NWKRTC Bus: ಸಿದ್ಧಾರೂಢ ಸ್ವಾಮಿ ಮಠದ ಲಕ್ಷ ದೀಪೋತ್ಸವ: ಪ್ರಯಾಣಿಕರಿಗಾಗಿ ವಿಶೇಷ ಬಸ್ ಸಂಚಾರ
ಹುಬ್ಬಳ್ಳಿ, ನವೆಂಬರ್ 29: ಹುಬ್ಬಳ್ಳಿ ನಗರದಲ್ಲಿ ಶ್ರೀ ಸಿದ್ಧಾರೂಢ ಸ್ವಾಮಿ ಮಠ ಆಚರಣೆಗಳಿಗೆ ಯಾವಾಗಲೂ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇದೇ ಡಿಸೆಂಬರ್ 1ರಂದು ರವಿವಾರ ಇದೇ ಮಠದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ನಡೆಯಲಿದೆ. ಭಕ್ತ ಅನುಕೂಲಕ್ಕೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಬಸ್‌ಗಳೂ ಹೊರಡುವ ಸಮಯ, ಸ್ಥಳ ಮಾಹಿತಿ ಇಲ್ಲಿದೆ.
ಸಿದ್ಧಾರೂಢ ಸ್ವಾಮಿ ಮಠ ಲಕ್ಷ ದೀಪೋತ್ಸವಕ್ಕೆ ಭಾಗವಹಿಸುವ ಭಕ್ತಾಧಿಗಳ ಅನುಕೂಲಕ್ಕಾಗಿ ಹುಬ್ಬಳ್ಳಿಯಿಂದ ಜಿಲ್ಲೆಯೊಳಗೆ ಪ್ರಮುಖ ಸ್ಥಳಗಳಿಗೆ ಹಾಗೂ ಹೊರ ಜಿಲ್ಲೆಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ (NWKRTC) ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.

ಉತ್ತರ ಕರ್ನಾಟಕದ ಪ್ರಮುಖ ಧಾರ್ಮಿಕ ಸ್ಥಳ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ಮಠದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಡಿಸೆಂಬರ್ 1ರಂದು ರವಿವಾರ ಸಂಜೆ 6 ಗಂಟೆಗೆ ಲಕ್ಷ ದೀಪೋತ್ಸವ ಕಾರ್ಯಕ್ರಮವು ಅದ್ಧೂರಿಯಾಗಿ ನೆರವೇರಲಿದೆ. ಮಠಕ್ಕೆ ಧಾರವಾಡ ಜಿಲ್ಲೆಯ ಪ್ರಮುಖ ಸ್ಥಳಗಳು, ನೆರೆಯ ಜಿಲ್ಲೆಗಳು ಮತ್ತು ದೂರದ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ ಭಾಗದಿಂದಲೂ ಸಹ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಸಾಧ್ಯತೆ ಇದೆ. ಹೀಗಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಿದ್ದೇವೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ವಿವರಿಸಿದ್ದಾರೆ.
ಮಠದಿಂದ ಮರಳುವವರಿಗೂ ಬಸ್ ಸೌಲಭ್ಯ
ಕೇವಲ ದೂರದ ಊರುಗಳಿಂದ ಹುಬ್ಬಳ್ಳಿಯ ಈ ಮಠಕ್ಕೆ ಆಗಮಿಸುವುದು ಮಾತ್ರವಲ್ಲದೇ, ಇಲ್ಲಿಂದ ಬೇರೆ ಬೇರೆ ಭಾಗಗಳಿಗೆ, ಬೇರೆ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬಸ್‌ಗಳು ಕಾರ್ಯಾಚರಣೆ ಮಾಡಲಿದ್ದೇವೆ ಎಂದು ತಿಳಿಸಿದರು.
ಭಕ್ತಾದಿಗಳು ಲಕ್ಷದೀಪೋತ್ಸವ ಕಾರ್ಯಕ್ರಮದಿಂದ ತಮ್ಮ ಸ್ಥಳಗಳಿಗೆ ಹಿಂದಿರುಗಲು ಹುಬ್ಬಳ್ಳಿಯ ಪ್ರಮುಖ ಸ್ಥಳಗಳಿಗೆ ಹಾಗೂ ಹೊರ ಜಿಲ್ಲೆಗಳಿಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಇದೆ. ಈ ಎಲ್ಲ ವಿಶೇಷ ಬಸ್ಸುಗಳು ಹೊಸೂರು ಬಸ್ ನಿಲ್ದಾಣ ಹಾಗೂ ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಸೇವೆ ಲಭ್ಯ ಇವೆ ಎಂದರು.
ವಿಶೇಷ ಬಸ್ ಸಂಚಾರದ ಮಾರ್ಗಗಳು
ಹೊಸೂರು ಬಸ್ ನಿಲ್ದಾಣ ನವಲಗುಂದ, ನರಗುಂದ, ಬಾಗಲಕೋಟೆ, ವಿಜಯಪುರ, ಗದಗ, ರಾಯಚೂರು, ಕೊಪ್ಪಳ, ಹೊಸಪೇಟೆ ಕಡೆಗೆ ಹೋಗುವ ಬಸ್ಸುಗಳು ಈ ಬಸ್ ನಿಲ್ದಾಣದಿಂದ ಹೊರಡುತ್ತವೆ.ಹೆಚ್ಚಿನ ಮಾಹಿತಿಗಾಗಿ 7760991662 / 7760991685 ಸಂಖ್ಯೆಗೆ ಸಂಪರ್ಕಿಸಬೇಕು ಎಂದು ತಿಳಿಸಿದೆ.
ಗೋಕುಲ ರಸ್ತೆ ಬಸ್ ನಿಲ್ದಾಣ ಬೆಳಗಾವಿ,ಶಿರಸಿ, ಕಾರವಾರ, ಮಂಗಳೂರು, ಹಾವೇರಿ, ರಾಣೆಬೆನ್ನೂರು, ದಾವಣಗೆರೆ, ಶಿವಮೊಗ್ಗ ಕಡೆಗೆ ಹೋಗುವ ಬಸ್ಸುಗಳು ಈ ಬಸ್ ನಿಲ್ದಾಣದಿಂದ ಹೊರಡುತ್ತವೆ. ಹೆಚ್ಚಿನ ಮಾಹಿತಿಗಾಗಿ 7760991682 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
ಭಕ್ತಾದಿಗಳು ಹಾಗೂ ಸಾರ್ವಜನಿಕ ಪ್ರಯಾಣಿಕರು ವಿಶೇಷ ಬಸ್ಸುಗಳ ಸದುಪಯೋಗಪಡಿಸಿಕೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಯವರು ಕೋರಿದ್ದಾರೆ.












Click it and Unblock the Notifications