ರೀಲ್ಸ್‌ನಲ್ಲಿ ನರ್ಸ್‌ಗಳಿಗೆ ಅವಮಾನ: 11 ಎಂಬಿಬಿಎಸ್ ವಿದ್ಯಾರ್ಥಿಗಳ ಅಮಾನತು- ಹುಬ್ಬಳ್ಳಿ ಕಿಮ್ಸ್‌ನಲ್ಲಿ ನಡೆದಿದ್ದಾರೂ ಏನು?
ಹುಬ್ಬಳ್ಳಿ, ಆಗಸ್ಟ್ 08: ಇನ್‌ಸ್ಟಾಗ್ರಾಮ್ ರೀಲ್ಸ್‌ನಲ್ಲಿ ನರ್ಸ್‌ಗಳನ್ನು ಅವಮಾನಿಸಿದ್ದಕ್ಕಾಗಿ 11 ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನರ್ಸ್‌ಗಳು ನೀಡಿದ ದೂರಿನ ಆಧಾರದ ಮೇಲೆ ಹುಬ್ಬಳ್ಳಿಯ ವೈದ್ಯಕೀಯ ಕಾಲೇಜಿನ ( ಕಿಮ್ಸ್ ) 11 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ.
ಎರಡನೇ ವರ್ಷದ ಬ್ಯಾಚುಲರ್ ಆಫ್ ಮೆಡಿಸಿನ್ ಮತ್ತು ಬ್ಯಾಚುಲರ್ ಆಫ್ ಸರ್ಜರಿ ( ಎಂಬಿಬಿಎಸ್ ) ವಿದ್ಯಾರ್ಥಿಗಳನ್ನು ಒಂದು ವಾರದವರೆಗೆ ಅಮಾನತುಗೊಳಿಸಲಾಗಿದೆ ಎಂದು ಕಾಲೇಜು ಪ್ರಾಂಶುಪಾಲರು ಆದೇಶದಲ್ಲಿ ತಿಳಿಸಿದ್ದಾರೆ.

ಕೆಲವು ವಿದ್ಯಾರ್ಥಿಗಳು ಪ್ರದರ್ಶಿಸಿದ ಸ್ಕಿಟ್‌ನ ರೀಲ್‌ವೊಂದನ್ನು ಒಬ್ಬ ವಿದ್ಯಾರ್ಥಿಯು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾನೆ. ಈ ರೀಲ್ಸ್‌ನಲ್ಲಿ ನರ್ಸ್‌ಗಳನ್ನು ನಂಬಬೇಡಿ ಎಂದು ಹೇಳಲಾಗಿದೆ. ಇದರ ಜೊತೆಗೆ ಹಾಡೊಂದರ ತುಣುಕನ್ನು ಸೇರಿಸಲಾಗಿದೆ. ಇದರಿಂದ ಕೆರಳಿದ ದಾದಿಯರ ಸಂಘ ಕ್ರಮಕ್ಕೆ ಆಗ್ರಹಿಸಿದೆ.
'ವಿಡಿಯೋದಲ್ಲಿ ಬಳಸಲಾದ ಪದಗಳು ಅತ್ಯಂತ ಕೀಳು ಮಟ್ಟದ್ದಾಗಿವೆ. ಪ್ರಪಂಚದಾದ್ಯಂತದ ಮಹಿಳೆಯರು ಮತ್ತು ದಾದಿಯರಿಗೆ ಮುಜುಗರವನ್ನುಂಟು ಮಾಡುತ್ತವೆ' ಎಂದು ಕರ್ನಾಟಕ ದಾದಿಯರ ಸಂಘವು ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕಿಮ್ಸ್) ನಿರ್ದೇಶಕರಿಗೆ ಬರೆದ ಪತ್ರದಲ್ಲಿ ತಿಳಿಸಿದೆ.
ಈ ಹಿನ್ನಲೆಯಲ್ಲಿ ಆರೋಪಿ ವಿದ್ಯಾರ್ಥಿಗಳನ್ನು ಒಂದು ವಾರ ಅಮಾನತುಗೊಳಿಸಿ ಪ್ರಾಚಾರ್ಯ ಡಾ. ಈಶ್ವರ ಹೊಸಮನಿ ಆದೇಶ ಹೊರಡಿಸಿದ್ದಾರೆ.

ರೀಲ್ಸ್ ವಿವಾದ ಭುಗಿಲೇಳುತ್ತಿದ್ದಂತೆ ವಿದ್ಯಾರ್ಥಿಗಳು ಬೇಷರತ್ತಾಗಿ ಕ್ಷಮೆ ಯಾಚಿಸಿದ್ದಾರೆ. ರೀಲ್‌ನಲ್ಲಿನ ದೃಶ್ಯಗಳು ಕಾಲ್ಪನಿಕ ಮತ್ತು ಮನರಂಜನೆಗಾಗಿ ಮಾತ್ರ ಮಾಡಲ್ಪಟ್ಟಿದೆ' ಎಂದು ಅವರು ಹೇಳಿದ್ದಾರೆ.
'ಶುಶ್ರೂಷಾ ಸಿಬ್ಬಂದಿಗೆ ವಿಡಿಯೊದಿಂದ ನೋವಾಗಿದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಅವರನ್ನು ಅವಮಾನಿಸುವುದು ನಮ್ಮ ಉದ್ದೇಶವಾಗಿರಲಿಲ್ಲ. ವಿಡಿಯೋದಲ್ಲಿರುವ ವಿಚಾರಗಳು ದಾದಿಯರನ್ನು ನೋಯಿಸಿದೆ ಎಂದು ನಮಗೆ ಗೊತ್ತಾಗಿದೆ. ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ' ಎಂದು ಎಂಬಿಬಿಎಸ್ ವಿದ್ಯಾರ್ಥಿಗಳು ತಿಳಿಸಿದ್ದಾರೆ.












Click it and Unblock the Notifications