ಹುಬ್ಬಳ್ಳಿ: ನೀರು ಕೊಡದಿದ್ದರೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
ಹುಬ್ಬಳ್ಳಿ, ಮೇ 02: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕುಡಿಯಲು ನೀರಿಗೆ ಹಾಹಾಕಾರ ಮುಂದುವರಿದಿದೆ. ಇದೀಗ ಹುಬ್ಬಳ್ಳಿಯ ನಿವಾಸಿಗಳು ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ.
ಹೌದು, ಹುಬ್ಬಳ್ಳಿಯಲ್ಲಿನ ವಿದ್ಯಾನಗರದ ತಿಮ್ಮಸಾಗರ ಬಡಾವಣೆ ನಿವಾಸಿಗಳು ಕುಡಿಯುವ ನೀರಿಗಾಗಿ ಆಗ್ರಹಿಸಿ ಗುರುವಾರ ಹೊಸೂರು ಕೋರ್ಟ್ ಎದುರು ಖಾಲಿಕೊಡ ಪ್ರದರ್ಶಿಸಿ, ರಸ್ತೆ ತಡೆ ನಡೆಸಿದರು. ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ಕನಿಷ್ಠ ಸೌಲಭ್ಯವಾದ ಕುಡಿಯುವ ನೀರು ಕೊಡಲು ಸಾಧ್ಯವಾಗದ ಪಾಲಿಕೆಗೆ ಹಾಗೂ ಜನರ ಸಮಸ್ಯೆ ಆಲಿಸದ ಪಾಲಿಕೆ ಸದಸ್ಯರಿಗೆ, ಶಾಸಕರಿಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನೀರು ಕೊಡದಿದ್ದರೆ ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆ ಬಹಿಷ್ಕರಿಸುವುದಾಗಿ ಅವರೆಲ್ಲ ಎಚ್ಚರಿಕೆ ನೀಡಿದರು.
10-15 ದಿನಕ್ಕೊಮ್ಮೆ ನೀರು ಪೂರೈಕೆ: ಸಂಕಷ್ಟ
ಜಲಮಂಡಳಿ ಸುಪರ್ದಿಯಲ್ಲಿ ಇದ್ದಾಗ ಐದು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಸುತ್ತಿದ್ದರು. ಎರಡು ವರ್ಷದ ಹಿಂದೆ ಎಲ್ ಆ್ಯಂಡ್ ಟಿ ಕಂಪನಿಗೆ ಹಸ್ತಾಂತರಿಸಿದ ನಂತರ, ಏಳು ದಿನಕ್ಕೊಮ್ಮೆ ನೀರು ಪೂರೈಸಲು ಆರಂಭಿಸಿದರು. ಎರಡು ತಿಂಗಳಿನಿಂದ 10-15 ದಿನಗಳಿಗೊಮ್ಮೆ ಪೂರೈಸಲಾಗುತ್ತಿದೆ.
ಬೆಳಗ್ಗೆಯಿಂದ ಪಾಲಿಕೆಗೆ, ಎಲ್ ಆ್ಯಂಡ್ ಟಿ ಕಂಪನಿಗೆ ದೂರು ನೀಡಿದರೂ ಯಾವುದೇ ಸ್ಪಂದನೆ ದೊರೆಯುತ್ತಿಲ್ಲ. ನಿವಾಸಿಗಳೆಲ್ಲ ಒಟ್ಟಾಗಿ ಚುನಾವಣೆ ಬಹಿಷ್ಕಾರಿಸಲು ತೀರ್ಮಾನಿಸಿದ್ದೇವೆ' ಎಂದು ನಿವಾಸಿ ಆಶಾ ವಿವರಿಸಿದರು.

ಸಮಸ್ಯೆ ಆಲಿಸದ ಅಧಿಕಾರಿಗಳು-ಜನಪ್ರತಿನಿಧಿಗಳು
ಡಾ. ಸಿ.ಪಿ. ಸಿಂಧೂರ ಮಾತನಾಡಿ, 'ಸ್ಥಳೀಯ ನಿವಾಸಿಗಳು ಪಾಲಿಕೆಗೆ ಸಾಕಷ್ಟು ದೂರು ನೀಡಿದ್ದರೂ, ಯಾರೊಬ್ಬರೂ ಸಮಸ್ಯೆ ಆಲಿಸುತ್ತಿಲ್ಲ. ಪಾಲಿಕೆ ಅಧಿಕಾರಿಗಳು, ಸದಸ್ಯರು, ಶಾಸಕರುಮಲಗಿದ್ದಾರೆ. ಕುಡಿಯುವ ನೀರಿಗಾಗಿ ಬೀದಿಗೆ ಇಳಿದು ಪ್ರತಿಭಟಿಸುವ ಪರಿಸ್ಥಿತಿ ಬಂದಿರುವುದು ದೊಡ್ಡ ದುರಂತ ಎಂದರು.
ಹುಬ್ಬಳ್ಳಿಯಲ್ಲಿ ಅತಿಹೆಚ್ಚು ತೆರಿಗೆ ಪಾವತಿಸುವ ಬಡಾವಣೆ ನಮ್ಮದಾಗಿದ್ದು, ಕನಿಷ್ಠ ಸೌಲಭ್ಯವೂ ಸಿಗುತ್ತಿಲ್ಲ. ಏನೇನೋ ಗ್ಯಾರಂಟಿ ನೀಡುವ ಸರ್ಕಾರಕ್ಕೆ, ಕನಿಷ್ಠ ಸೌಲಭ್ಯವಾದ ನೀರು ಕೊಡಲು ಸಾಧ್ಯವಾಗುತ್ತಿಲ್ಲ. ಎಲ್ಲವೂ ಕೇಳಿಯೇ ಪಡೆಯಬೇಕಾದರೆ ತೆರಿಗೆ ಯಾಕೆ ಕಟ್ಟಿಸಿಕೊಳ್ಳಬೇಕು. ಜನಪ್ರತಿನಿಧಿಗಳು ವೋಟ್ ಕೇಳಲು ಬರುತ್ತಾರೆ, ಸೌಲಭ್ಯ ನೀಡಲು ಆಗುತ್ತಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಡಾವಣೆಯ ಮೂವತ್ತಕ್ಕೂ ಹೆಚ್ಚು ನಿವಾಸಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅರ್ಧಗಂಟೆಗೂ ಹೆಚ್ಚು ಸಮಯ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ಮುಖಂಡರಾದ ಸಾವಿತ್ರಿ ನಾಯಕ, ಆಶಾ ಹುಬ್ಳೀಕರ್, ಮೈತ್ರಾ ಮುಂತಾದವರು ಭಾಗವಹಿಸಿದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications