ಅಂತಾರಾಷ್ಟ್ರೀಯ ಕ್ರಿಕೆಟ್ ಸಂಭ್ರಮಕ್ಕೆ ಸಾಕ್ಷಿಯಾಗಲಿದೆ ಹುಬ್ಬಳ್ಳಿ
ಹುಬ್ಬಳ್ಳಿ, ಆಗಸ್ಟ್ 27 : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಈಗ ಮತ್ತೆ ಕ್ರಿಕೆಟ್ ಕಲರವ ಕೇಳಲಿದೆ. ಸುಮಾರು 3 ವರ್ಷಗಳ ಬಳಿಕ ಹುಬ್ಬಳ್ಳಿಗೆ ಅಂತಾರಾಷ್ಟ್ರೀಯ ಮಟ್ಟದ ಪಂದ್ಯ ನಡೆಯಲಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಲಿದೆ.
ಸೆಪ್ಟೆಂಬರ್ 8ರಿಂದ 11ರವರೆಗೆ ರಾಜನಗರ ಕೆಎಸ್‌ಸಿಎ (ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ) ಮೈದಾನದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ಎ ತಂಡಗಳ ನಡುವೆ ಚತುರ್ದಿನ (ಟೆಸ್ಟ್) ಪಂದ್ಯ ನಡೆಯಲಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ಉಭಯ ತಂಡಗಳ ನಡುವಿನ 3 ಚತುರ್ದಿನ ಪಂದ್ಯಗಳನ್ನು ಬೆಂಗಳೂರಿಗೆ ಹಂಚಿಕೆ ಮಾಡಿತ್ತು. ಅದರಲ್ಲಿ 2ನೇ ಪಂದ್ಯ ಹುಬ್ಬಳ್ಳಿಗೆ ಲಭ್ಯವಾಗಿದೆ. ಮೊದಲ ಹಾಗೂ 3ನೇ ಚತುರ್ದಿನ ಪಂದ್ಯ ಬೆಂಗಳೂರಿನಲ್ಲಿಯೇ ನಡೆಯಲಿದೆ.
ಹುಬ್ಬಳ್ಳಿಯಲ್ಲಿ ಈ ಹಿಂದೆ 2019ರ ಮೇ ತಿಂಗಳಲ್ಲಿ ಭಾರತ-ಶ್ರೀಲಂಕಾ ಎ ತಂಡಗಳ ನಡುವೆ 1 ಚತುರ್ದಿನ ಪಂದ್ಯ ಹಾಗೂ 2 ಏಕದಿನ ಪಂದ್ಯಗಳು ನಡೆದಿದ್ದವು. ಇದಕ್ಕೂ ಮೊದಲು 2017ರಲ್ಲಿ ಭಾರತ-ಬಾಂಗ್ಲಾದೇಶ ಎ ಮಹಿಳಾ ತಂಡಗಳ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಹುಬ್ಬಳ್ಳಿ ಆತಿಥ್ಯ ವಹಿಸಿತ್ತು.

ಹುಬ್ಬಳ್ಳಿಯಲ್ಲಿ 2013ರಲ್ಲಿ ಭಾರತ- ವೆಸ್ಟ್ ಇಂಡೀಸ್ ಎ ತಂಡಗಳ ನಡುವೆ ಮೊದಲ ಬಾರಿ ಆಯೋಜನೆಯಾಗಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವು ಸಾಕಷ್ಟು ಜನಪ್ರಿಯತೆ ಗಳಿಸಿತ್ತು. ಆಗ ಖ್ಯಾತ ಆಟಗಾರರಾದ ವಿರೇಂದ್ರ ಸೆಹ್ವಾಗ್, ಗೌತಮ್ ಗಂಭೀರ, ಜಹೀರ್ ಖಾನ್ ಆಡಿದ್ದರು. ಈಗ ಭಾರತ ಟೆಸ್ಟ್ ತಂಡದಲ್ಲಿರುವ ಚೇತೇಶ್ವರ ಪೂಜಾರ ಈ ಮೈದಾನದಲ್ಲಿ ಅಜೇಯ ತ್ರಿಶತಕ ಬಾರಿಸಿದ್ದು, ಕ್ರಿಕೆಟ್ ಪ್ರೇಮಿಗಳ ನೆನಪಿನಲ್ಲಿ ಉಳಿದಿದೆ. ಈ ಬಾರಿ ಋತುರಾಜ್ ಗಾಯಕವಾಡ, ಪ್ರಸಿಧ್ ಕೃಷ್ಣ, ರಾಹುಲ್ ಚಾಹರ್, ಕುಲದೀಪ್ ಯಾದವ, ಉಮ್ರಾನ್ ಮಲ್ಲಿಕ್ ಅವರಂತಹ ಅಂತಾರಾಷ್ಟ್ರೀಯ ಮಟ್ಟದ ಆಟಗಾರರು ಭಾರತ ಎ ತಂಡದಲ್ಲಿ ಇದ್ದಾರೆ.

ಕಳೆದ 3 ವರ್ಷಗಳಿಂದ ಹುಬ್ಬಳ್ಳಿ ರಾಜನಗರ ಮೈದಾನದಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳಿರಲಿ, ದೇಶೀಯ ಕ್ರಿಕೆಟ್ (ರಣಜಿ) ಪಂದ್ಯಗಳೂ ಕೂಡ ನಡೆದಿಲ್ಲ. ಇದೀಗ ಕೆಎಸ್‌ಸಿಎ ಆಯೋಜಿಸಿರುವ ಮಹಾರಾಜ ಟ್ರೋಫಿ ಟ್ವೆಂಟಿ-20 ಕ್ರಿಕೆಟ್ ಪಂದ್ಯವು ಮಳೆಯ ಕಾರಣಕ್ಕೆ ಹುಬ್ಬಳ್ಳಿಗೆ ಹಂಚಿಕೆಯಾಗಿರಲಿಲ್ಲ. ಇದೀಗ ಭಾರತ-ನ್ಯೂಜಿಲೆಂಡ್ ಎ ತಂಡಗಳ ನಡುವಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಹಂಚಿಕೆ ಆಗಿರುವುದು ಇಲ್ಲಿಯ ಕ್ರಿಕೆಟ್ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications