ನಾನು 150 ಅಂತಾ ಎಲ್ಲೂ ಹೇಳಿಲ್ಲ, ಒಟ್ನಲ್ಲಿ ಸಮೀಕ್ಷೆಗಳು ಉಲ್ಟಾ ಹೊಡೆಯಲಿವೆ: ಸಿಎಂ ಭವಿಷ್ಯ

ಹುಬ್ಬಳ್ಳಿ, ಮೇ, 11: ವಿಧಾನಸಭೆ ಚುನಾವಣೆಯ ಮತದಾನ ನಿನ್ನೆ ಮುಗಿದಿದ್ದು, ಮೇ 13ಕ್ಕೆ ಫಲಿತಾಂಶ ಹೊರಬೀಳಲಿದೆ. ಈ ಕುರಿತು ಶಿಗ್ಗಾವಿಯಲ್ಲಿ ಪ್ರತಿಕ್ರಿಯಿದ ಸಿಎಂ ಬಸವರಾಜ ಬೊಮ್ಮಾಯಿ, ಶಿಗ್ಗಾವಿ ಜನತೆ ತೋರಿದ ಪ್ರೀತಿಗೆ ನಾನು ಚಿರಋಣಿ. ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಿದರು. ನನ್ನ ವಿರುದ್ಧ ಷಡ್ಯಂತ್ರ, ಅಪ್ರಚಾರ ಮಾಡಿದರು. ಆದರೆ ಅದು ನಿನ್ನೆಗೆ ಮುಗಿದಿವೆ. ನಾನು ದೊಡ್ಡ ಬಹುಮತದಿಂದ ಗೆಲ್ಲುತ್ತೇನೆ. ಅಲ್ಲದೆ ಸಮೀಕ್ಷೆಗಳು ಉಲ್ಟಾ ಹೊಡೆಯಲಿವೆ ಎಂದರು.

ನಗರದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮತದಾನೋತ್ತರ ಸಮೀಕ್ಷೆಗಳು ಕಳೆದ ಬಾರಿ ಕಾಂಗ್ರೆಸ್ 107ಕ್ಕೂ ಅಧಿಕ ಸ್ಥಾನ ಅಂತಾ ಹೇಳಿದ್ದವು. ಆದರೆ ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈಗಲೂ ಅದೇ ನಂಬಿಕೆಯಿದೆ. ‌ಮೋದಿಯವರ ಪ್ರಚಾರ ನಮಗೆ ಪ್ಲಸ್ ಆಗಿದೆ ಎಂದರು.

basavraj bommai

ಯುವಕರು ಮತ್ತು ಮಹಿಳೆಯರು ನಮ್ಮ ಪರವಾಗಿ ಮತದಾನ ಮಾಡಿದ್ದಾರೆ. ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೆವೆ ಎಂದು ನನಗೆ ವಿಶ್ವಾಸ ಇದೆ. ಅತಂತ್ರ ಎಂಬ ಪ್ರಶ್ನೆಗೆ ಉತ್ತರ ನೀಡಲ್ಲ. ನಾನು 150 ಅಂತಾ ಎಲ್ಲೂ ಹೇಳಿಲ್ಲ. ಆದರೆ ಬಹುಮತ ಅಂತ ಹೇಳಿದ್ದೆ. ಈಗಲೂ ಅದೇ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+