ರಾಜ್ಯಾದ್ಯಂತ ಕೋವಿಡ್‌ ಸೋಂಕಿತರಿಗಾಗಿಯೇ 6,000 ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಪ್ರಮಾಣಲ್ಲಿ ವೈದ್ಯರು, ನರ್ಸುಗಳು, ಪ್ಯಾರಾ ಮೆಡಿಕಲ್‌ ಸಿಬ್ಬಂದಿ, ಗ್ರೂಪ್‌ ಡಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಪೈಕಿ 2,000 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ" ಎಂದು ಇದೇ ಸಂದರ್ಭದಲ್ಲಿ ಡಾ. ಅಶ್ವಥ್ ನಾರಾಯಣ ಅವರು ಹೇಳಿದ್ದಾರೆ.

ʼಇಬ್ಬರು ಮಕ್ಕಳ ನೀತಿʼ

ʼಇಬ್ಬರು ಮಕ್ಕಳ ನೀತಿʼ

ಜನಸಂಖ್ಯೆ ನಿಯಂತ್ರಣಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಸರ್ಕಾರದ ನಿರ್ಧಾರ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರು, "ಅಭಿವೃದ್ಧಿಗೆ ಪೂರಕವಾಗಿ ಜನಸಂಖ್ಯೆ ಪ್ರಮಾಣವನ್ನು ತಡೆಯಬೇಕಾಗಿದೆ. ಹೀಗಾಗಿ 'ಇಬ್ಬರು ಮಕ್ಕಳ ನೀತಿ'ಯನ್ನು ಯೋಗಿ ಸರ್ಕಾರ ಜಾರಿಗೆ ತಂದಿದೆ. ಜನಸಂಖ್ಯಾ ನಿಯಂತ್ರಣಕ್ಕೆ ಕೆಲ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತಿದೆ" ಎಂದು ಸಮರ್ಥಿಸಿಕೊಂಡರು.

ಹುಬ್ಬಳ್ಳಿಗೆ ಹಿನ್ನಡೆ ಆಗಿಲ್ಲ

ಹುಬ್ಬಳ್ಳಿಗೆ ಹಿನ್ನಡೆ ಆಗಿಲ್ಲ

"ಹುಬ್ಬಳ್ಳಿ ಭಾಗದಲ್ಲಿ ಕೈಗಾರಿಕೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಹಿನ್ನಡೆಯಾಗಿಲ್ಲ. ಮಾರುಕಟ್ಟೆಗೆ ತಕ್ಕಂತೆ ಕೆಲ ವ್ಯತ್ಯಾಸಗಳಾಗುತ್ತವೆಯೇ ವಿನಾ, ಅದನ್ನು ಹಿನ್ನಡೆ ಎನ್ನಲಾಗದು. ಇನ್ಫೋಸಿಸ್‌, ದೇಶಪಾಂಡೆ ಫೌಂಡೇಶನ್ ವತಿಯಿಂದ ಈ ಭಾಗದಲ್ಲಿ ಇನ್ನೂ ದೊಡ್ಡ ಪ್ರಮಾಣದ ಬದಲಾವಣೆ ಆಗಲಿದೆ. ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಈ ಭಾಗದ ಬೆಳವಣಿಗೆಗೆ ಭಾರೀ ಕೊಡುಗೆ ನೀಡಲಿದೆ" ಎಂದು ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಡಿಸಿಎಂ ಹೇಳಿದರು.

"ಬಿಯಾಂಡ್‌ ಬೆಂಗಳೂರು ಪರಿಕಲ್ಪನೆ ಮೂಲಕ ಬೆಂಗಳೂರು ಹೊರಗಿನ ನಗರಗಳ ಅಭಿವೃದ್ಧಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಅದರ ಮೂಲಕವೇ ಮತ್ತಷ್ಟು ಕಂಪನಿಗಳು ಹುಬ್ಬಳ್ಳಿಗೆ ಬರಲಿವೆ. ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ನಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಕೈಗಾರಿಕೆಗಳು ಬೆಳೆಯಲು ಬಹಳಷ್ಟು ಸಹಕಾರಿ ಆಗುತ್ತಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ದೊಡ್ಡ ಪ್ರಮಾಣದಲ್ಲಿ ಬಳಕೆ ಮಾಡಲಾಗುತ್ತಿದೆ" ಎಂದು ಅಶ್ವಥ್ ನಾರಾಯಣ ಸ್ಪಷ್ಟನೆ ನೀಡಿದರು.

  ಸುಮಲತಾ ವಿಡಿಯೋ ಬಿಡುಗಡೆ ಮಾಡಿದ ಶರವಣ | Oneindia Kannada
  ಸಿದ್ಧಾರೂಢರ ದರ್ಶನ ಪಡೆದ ಡಿಸಿಎಂ

  ಸಿದ್ಧಾರೂಢರ ದರ್ಶನ ಪಡೆದ ಡಿಸಿಎಂ

  ಹುಬ್ಬಳ್ಳಿ ಪ್ರವಾಸದಲ್ಲಿರುವ ಡಿಸಿಎಂ ಡಾ. ಸಿ. ಎನ್. ‌ಅಶ್ವತ್ಥನಾರಾಯಣ ಅವರು ಸೋಮವಾರ ಬೆಳಗ್ಗೆ ಹುಬ್ಬಳ್ಳಿಯಲ್ಲಿ ಸಿದ್ಧಾರೂಢರ ಮಠಕ್ಕೆ ಭೇಟಿ ನೀಡಿ ಸಿದ್ಧಾರೂಢರು ಮತ್ತು ಗುರುನಾಥರೂಢರ ಗದ್ದುಗೆಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ವಿಶೇಷ ಪೂಜೆ ಮಾಡಿಸಿದರು.

  English summary
  The region of Hubli has been given further prominence for growth of industrial development by recognizing it as a prominent hub under ‘Beyond Bengaluru’ initiative, DyCM, Dr.C.N.Ashwatha Narayana, who also holds the IT/Bt and S&T portfolio, stated on Monday. Know more.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X