ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಟಿ ದಾಳಿಗೆ ಹೆದರಲಿಲ್ಲ ಇನ್ನು ಕಣ್ಣೀರು ಹಾಕಿ ಓಟು ಕೇಳ್ತೀನಾ?: ಡಿಕೆಶಿ

|
Google Oneindia Kannada News

ಹುಬ್ಬಳ್ಳಿ, ಮೇ 10: ಶಿವಳ್ಳಿ ಸಾವು ನೆನೆದು ಡಿ.ಕೆ.ಶಿವಕುಮಾರ್ ಅವರು ಸಾರ್ವಜನಿಕವಾಗಿ ಕಣ್ಣೀರು ಹಾಕಿದ್ದನ್ನು, 'ಮತ ಕೇಳಲು ಕಣ್ಣೀರು ಸುರಿಸಿದ್ದಾರೆ' ಎಂದು ಬಿಜೆಪಿಯ ಕೆಲವರು ಟೀಕಿಸಿದ್ದರು, ಈ ಟೀಕಿಗೆ ಡಿ.ಕೆ.ಶಿವಕುಮಾರ್ ಉತ್ತರಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಐಟಿ ದಾಳಿಗೆ ಹೆದರಿಲಿಲ್ಲ, ಇನ್ನು ಕಣ್ಣೀರು ಹಾಕಿ ಮತ ಕೇಳುತ್ತೇನಾ ಎಂದು ಹೇಳಿದರು.

ಮಾಜಿ ಸಚಿವ ಶಿವಳ್ಳಿ ನೆನೆದು ಬಹಿರಂಗಸಭೆಯಲ್ಲಿ ಕಣ್ಣೀರಿಟ್ಟ ಡಿ.ಕೆ. ಶಿವಕುಮಾರ್ ಮಾಜಿ ಸಚಿವ ಶಿವಳ್ಳಿ ನೆನೆದು ಬಹಿರಂಗಸಭೆಯಲ್ಲಿ ಕಣ್ಣೀರಿಟ್ಟ ಡಿ.ಕೆ. ಶಿವಕುಮಾರ್

ಕಣ್ಣೀರು ಹಾಕಿ ಮತ ಕೇಳುವ ಅಗತ್ಯ ನನಗಿಲ್ಲ. ಶಿವಳ್ಳಿ ನನ್ನ ಆಪ್ತ ಸ್ನೇಹಿತ. ಆತ ನಮ್ಮನ್ನು ಅಗಲಿರುವುದನ್ನು ನೆನೆದು ನಾನು ಭಾವುಕನಾದೆ ಎಂದು ಡಿ.ಕೆ.ಶಿವಕುಮಾರ್ ಸ್ಪಷ್ಟೀಕರಿಸಿದರು.

I did not afraid of IT raids, then how can i cry for votes: DK Shivakumar

ನಾನು ಈ ಹಿಂದೆಯೂ ಶಿವಳ್ಳಿ ಪರ ಕೆಲಸ ಮಾಡಿದ್ದೆ. ಈಗ ಅವರ ಕುಟುಂಬದವರ ಪರ ಕೆಲಸ ಮಾಡುತ್ತಿದ್ದೇನೆ. ಶಿವಳ್ಳಿಯವರು ಕ್ಷೇತ್ರದ ಇಷ್ಟು ದಿನಗಳ ಕಾಲ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಜನರ ಮುಂದಿಟ್ಟು ಮತ ಕೇಳುತ್ತಿದ್ದೇವೆ ಎಂದು ಡಿಕೆಶಿ ಹೇಳಿದರು.

ಶ್ರೀರಾಮುಲು ವಿರುದ್ಧ ಆಯೋಗಕ್ಕೆ ದೂರು ಸಲ್ಲಿಸಿದ ಡಿ.ಕೆ.ಶಿವಕುಮಾರ್‌ಶ್ರೀರಾಮುಲು ವಿರುದ್ಧ ಆಯೋಗಕ್ಕೆ ದೂರು ಸಲ್ಲಿಸಿದ ಡಿ.ಕೆ.ಶಿವಕುಮಾರ್‌

ಶಾಸಕರು, ಪದಾಧಿಕಾರಿಗಳು ಉತ್ಸಾಹದಿಂದ ಚುನಾವಣೆ ನಡೆಸುತ್ತಿದ್ದಾರೆ. ಇದರಿಂದ ತುಂಬಾ ಸಂತೋಷವಾಗಿದೆ. ಕ್ಷೇತ್ರದಲ್ಲಿ ನಮ್ಮ ಗ್ರೌಂಡ್ ರಿಪೋರ್ಟ್ ಚೆನ್ನಾಗಿದೆ. ಚುನಾವಣೆಯಲ್ಲಿ ಜೆಡಿಎಸ್ ಮುಖಂಡರು ಸಕ್ರಿಯವಾಗಿ ನಮ್ಮ ಪರ ಕೆಲಸ ಮಾಡುತ್ತಿದ್ದಾರೆ ಎಂದರು.

English summary
Minister DK Shivakumar said i did not afraid of IT raids, then how can i cry for votes. Shivalli is my close friend, i cried for him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X