ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಬೇಡಿ: ಸಿಎಂ ಖಡಕ್ ಎಚ್ಚರಿಕೆ

ವಿಜಯನಗರ, ಏಪ್ರಿಲ್ 17: ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ವಿವಾದಾತ್ಮಕ ಪೋಸ್ಟ್‌ಗೆ ಸಂಬಂಧಿಸಿದಂತೆ ನಡೆದಿರುವ ಗಲಾಟೆ ಕುರಿತು ಅವರು ಇಂದು ಭಾ.ಜ.ಪ. ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗುಳ್ಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ ಯಾರೂ ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಬೇಡಿ. ಕರ್ನಾಟಕ ರಾಜ್ಯ ಇದನ್ನು ಸಹಿಸುವುದಿಲ್ಲ. ಕಾನೂನು ತನ್ನ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ಎಲ್ಲಾ ಸಂಘಟನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.

ಈಗಾಗಲೇ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಯಾರೇ ಕಾನೂನನ್ನು ಕೈಗೆ ತೆಗೆದುಕೊಂಡರೂ ಕಠಿಣ ಕ್ರಮ ತೆಗೆದುಕೊಳ್ಳಲು ಪೊಲೀಸರು ಹಿಂದೆ ಮುಂದೆ ನೋಡುವುದಿಲ್ಲ. ಇದಕ್ಕೆ ಪ್ರಚೋದನೆ ನೀಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಇದಕ್ಕೆ ರಾಜಕೀಯ ಬಣ್ಣ ನೀಡುವುದು ಬೇಡ . ಈ ಘಟನೆಯನ್ನು ಕಾನೂನಾತ್ಮಕ ಘಟನೆ ಎಂತಲೇ ಕಾಣಬೇಕು. ಅಂದಾಗ ಮಾತ್ರ ಇಂಥವು ನಿಲ್ಲುತ್ತದೆ ಎಂದರು.

ಹುಬ್ಬಳ್ಳಿಯಲ್ಲಿ ನಿನ್ನೆ ಕಾನೂನನ್ನು ಕೈಗೆ ತೆಗೆದುಕೊಳ್ಳುವ ಕೆಲಸವಾಗಿದೆ. ಪೊಲೀಸರು ವಾಟ್ಸಾಪ್ ಪೋಸ್ಟ್ ಒಂದರ ಮೇಲೆ ಕ್ರಮ ತೆಗೆದುಕೊಂಡು ಬಂಧಿಸಿ ಎಲ್ಲಾ ಕ್ರಮ ತೆಗೆದುಕೊಂಡರೂ ಕೂಡ ಪ್ರಚೋದನಕಾರಿಯಾಗಿ ಪೊಲೀಸ್ ಠಾಣೆ ಎದುರಿಗೆ ಬಂದು ಗಲಾಟೆ ಮಾಡಿ ಪೊಲೀಸರಿಗೂ ಏಟು ಬೀಳುವಂತೆ ಮಾಡಿದ್ದಾರೆ. ತದನಂತರ ಹಳೆ ಹುಬ್ಬಳ್ಳಿಯ ವಿವಿಧ ಭಾಗಗಳಲ್ಲಿ ಕಲ್ಲು ತೂರಾಟ ಮಾಡಿರುವುದು ಅಕ್ಷಮ್ಯ ಅಪರಾಧ ಎಂದರು.

Hubballi Violence: Stringent Action Will Be Taken Against Rioters: Basavaraj Bommai

ಇನ್ನೂ ಈ ಬಗ್ಗೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. 'ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ'.

ಈದ್ಗಾ ಮೈದಾನದ ವಿವಾದಕ್ಕೆ ತೆರೆಬಿದ್ದ ನಂತರ ನೆಮ್ಮದಿಯಾಗಿದ್ದ ಹುಬ್ಬಳ್ಳಿಯ ಶಾಂತ ವಾತಾವರಣ ಕದಡುವ ಷಡ್ಯಂತ್ರವನ್ನು ಯಾರೂ ಸಹಿಸಬಾರದು. ಸಾಮರಸ್ಯ ಮೂಡಿಸಬೇಕಾದ ಜಾಲತಾಣದಲ್ಲಿ ಒಂದು ಧರ್ಮದ ಯುವಕ ಹಂಚಿಕೊಂಡ ಪ್ರಚೋದನಾತ್ಮಕ ಪೋಸ್ಟ್‌ ರಾದ್ಧಾಂತಕ್ಕೆ ಕಾರಣ.

ಕಿಡಿಗೇಡಿ, ತಿಳಿಗೇಡಿ ಯುವಕನ ಕೃತ್ಯದಿಂದ ಉದ್ರಿಕ್ತಗೊಂಡ ಇನ್ನೊಂದು ಸಮುದಾಯದ ಕೆಲವರು ರಾತ್ರಿಯೆಲ್ಲ ಹುಬ್ಬಳ್ಳಿಯಲ್ಲಿ ಬೀಭತ್ಸ ಸೃಷ್ಟಿಸಿ ದ್ವೇಷದ ಬೆಂಕಿಗೆ ಪೆಟ್ರೋಲ್‌ ಸುರಿಯದೇ ಸಹನೆ ಮೆರೆಯಬೇಕಿತ್ತು. ಪೊಲೀಸರ ಮೇಲೆ ದಾಳಿ, ಠಾಣೆ & ಆಸ್ಪತ್ರೆ ಮೇಲೆ ಕಲ್ಲುಗಳನ್ನು ಎಸೆದು ಹಾನಿ ಮಾಡಬಾರದಿತ್ತು. ಕಿಡಿಗೇಡಿ ಯುವಕನ ಬಂಧನವಾಗಿದೆ. ಕಾನೂನು ಅವನನ್ನು ನೋಡಿಕೊಳ್ಳುತ್ತದೆ. ಇನ್ನೊಂದು ಸಮುದಾಯವು ಕಾನೂನನ್ನು ಕೈಗೆತ್ತಿಕೊಳ್ಳದೆ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು ಸಹನೆಯಿಂದ ವರ್ತಿಸಬೇಕು. ಕಳೆದ ಕೆಲ ದಿನಗಳಿಂದ ಕರ್ನಾಟಕ ಕೋಮುದಳ್ಳುರಿಯಲ್ಲಿ ಬೇಯುತ್ತಿದೆ, ಎಲ್ಲರಿಗೂ ನೋವಾಗುತ್ತಿದೆ. ಅದು ಮುಂದುವರಿಯುವುದು ಬೇಡ ಎಂದು ಬರೆದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+