ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿಯಲ್ಲಿ ಏಷ್ಯಾದಲ್ಲಿಯೇ ಮೊದಲ ಸಂಪೂರ್ಣ ಹವಾನಿಯಂತ್ರಿತ ಕೋರ್ಟ್ ಉದ್ಘಾಟನೆ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಆಗಸ್ಟ್.12: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳು ರಾಜ್ಯದಲ್ಲೇ ಅತೀ ವೇಗವಾಗಿ ಬೆಳೆಯುತ್ತಿರುವ ನಗರ. ಇದೀಗ ಹುಬ್ಬಳ್ಳಿ ನಗರದಲ್ಲಿ ಏಷ್ಯಾದಲ್ಲಿಯೇ ಮೊದಲ ಸಂಪೂರ್ಣ ಹವಾ ನಿಯಂತ್ರಿತ ನ್ಯಾಯಲಯ ಸಂಕೀರ್ಣದ ಲೋಕಾರ್ಪಣೆಗೆ ಸದ್ಯ ಕ್ಷಣಗಣನೆ ಶುರುವಾಗಿದೆ.

ಹೌದು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಿರ್ಮಿಸಲಾಗಿರುವ ನ್ಯಾಯಾಲಯ ಸಂಕೀರ್ಣ ದೇಶದ ಗಮನ ಸೆಳೆಯುತ್ತಿದೆ. ಹುಬ್ಬಳ್ಳಿಯ ವಿದ್ಯಾನಗರದ ತಿಮ್ಮಸಾಗರದಲ್ಲಿ ಐದು ಎಕರೆ ಹದಿನೈದು ಗುಂಟೆ ಜಾಗದಲ್ಲಿ ಕಟ್ಟಡ ತಲೆಯೆತ್ತಿದ್ದು, ಒಟ್ಟು ಏಳು ಮಹಡಿಗಳನ್ನು ಹೊಂದಿರುವ ಕಟ್ಟಡ ಸಂಪೂರ್ಣ ಕೇಂದ್ರೀಕೃತ ಹವಾನಿಯಂತ್ರಣ ವ್ಯವಸ್ಥೆ ಹೊಂದಿದೆ.

ಕೋರ್ಟ್ ಮೆಟ್ಟಿಲೇರಿದ ಮೆಟ್ರೋ ಭೂ ಸ್ವಾಧೀನ ವಿವಾದ ಕೋರ್ಟ್ ಮೆಟ್ಟಿಲೇರಿದ ಮೆಟ್ರೋ ಭೂ ಸ್ವಾಧೀನ ವಿವಾದ

ದೇಶದಲ್ಲಿ ಮಾತ್ರವಲ್ಲ, ಏಷಿಯಾದಲ್ಲಿಯೇ ಇದೊಂದು ವಿಶಿಷ್ಟ ಹಾಗೂ ಮೊದಲ ಸಂಪೂರ್ಣ ಹವಾನಿಯಂತ್ರಿತ ಕೋರ್ಟ್ ಎನ್ನಲಾಗುತ್ತಿದೆ. ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಹಾಗೂ ಸುಸಜ್ಜಿತವಾಗಿ ತಾಲೂಕು ಕೇಂದ್ರದಲ್ಲಿ ನಿರ್ಮಿಸಲಾಗಿರುವ ಏಕೈಕ ಕಟ್ಟಡ ಎನ್ನುವ ಹೆಗ್ಗಳಿಕೆಗೂ ಹುಬ್ಬಳ್ಳಿಯ ನ್ಯಾಯಾಲಯ ಸಂಕೀರ್ಣ ಪಾತ್ರವಾಗಿದೆ.

In Asia First full air conditioned court complex will be inaugurated

ಇಂದು ಆಗಸ್ಟ್ 12 ರಂದು ದೇಶದ ಸುಪ್ರೀಂ ಕೋಟ್೯ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಈ ವಿನೂತನ ಕೋಟ್೯ ಅನ್ನು ಲೋಕಾರ್ಪಣೆ ಮಾಡಲಿದ್ದಾರೆ.

ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಸೇರಿದಂತೆ 30 ನ್ಯಾಯಾಧೀಶರು ಹಾಗೂ ಸಿಎಂ ಎಚ್.ಡಿ. ಕುಮಾರಸ್ವಾಮಿ, ಹಲವು ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಒಟ್ಟು 180 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಬೃಹತ್ ಕೋರ್ಟ್ ಹುಬ್ಬಳ್ಳಿಯ ಮುಕುಟಕ್ಕೆ ಮತ್ತೊಂದು ಗರಿ ಎಂದೇ ಹೇಳಲಾಗುತ್ತಿದೆ. ಒಟ್ಟು ಏಳು ಅಂತಸ್ತಿನ ಕಟ್ಟದಲ್ಲಿ ಮೊದಲೆರಡು ಅಂತಸ್ತುಗಳನ್ನು ನ್ಯಾಯಾಧೀಶರು ಹಾಗೂ ವಕೀಲರಿಗೆ ಪಾರ್ಕಿಂಗ್ ಗೆ ಮೀಸಲಿಡಲಾಗಿದೆ.

In Asia First full air conditioned court complex will be inaugurated

ಮೊದಲ ಮಹಡಿಯಲ್ಲಿ ಹಾಲ್ ನಲ್ಲಿ ವಾದಿ- ಪ್ರತಿವಾದಿ ಹಾಗೂ ಸರಕಾರಿ ವಕೀಲರಿಗೆ ಪ್ರತ್ಯೇಕ ಟೇಬಲ್ ವ್ಯವಸ್ಥೆ ಮಾಡಲಾಗಿದೆ.

ನ್ಯಾಯಾಧೀಶರ ಧ್ವನಿ ಕೇಳಿಸಲು ಪಬ್ಲಿಕ್ ಅಡ್ರೆಸ್ ಸಿಸ್ಟಮ್ ಅಳವಡಿಸಲಾಗಿದೆ. ಇಡೀ ಸಂಕೀರ್ಣಕ್ಕೆ ಸಿಸಿಟಿವಿ ಕ್ಯಾಮೆಮರಾಗಳ ಕಣ್ಗಾವಲು ಇರಲಿದೆ. ಪ್ರತಿ ಮಹಡಿಯಲ್ಲಿ ನಾಲ್ಕು ನ್ಯಾಯಾಲಯ ಕಲಾಪದ ಸಭಾಂಗಣಗಳಿವೆ. ಲಾಕಪ್ ಕೊಠಡಿ ಮತ್ತು ಕಕ್ಷಿದಾರರಿಗೆ ವಿಶ್ರಾಂತಿ ಕೊಠಡಿಗಳಿವೆ.

ಒಂದು ಸಾವಿರ ವಾಹನ ನಿಲುಗಡೆ ವ್ಯವಸ್ಥೆ, ಕ್ಯಾಂಟೀನ್ ವ್ಯವಸ್ಥೆ, ಶೌಚಾಲಯಗಳ ವ್ಯವಸ್ಥೆಯಿದೆ. ಮಹಿಳೆಯರ ಅನುಕೂಲಕ್ಕಾಗಿ ಮಗುವಿಗೆ ಹಾಲುಣಿಸುವ ಕೊಠಡಿಯನ್ನೂ ನಿರ್ಮಿಸಲಾಗಿದೆ.

English summary
In Asia First full air conditioned court complex will be inaugurated today in Hubli. Supreme Court Chief Justice Deepak Mishra will launch this new court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X