ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾನು ಮತ್ತೆ ಸಿಎಂ ಆಗ್ತೀನಿ ಇದು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ: ಸಿದ್ದರಾಮಯ್ಯ

|
Google Oneindia Kannada News

Recommended Video

Siddaramaiah : If Congress comes to power again I will be the chief minister | Oneindia Kannada

ಹುಬ್ಬಳ್ಳಿ, ನವೆಂಬರ್ 25: ಮಧ್ಯಂತರ ಚುನಾವಣೆ ನಡೆದರೆ ಕಾಂಗ್ರೆಸ್ ನೂರಕ್ಕೆ ನೂರಷ್ಟು ಅಧಿಕಾರಕ್ಕೆ ಬರುತ್ತೆ ಆಗ ನಾನೇ ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಧ್ಯಂತರ ಚುನಾವಣೆ ನಡೆದೇ ನಡೆಯುತ್ತದೆ, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ, ಆಗ ಮತ್ತೆ ನಾನೇ ಮುಖ್ಯಮಂತ್ರಿಯಾಗುತ್ತೇನೆ ಇದು ಹೈಕಮಾಂಡ್ ನಿರ್ಧಾರ ಎಂದು ತಿಳಿಸಿದರು.

ನಾನು ಈಗಾಗಲೇ 5 ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದೇನೆ. ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುತ್ತೇನೆ. ಉಪಚುನಾವಣೆ ನಂತರ ರಾಜ್ಯ ರಾಜಕೀಯ ಬದಲಾವಣೆ ಆಗುತ್ತದೆ ಎಂದರು.

ಉಪ ಚುನಾವಣೆ; ಸಿದ್ದರಾಮಯ್ಯಗೆ ಬಿಜೆಪಿ ಚಾಲೆಂಜ್!ಉಪ ಚುನಾವಣೆ; ಸಿದ್ದರಾಮಯ್ಯಗೆ ಬಿಜೆಪಿ ಚಾಲೆಂಜ್!

ಬಿಜೆಪಿ 8 ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜೀನಾಮೆ ಕೊಡಲೇಬೇಕು. 17 ಜನರಿಗೆ ರಾಜೀನಾಮೆ ಕೊಡಿಸಿ ಕುದುರೆ ವ್ಯಾಪಾರ ಮಾಡಿದ್ದಾರೆ ಜೆಡಿಎಸ್ ಬಿಜೆಪಿಗೆ ಬೆಂಬಲ ಕೊಡಲ್ಲ ನನಗೆ ನಂಬಿಕೆ ಇದೆ. ಅವರು ಬಿಜೆಪಿ ಬೆಂಬಲಿಸುವುದಿಲ್ಲ. ಬಿಎಸ್‍ವೈ ಡಿಸ್ಟರ್ಬ್ ಆಗಿದ್ದಾರೆ ಅದಕ್ಕೆ ಏನೇನೋ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

 ಬಿಜೆಪಿ ಗೆಲ್ಲದಿದ್ದರೆ ಬಿಎಸ್‌ವೈ ರಾಜೀನಾಮೆ ನೀಡಲಿ

ಬಿಜೆಪಿ ಗೆಲ್ಲದಿದ್ದರೆ ಬಿಎಸ್‌ವೈ ರಾಜೀನಾಮೆ ನೀಡಲಿ

ಉಪ ಚುನಾವಣೆಯಲ್ಲಿ 15ಕ್ಕೆ 15 ಕ್ಷೇತ್ರಗಳನ್ನು ಗೆಲ್ಲಲಿದ್ದೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳುತ್ತಿದ್ದಾರೆ. ಒಂದೊಮ್ಮೆ ಬಿಜೆಪಿ ಅಷ್ಟೂ ಸೀಟುಗಳನ್ನು ಗೆಲ್ಲದಿದ್ದರೆ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

 ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡಿಲ್ಲ

ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡಿಲ್ಲ

ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡಿಲ್ಲ, ಅವರು ಬೆಂಬಲ ನೀಡುತ್ತಾರೆ ಎಂದುಕೊಂಡು ಇವರು 15 ಕ್ಷೇತ್ರಗಳನ್ನೂ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ ನಾನು ಜೆಡಿಎಸ್‌ನಲ್ಲಿ ಇದ್ದವನು ನನಗೆ ಜೆಡಿಎಸ್ ಏನು ಎನ್ನುವುದು ತಿಳಿದಿದೆ ಎಂದರು.

 ಮಹಾರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ

ಮಹಾರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ

ಮಹಾರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ರಾತ್ರೋ ರಾತ್ರಿ ರಾಷ್ಟ್ರಪತಿ ಆಡಳಿತ ಹಿಂಪಡೆದಿದ್ದು, ಶಿವಸೇನೆ ಬಿಜೆಪಿಯಿಂದ ಈಗಾಗಲೇ ಹೊರಬಂದಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪತನವಾದ್ರೆ ನಾನು ಸಿಎಂ ಆಗುವುದಾಗಿ ಎಲ್ಲಿಯೂ ಹೇಳಿಲ್ಲ. ಬಿಜೆಪಿ ಸರ್ಕಾರ ಪತನವಾದ್ರೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರೋ ಸಾಧ್ಯತೆಯಿದೆ. ಮಧ್ಯಂತರ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಸ್ಪಷ್ಟ ಬಹುಮತ ದೊರೆಯಲಿದೆ. ಮುಂದೆ ನಾನು ಸಿಎಂ ಆಗೋ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದರು.

 ಉಪ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ

ಉಪ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ

ಉಪಚುನಾವಣೆ ನಂತರ ರಾಜ್ಯ ರಾಜಕೀಯ ಬದಲಾವಣೆ ಆಗುತ್ತದೆ. ಬಿಜೆಪಿ 8 ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜೀನಾಮೆ ಕೊಡಲೇಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

English summary
If the midterm elections are held, the Congress will come to power . Then I will become the chief minister again Says Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X