'ಮೋದಿ ಮುಂದೆ ಮಾತಾಡಕ್ಕಾಗಲ್ಲ ಅಂದ್ರೆ ಸಂಸದರು ರಾಜೀನಾಮೆ ನೀಡಲಿ'

ಹುಬ್ಬಳ್ಳಿ, ಜೂನ್ 5 : ಪ್ರಧಾನಿ ನರೇಂದ್ರ ಮೋದಿ ಎದುರು ಮಾತನಾಡಿ, ರಾಜ್ಯದ ಸಮಸ್ಯೆಗಳನ್ನು ಪರಿಹರಿಸುವುದಕ್ಕೆ, ಹಿತವನ್ನು ಕಾಯುವುದಕ್ಕೆ ಆಗಲಿಲ್ಲ ಅಂದರೆ ಸಂಸದರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ವಾಟಾಳ್ ನಾಗರಾಜ್ ಸೋಮವಾರ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.

ಜೂನ್ 12ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಎಂಇಎಸ್ ಕಾರ್ಯಕರ್ತರ ಗಡೀಪಾರು, ನೀರಾವರಿ ಯೋಜನೆಗಳ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳ ಸಲುವಾಗಿ ನೀಡಿರುವ ಬಂದ್ ಗೆ ಎರಡು ಸಾವಿರಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ಹೇಳಿದರು.[ಕನ್ನಡದ ಹೆಸರಲ್ಲಿ ಹೊಟ್ಟೆಪಾಡು, ವಾಟಾಳ್ ಬಂದ್ ಕರೆಗೆ ಸಂಸದ ಅಂಗಡಿ ವ್ಯಂಗ್ಯ]

'If MP's not able to talk to PM Modi, let submit their resignation'

ಅಂದು ಒಂದು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿಸ್ತೀವಿ, ರಾಜ್ಯದಾದ್ಯಂತ ಹೋರಾಟ ತೀವ್ರಗೊಳಿಸುತ್ತೇವೆ ಎಂದ ಅವರು, ಮುಂದಿನ ದಿನಗಳಲ್ಲಿ ಗೋವಾ ರಾಜ್ಯಕ್ಕೆ ಮುತ್ತಿಗೆ, ರೈಲು ಚಳವಳಿ, ರಾಷ್ಟ್ರೀಯ ಹೆದ್ದಾರಿ ತಡೆ ಸೇರಿದಂತೆ ವಿವಿಧ ಹೋರಾಟ ಮಾಡುತ್ತೇವೆ ಎಂದರು.[ಜೂನ್ 12ರಂದು ಕರ್ನಾಟಕ ಬಂದ್ ಗೆ ಕರೆ: ವಾಟಾಳ್ ನಾಗರಾಜ್]

ಕಳೆದ ಹಲವು ವರ್ಷಗಳಿಂದ ರಾಜ್ಯದಲ್ಲಿ ಶಾಶ್ವತ ನೀರಾವರಿ ಯೋಜನೆಗಳಿಗೆ ಗರ ಬಡಿದಿದೆ. ಆರ್ಥಿಕ ದುಃಸ್ಥಿತಿಯಲ್ಲಿರುವ ರೈತರ ಸಾಲ ಮನ್ನಾ ಮಾಡಲು ಎರಡು ರಾಷ್ಟ್ರೀಯ ಪಕ್ಷಗಳು ಕೆಸರೆರೆಚಾಟದಲ್ಲಿ ತೊಡಗಿವೆ ಎಂದು ವಾಟಾಳ್ ಆರೋಪಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+