NWKRTC: ಶ್ರೀ ಯಲ್ಲಮ್ಮ ದೇವಿ ಜಾತ್ರೆ ಪ್ರಯುಕ್ತ 1 ತಿಂಗಳು ವಿಶೇಷ ಬಸ್ ವ್ಯವಸ್ಥೆ: ಎಲ್ಲಿಂದ-ಎಲ್ಲಿಗೆ? ವೇಳಾಪಟ್ಟಿ
ಹುಬ್ಬಳ್ಳಿ, ಫೆಬ್ರವರಿ 03: ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಬೆಳಗಾವಿ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರವಾಗಿರುವ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ವಿಶೇಷ ಬಸ್ ಬಿಡಲಾಗಿದೆ. ಒಂದು ತಿಂಗಳ ಕಾಲ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಹುಬ್ಬಳ್ಳಿಯಿಂದ ಸವದತ್ತಿಗೆ ಕಾರ್ಯಾಚರಣೆ ನಡೆಸಲಿವೆ. ಇದು ಪ್ರಯಾಣಿಕರಿಗೆ ಮತ್ತು ಭಕ್ತರಿಗೆ ಅನುಕೂಲವಾಗಲಿದೆ ಎಂದು ಘಟಕದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಭಕ್ತರ ಹಾಗಪ್ರಯಾಣಿಕರ ಅನುಕೂಲಕ್ಕಾಗಿ ಫೆಬ್ರವರಿ 1 ರಿಂದ ಮಾರ್ಚ್ 14ರ ತನಕ ಒಂದು ತಿಂಗಳ ಕಾಲ ಗೋಕಾಕ್, ಅಥಣಿ, ರಾಯಭಾಗ ಹಾಗೂ ಚಿಕ್ಕೋಡಿ ಘಟಕಗಳಿಂದ ವ್ಯವಸ್ಥೆ ಮಾಡಲಾಗಿದೆ. ಭಕ್ತರು ಈ ವಿಶೇಷ ಬಸ್‌ಗಳ ಸಮಯ, ವೇಳಾಪಟ್ಟಿ, ನಿಲ್ದಾಣಗಳನ್ನು ತಿಳಿದು ಸದುಪಯೋಗ ಪಡೆದುಕೊಳ್ಳುವಂತೆ ಅಧಿಕಾರಿಗಳು ಕೋರಿದ್ದಾರೆ.

ಯಲ್ಲಮ್ಮ ದೇವಿ ಭಕ್ತರ ಅನುಕೂಲಕ್ಕಾಗಿ ಈ ಭಾಗದಿಂದ ಯಲ್ಲಮ್ಮನಗುಡ್ಡಕ್ಕೆ ಹೆಚ್ಚುವರಿ ಜಾತ್ರಾ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ದೇವಿಯ ಜಾತ್ರೆ ಪ್ರಯುಕ್ತ ಗೋಕಾಕದಿಂದ 13 ಬಸ್‌ಗಳು, ಅಥಣಿ 10, ರಾಯಾಬಾಗದಿಂದ 14 ಬಸ್‌ಗಳನ್ನು ಬಿಡಲಾಗಿದೆ. ಒಟ್ಟು 120ಕ್ಕೂ ಹೆಚ್ಚು ಚಾಲಕರು, ನಿರ್ವಾಹಕರು, ಮೇಲ್ವಿಚಾರಣೆಗಾಗಿ 10 ಅಧಿಕಾರಿಗಳು ಹಾಗೂ 20 ಮೇಲ್ವಿಚಾರಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರಯಾಣಿಕರ ಒತ್ತಡಕ್ಕೆ ತಕ್ಕಂತೆ ಬಸ್ಸುಗಳನ್ನು ಹೆಚ್ಚಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಾರಿಗೆ ಇಲಾಖೆ: ಫೆ.5 ರಂದು ಬೈಕ್ ಹಾಗೂ ಕಾರ್ ರ‍್ಯಾಲಿ
ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ 2025 ಅಂಗವಾಗಿ ಬೈಕ್ ಹಾಗೂ ಕಾರ್ ರ‍್ಯಾಲಿ ಉದ್ಘಾಟನಾ ಸಮಾರಂಭವನ್ನು ಫೆಬ್ರವರಿ 5 ರಂದು ಬೆಳಿಗ್ಗೆ 10 ಗಂಟೆಗೆ ವಿದ್ಯಾನಗರದ ಬಿ.ವಿ.ಬಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಸಾರಿಗೆ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ, ಹುಬ್ಬಳ್ಳಿ ಧಾರವಾಡ ಮೋಟಾರು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್, ವಾಯುಮಾಲಿನ್ಯ ಪರೀಕ್ಷಣಾ ಕೇಂದ್ರ ಪ್ರವರ್ತಕರು, ಕೆ.ಎಲ್.ಇ. ಟೆಕ್ನಾಲಾಜಿಕಲ್ ಯುನಿವರ್ಸಿಟಿ ಹುಬ್ಬಳ್ಳಿ ಹಾಗೂ ಹುಬ್ಬಳ್ಳಿ ಮೋಟಾರು ವಾಹನ ಡೀಲರ್ಸ್ ಇವುಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಉಪಸ್ಥಿತಿ ರಿಲಿದೆ.
ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕರಾದ ಮಹೇಶ ಟೆಂಗಿನಕಾಯಿ ಅವರು ಅಧ್ಯಕ್ಷತೆ ವಹಿಸುವರು.ಕಾಂಗ್ರೆಸ್‌ನ ಅನೇಕ ಮುಖಂಡರು, ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಅಧಿಕಾರಿಗಳು, ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.












Click it and Unblock the Notifications