ಹುಬ್ಬಳ್ಳಿ: ಅಕ್ರಮ ಮರಳು ಸಾಗಿಸುತ್ತಿದ್ದ 11 ಲಾರಿಗಳ ಜಪ್ತಿ
ಹುಬ್ಬಳ್ಳಿ, ಜೂನ್ 07 : ಅಕ್ರಮ ಮರಳು ಸಾಗಿಸುತ್ತಿದ್ದ 11 ಲಾರಿಗಳನ್ನ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಬುಧವಾರ ನಗರದಲ್ಲಿ ವಶಪಡಿಸಿಕೊಂಡಿದ್ದಾರೆ.
ಜಂಟಿ ಕಾರ್ಯಾಚರಣೆ ನಡೆಸಿದ ಎರಡು ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಹುಬ್ಬಳ್ಳಿಯ ಶಾಂತಿ ನಗರದ ವೃತ್ತದ ಬಳಿ ಬೆಳಿಗ್ಗೆ ಜಪ್ತಿ ಮಾಡಿದ್ದಾರೆ. ಪಾಸ್ ಹಾಗೂ ಸಂಬಂಧಿಸಿದ ಇಲಾಖೆಗಳ ಪರವಾನಗಿ ಇಲ್ಲದೆ ಗದಗ ಹಾಗೂ ಕೊಪ್ಪಳ ಜಿಲ್ಲೆಗಳಿಂದ ಹುಬ್ಬಳ್ಳಿ ನಗರಕ್ಕೆ 11 ಲಾರಿಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದರು.

ಇತ್ತ ಪೊಲೀಸರು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಲಾರಿ ತಡೆಯಲು ಮುಂದಾಗುತ್ತಿದ್ದಂತೆ ಲಾರಿ ಚಾಲಕರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿರುವ ಕೆಶ್ವಾಪುರ ಪೊಲೀಸರು ತನಿಖೆ ನಡೆಸುತ್ತಿದ್ಧಾರೆ.












Click it and Unblock the Notifications