ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜನವರಿ 1ರಿಂದ ಹುಬ್ಬಳ್ಳಿ-ತಿರುಪತಿ ವಿಮಾನ ಹಾರಾಟ

|
Google Oneindia Kannada News

ಹುಬ್ಬಳ್ಳಿ, ನವೆಂಬರ್ 22 : ತಿರುಪತಿ ದೇವರ ದರ್ಶನ ಪಡೆಯಲು ವಿಮಾನದಲ್ಲಿ ಹೋಗುವ ಉತ್ತರ ಕರ್ನಾಟಕ ಭಾಗದ ಜನರ ಕನಸು ನನಸಾಗಲಿದೆ. ಜನವರಿ 1ರಿಂದ ಹುಬ್ಬಳ್ಳಿ-ತಿರುಪತಿ ವಿಮಾನ ಸೇವೆ ಆರಂಭವಾಗಲಿದೆ.

ಸ್ಟಾರ್‌ ಏರ್‌ ಕಂಪನಿ ಹುಬ್ಬಳ್ಳಿ-ತಿರುಪತಿ ವಿಮಾನ ಸೇವೆಯನ್ನು ಆರಂಭಿಸುವುದಾಗಿ ಘೋಷಣೆ ಮಾಡಿದೆ. ಗುರುವಾರ ಹೊರತುಪಡಿಸಿ ವಾರದ ಉಳಿದ ದಿನ ಹುಬ್ಬಳ್ಳಿಯಿಂದ ತಿರುಪತಿಗೆ ವಿಮಾನ ಹಾರಾಟ ನಡೆಸಲಿದೆ.

ಹುಬ್ಬಳ್ಳಿ-ವಿಜಯವಾಡ ಹಬ್ಬದ ವಿಶೇಷ ರೈಲು; ವೇಳಾಪಟ್ಟಿ ಹುಬ್ಬಳ್ಳಿ-ವಿಜಯವಾಡ ಹಬ್ಬದ ವಿಶೇಷ ರೈಲು; ವೇಳಾಪಟ್ಟಿ

ಹುಬ್ಬಳ್ಳಿ-ತಿರುಪತಿ ವಿಮಾನ ಜನವರಿ 1ರಿಂದ ಹಾರಾಟವನ್ನು ಆರಂಭಿಸಲಿದೆ. ಬೆಳಗ್ಗೆ 11.55ಕ್ಕೆ ತಿರುಪತಿಯಿಂದ ಹೊರಡುವ ವಿಮಾನ 1 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿದೆ. ಹುಬ್ಬಳ್ಳಿಯಿಂದ 1.25ಕ್ಕೆ ಹೊರುಡುವ ವಿಮಾನ 2.30ಕ್ಕೆ ತಿರುಪತಿಗೆ ತಲುಪಲಿದೆ.

ಇತಿಹಾಸ ನಿರ್ಮಾಣ ಮಾಡಲಿದೆ ಸಿದ್ದಾರೂಢ ಸ್ವಾಮೀಜಿ ರೈಲು ನಿಲ್ದಾಣ ಇತಿಹಾಸ ನಿರ್ಮಾಣ ಮಾಡಲಿದೆ ಸಿದ್ದಾರೂಢ ಸ್ವಾಮೀಜಿ ರೈಲು ನಿಲ್ದಾಣ

Hubballi-Tirupati Flight Service From January 1, 2021

ಸ್ಟಾರ್‌ ಏರ್‌ ಹುಬ್ಬಳ್ಳಿ-ತಿರುಪತಿ ವಿಮಾನ ಸಂಚಾರ ಆರಂಭಿಸುವಾದಿ ಹಿಂದೆಯೇ ಘೋಷಣೆ ಮಾಡಿತ್ತು. ಆದರೆ, ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ವಿಳಂಭವಾಗಿ ಸೇವೆ ಆರಂಭವಾಗಲಿದೆ. ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಲು ಅವಕಾಶ ನೀಡಲಾಗಿದೆ.

ಹುಬ್ಬಳ್ಳಿ ರೈಲು ನಿಲ್ದಾಣದ ಸೌಂದರ್ಯಕ್ಕೆ ಕೇಂದ್ರ ಸಚಿವ ಪಿಯೂಶ್​ ಗೋಯಲ್ ಫಿದಾಹುಬ್ಬಳ್ಳಿ ರೈಲು ನಿಲ್ದಾಣದ ಸೌಂದರ್ಯಕ್ಕೆ ಕೇಂದ್ರ ಸಚಿವ ಪಿಯೂಶ್​ ಗೋಯಲ್ ಫಿದಾ

ಕರ್ನಾಟಕದಲ್ಲಿನ ದೊಡ್ಡ ವಿಮಾನ ನಿಲ್ದಾಣಗಳ ಪೈಕಿ ಹುಬ್ಬಳ್ಳಿಗೆ ಮೂರನೇ ಸ್ಥಾನವಿದೆ. 2020ರ ಏಪ್ರಿಲ್‌ನಿಂದ ಅಕ್ಟೋಬರ್ ತನಕ ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿದೆ. ಬೆಳಗಾವಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ.

Recommended Video

Covid Vaccine ಹಂಚುವಿಕೆ ಬಗ್ಗೆ ಮುಖ್ಯಮಂತ್ರಿಗಳ ಸಭೆ ಕರೆದ Modi | Oneindia Kannada

ವಿಮಾನ ನಿಲ್ದಾಣ ಪ್ರಾಧಿಕಾರದ ಮಾಹಿತಿಯಂತೆ ಏಪ್ರಿಲ್‌ನಿಂದ ಅಕ್ಟೋಬರ್ ತನಕ 17,689 ಪ್ರಯಾಣಿಕರು ಆಗಮಿಸಿದ್ದಾರೆ. 484 ವಿಮಾನಗಳು ಹಾರಾಟ ನಡೆಸಿವೆ. ಅಕ್ಟೋಬರ್ ತಿಂಗಳಿನಲ್ಲಿ 8,615 ಪ್ರಯಾಣಿಕರು ಸಂಚಾರ ನಡೆಸಿದ್ದಾರೆ. ಅಕ್ಟೋಬರ್‌ನಲ್ಲಿ 207 ವಿಮಾನ ಹಾರಾಟ ನಡೆಸಿದೆ.

English summary
Star Air will start Hubballi-Tirupati flight service from January 1, 2021. Flight will run 6 days in week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X