ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರಗಳು : ಹುಬ್ಬಳ್ಳಿಯಲ್ಲಿ ಕನ್ನಡ ಸಂಘಟನೆಗಳ ಪ್ರತಿಭಟನೆ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಧಾರವಾಡ, ಜುಲೈ 30 : ಕನ್ನಡ ಒಕ್ಕೂಟ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನವಲಗುಂದ, ಧಾರವಾಡ ಮುಂತಾದ ಕಡೆ ಬಂಧಿಸಲಾಗಿರುವ ಅಮಾಯಕ ರೈತರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ನಗರದ ಹೃದಯಭಾಗವಾದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಕನ್ನಡ ಪರ ಸಂಘಟನೆಗಳು ರಸ್ತೆ ಮಧ್ಯೆ ಟೈರ್ ಸುಟ್ಟು ಪ್ರತಿಭಟನೆ ನಡೆಸಿದರು. ಗುರುವಾರದಿಂದ ನಡೆಯುತ್ತಿರುವ ಪ್ರತಿಭಟನೆ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.[ಕರ್ನಾಟಕ ಬಂದ್ ಚಿತ್ರಗಳು]

'ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು ಯಾವುದೇ ಅಹಿತಕರ ಘಟನೆ ನಡೆದರೆ ಮಾತ್ರ ಹೋರಾಟ ಗಾರರನ್ನು ಬಂಧಿಸಲಾಗುವುದು' ಎಂದು ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ' ಹೇಳಿದ್ದಾರೆ. ಬೆಂಗಳೂರಿನಿಂದ ಹಿರಿಯ ಅಧಿಕಾರಿಗಳು ಬಂದಿದ್ದು, ಹುಬ್ಬಳ್ಳಿ, ನವಲಗುಂದದಲ್ಲಿ ಬಿಡಾರ ಹೂಡಿದ್ದಾರೆ.

ನಗರ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಸುಮಾರು 40 ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು ಮೆರವಣಿಗೆ ಮೂಲಕ ಆಗಮಿಸಿ ಇಂದು ಪ್ರತಿಭಟಿಸಿದ್ದವು. ಪ್ರತಿಭಟನೆ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಪ್ರಧಾನಿ ಮೋದಿ ಅವರ ಪ್ರತಿಕೃತಿ ಮಾಡಿ ಅದನ್ನು, ದಹನ ಮಾಡಲಾಯಿತು...

ಬಸ್ ಸಂಚಾರ ಆರಂಭ

ಬಸ್ ಸಂಚಾರ ಆರಂಭ

ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಸ್ಪಂದಿಸಿದ್ದ ಹುಬ್ಬಳ್ಳಿ ಈಗ ಸಹಜ ಸ್ಥಿತಿಯತ್ತ ಬಂದಿದೆ. ಸಂಜೆ ಸಾರಿಗೆ ಬಸ್ ಗಳ ಸಂಚಾರ ಆರಂಭವಾಗಿದೆ. ಆಟೋ ಮತ್ತು ಖಾಸಗಿ ವಾಹನಗಳು ಸಂಚಾರ ಆರಂಭಿಸಿವೆ.

ಪ್ರತಿಭಟನೆ ನಡೆಸಿದ್ದರು

ಪ್ರತಿಭಟನೆ ನಡೆಸಿದ್ದರು

ನಗರ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಸುಮಾರು 40 ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು ಮೆರವಣಿಗೆ ಮೂಲಕ ಆಗಮಿಸಿ ಇಂದು ಪ್ರತಿಭಟಿಸಿದ್ದವು.

ಮೋದಿ ಪ್ರತಿಕೃತಿ ದಹನ

ಮೋದಿ ಪ್ರತಿಕೃತಿ ದಹನ

ಪ್ರತಿಭಟನೆ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಪ್ರಧಾನಿ ಮೋದಿ ಅವರ ಪ್ರತಿಕೃತಿ ಮಾಡಿ ಅದನ್ನು, ದಹನ ಮಾಡಲಾಯಿತು.

ಕಾರಿಗೆ ಮುತ್ತಿಗೆ ಹಾಕಲು ಯತ್ನ

ಕಾರಿಗೆ ಮುತ್ತಿಗೆ ಹಾಕಲು ಯತ್ನ

ಮಧ್ಯಾಹ್ನದ ಹೊತ್ತಿಗೆ ಸ್ಥಳಕ್ಕಾಗಮಿಸಿದ ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ ಅವರ ಕಾರಿಗೆ ಪ್ರತಿಭಟನಾಕಾರರು ಮುತ್ತಿಗೆ ಹಾಕಲು ಯತ್ನಿಸಿದರು. ಇದರಿಂದ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಘು ಲಾಠಿ ಪ್ರಹಾರ ಮಾಡಿದರು.

ರೈತರ ಬಿಡುಗಡೆಗೆ ಪಟ್ಟು

ರೈತರ ಬಿಡುಗಡೆಗೆ ಪಟ್ಟು

ಜಿಟಿಜಿಟಿ ಮಳೆಯಿಂದ ಕಂಗೆಡದ ಕನ್ನಡ ಪರ ಸಂಘಟನೆಗಳ ಹೋರಾಟಗಾರರು ನವಲಗುಂದ, ನರಗುಂದ ದಲ್ಲಿ ಬಂಧಿಸಿರುವ ಅಮಾಯಕ ರೈತರನ್ನು ಬಿಡುಗಡೆ ಮಾಡಬೇಕೆಂದು ಪಟ್ಟು ಹಿಡಿದಿದ್ದರು.

English summary
Karnataka Bandh : Pro-Kannada outfits activist staed protest at Chennamma circle against interim order passed by the Mahadayi Tribunal that rejected Karnataka government interim petition.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X