ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ಪೀಕರ್‌ಗೆ ಏಕವಚನ: ಯಾರ ಬಳಿ ಹೇಗೆ ಮಾತನಾಡಬೇಕು ಗೊತ್ತಿದೆ ಎಂದ ಸಿದ್ದರಾಮಯ್ಯ

|
Google Oneindia Kannada News

ಹುಬ್ಬಳ್ಳಿ, ಅಕ್ಟೋಬರ್ 26: ನಾನು ಸ್ಪೀಕರ್‌ಗೆ ಏಕವಚನ ಕೊಟ್ಟು ಮಾತನಾಡಿಲ್ಲ, ನನ್ನ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಲಿ ನೋಡೋಣ ಎಂದು ಸಿದ್ದರಾಮಯ್ಯ ಖಾರವಾಗಿಯೇ ನುಡಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾನು ಸ್ಪೀಕರ್‌ಗೆ ಏಕವಚನದಲ್ಲಿ ಮಾತನಾಡಿಲ್ಲ, ಅವಹೇಳನಕಾರಿಯಾಗಿ ಮಾತನಾಡಿಲ್ಲ, ಯಾರ ಜೊತೆ ಹೇಗೆ ಮಾತನಾಡಬೇಕು ಎಂದು ಗೊತ್ತಿದೆ ಎಂದರು.

ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗುತ್ತಾರೆ ಅನ್ನುವುದು ಬರೀ ಗಾಳಿಸುದ್ದಿ ಎಂದ ಸಿದ್ದರಾಮಯ್ಯಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗುತ್ತಾರೆ ಅನ್ನುವುದು ಬರೀ ಗಾಳಿಸುದ್ದಿ ಎಂದ ಸಿದ್ದರಾಮಯ್ಯ

ಅಧಿವೇಶನದ ಸಂದರ್ಭದಲ್ಲಿ ಸ್ಪೀಕರ್‌ಗೆ ಏಕವಚನದಲ್ಲಿ ಸಿದ್ದರಾಮಯ್ಯ ಅವರು ಉದ್ಘರಿಸಿದ್ದರು ಎನ್ನುವ ವಿಚಾರ ಚರ್ಚೆಗೆ ಬಂದಿತ್ತು.

ಯಡಿಯೂರಪ್ಪ ಹೇಳಿದ ತಕ್ಷಣ ಕ್ಷಮೆ ಕೇಳಬೇಕೇ?

ಯಡಿಯೂರಪ್ಪ ಹೇಳಿದ ತಕ್ಷಣ ಕ್ಷಮೆ ಕೇಳಬೇಕೇ?

ಯಡಿಯೂರಪ್ಪ ಹೇಳಿದ ತಕ್ಷಣ ಕ್ಷಮೆ ಕೇಳಬೇಕೆ, ಏಕೆ ಕ್ಷಮೆ ಕೇಳಬೇಕು ಎಂದು ಪ್ರಶ್ನಿಸಿದರು. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಿದೆ, ಕೆಲವರಿಗೆ ಇದುವರೆಗೂ ಪರಿಹಾರ ಸಿಕ್ಕಿಲ್ಲ ಅನೇಕರ ಹೆಸರನ್ನು ಕೈಬಿಟ್ಟಿದ್ದಾರೆ ಎಂದು ಆರೋಪಿಸಿದರು.

ಬಿದ್ದುಹೋಗಿರುವ ಮನೆ, ಅಂಗಡಿಗಳಿಗೆ ಪರಿಹಾರ ನೀಡಿ

ಬಿದ್ದುಹೋಗಿರುವ ಮನೆ, ಅಂಗಡಿಗಳಿಗೆ ಪರಿಹಾರ ನೀಡಿ

ಬಿದ್ದುಹೋಗಿರುವ ಮನೆ , ಅಂಗಡಿಗಳಿಗೆ ಪರಿಹಾರವನ್ನು ನೀಡಿ, ಮಳೆ, ನೆರೆಗೆ ಸಿಲುಕಿ ಬಿದ್ದುಹೋಗಿರುವ ಶಾಲೆಗಳನ್ನೂ ಇನ್ನೂ ದುರಸ್ತಿ ಮಾಡಿಲ್ಲ, ಮಕ್ಕಳು ಸಮುದಾಯ ಭವನ, ದೇವಸ್ಥಾನಗಳಲ್ಲಿ ಪಾಠ ಕಲಿಯುತ್ತಿದ್ದಾರೆ ಎಂದು ಹೇಳಿದರು.

ಯಡಿಯೂರಪ್ಪ ಅವರಿಂದ ಪಾಠ ಕಲಿಯುವ ಅಗತ್ಯವಿಲ್ಲ

ಯಡಿಯೂರಪ್ಪ ಅವರಿಂದ ಪಾಠ ಕಲಿಯುವ ಅಗತ್ಯವಿಲ್ಲ

ನಾನು 40 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ ಯಾರ ಬಳಿ ಹೇಗೆ ಮಾತನಾಡಬೇಕು ಎನ್ನುವ ಪರಿಜ್ಞಾನವಿದೆ , ಯಡಿಯೂರಪ್ಪ ಅವರಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ನೆರೆ ಪರಿಹಾರಕ್ಕೆ ಹಣದ ತೊಂದರೆ ಇಲ್ಲ

ನೆರೆ ಪರಿಹಾರಕ್ಕೆ ಹಣದ ತೊಂದರೆ ಇಲ್ಲ

ನೆರೆ ಪರಿಹಾರಕ್ಕೆ ಹಣದ ತೊಂದರೆ ಇಲ್ಲ. ಸಂತ್ರಸ್ತರ ನೆರವಿಗೆ ಧಾವಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ರಾಜ್ಯದ ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಮನೆ ಕಟ್ಟಲು 5‌ಲಕ್ಷ ಪರಿಹಾರ ಧನ ನಿಗದಿ ಮಾಡಲಾಗಿದೆ. ಭಾಗಶಃ ಮನೆ ಹಾನಿಗೆ 1 ಲಕ್ಷ ರೂ. ಹಣವನ್ನು ನೀಡಲಾಗುತ್ತಿದೆ. ಇದುವರೆಗೂ ಸರ್ಕಾರದಿಂದ 1200 ಕೋಟಿ ಪರಿಹಾರ ಧನ ಬಿಡುಗಡೆ ಮಾಡಿ ನೆರೆ ಪರಿಹಾರ ಕೈಗೊಳ್ಳಲಾಗಿದೆ ಎಂದರು.

English summary
Opposition Leader Siddaramaiah Says,I have not spoken to the speaker singularly. I am there in politics from 40 years I know How to speak With whom.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X