ವಿಶ್ವದಲ್ಲಿಯೇ ಭಾರತ ಮೂರನೇ ಆರ್ಥಿಕ ಶಕ್ತಿಯಾಗಿದೆ: ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ, ಫೆಬ್ರವರಿ, 26: ಕೇಂದ್ರ ಸಂವಹನ ಇಲಾಖೆ, ಕೃಷಿ ಇಲಾಖೆ, ಆರೋಗ್ಯ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಭಾರತ ಸರ್ಕಾರದ ಎಂಟು ವರ್ಷದ ವಿಶೇಷ ಕಾರ್ಯಕ್ರಮ ನಡೆದಿದೆ. ಹುಬ್ಬಳ್ಳಿಯಲ್ಲಿ ನಡೆದ ಈ ವಿಶೇಷ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಚಾಲನೆ ನೀಡಿದರು‌. ಹಾಗೆಯೇ ವಿಶ್ವದಲ್ಲಿಯೇ ಮೂರನೇ ಆರ್ಥಿಕ ಶಕ್ತಿಯಾಗಿದ್ದೇವೆ ಎಂದರು.

ಹುಬ್ಬಳ್ಳಿಯ ಸಿದ್ಧಾರೂಢರ ಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 58 ವರ್ಷ ಆಳಿದ ಕಾಂಗ್ರೆಸ್ ಸರ್ಕಾರ ಮೋದಿ ತರಹದ ಯೋಜನೆಗಳನ್ನು ಕೊಟ್ಟಿಲ್ಲ. 200 ಯುನಿಟ್ ಉಚಿತ ವಿದ್ಯುತ್‌ ನೀಡುತ್ತೇವೆ ಎಂದು ಭಾಷಣ ಮಾಡಕೊಂಡು ಓಡಾಡುತ್ತಿದಾರೆ. ಹಾಗೆಯೇ ಇವರ ಕಾಲದಲ್ಲಿ ವಿದ್ಯುತ್ ಇರಲೇ ಇಲ್ಲ ಎಂದು ಲೇವಡಿ ಮಾಡಿದರು.

India is third economy trength in world: Pralhad Joshi

ಕಾಂಗ್ರೆಸ್‌ ವಿರುದ್ಧ ಜೋಶಿ ವಾಗ್ದಾಳಿ

ನಾವೆಲ್ಲ ಇದೀಗ ವಿದ್ಯುತ್ ಉತ್ಪಾದನೆ ಮಾಡಿಟ್ಟಿದ್ದೇವೆ. ಆದರೆ ಕಾಂಗ್ರೆಸ್‌ನವರು ಇದೀಗ ಬಂದು ನಾವು ಉಚಿತ ವಿದ್ಯುತ್ ಕೊಡುತ್ತೇವೆ ಎಂದಿದ್ದಾರೆ. ಸುಳ್ಳು ಹೇಳುವವರನ್ನು ನಂಬಬೇಡಿ ಎಂದು ಕಾಂಗ್ರೆಸ್ ವಿರುದ್ದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಾಗ್ದಾಳಿ ನಡೆಸಿದರು.

ಧಾರವಾಡ ಜಿಲ್ಲೆಗೆ ಇನ್ನು ಕೆಲವೇ ದಿನಗಳಲ್ಲಿ ಪ್ರತಿ ಮನೆಗೆ ನೀರು ಬರುತ್ತದೆ. ಕಾಂಗ್ರೆಸ್ ಕಾಲದಲ್ಲಿ ಐದು ವರ್ಷದಲ್ಲಿ 16 ಲಕ್ಷ ಮನೆ ಕೊಡುತ್ತಿದ್ದರು. ನಾವು ಎಂಟು ಕೋಟಿ ಮನೆ ಕೊಟ್ಟಿದ್ದೇವೆ. ಇನ್ನೂ ಕೆಲವೇ ದಿನಗಳಲ್ಲಿ ನಾವು ಮೂರನೇ ಆರ್ಥಿಕ ಶಕ್ತಿಯಾಗಿ ಹೊರ ಹುಮ್ಮುತ್ತೇವೆ. ಕಳೆದ ಎಂಟು ವರ್ಷದಲ್ಲಿ ದೇಶ ಬದಲಾವಣೆಯಾಗಿದೆ ಎಂದರು.

ಸಿದ್ದಾರಾಮಯ್ಯ ವಿರುದ್ಧ ಸಿಎಂ ಆಕ್ರೋಶ

ಸಿದ್ದರಾಮಯ್ಯನವರು ತಾವೇ ಸುಳ್ಳಿನ ಸುಳಿಯಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರು ಹೇಳಿರುವ ಸುಳ್ಳುಗಳು ಒಂದೊಂದಾಗಿ ಹೊರಬರುತ್ತಿದೆ. ಅವರು ಪ್ರಣಾಳಿಕೆಯಲ್ಲಿ ಘೋಷಿಸಿರುವ ಭರವಸೆಗಳ ಕುರಿತು ವಿಧಾನಸಭೆ ಅಧಿವೇಷನದಲ್ಲಿಯೇ ಹೇಳಿದ್ದೇ‌ನೆ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರು ಹುಬ್ಬಳ್ಳಿಯಲ್ಲಿ ವಾಗ್ದಾಳಿ ನಡೆಸಿದರು.

India is third economy trength in world: Pralhad Joshi

ಆದರ್ಶ ನಗರದ ತಮ್ಮ ನಿವಾಸದ ಎದುರು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಇನ್ನೊಬ್ಬರ ಬಗ್ಗೆ ಸಾವಿರ ಬಾರಿ ಸುಳ್ಳು ಹೇಳಿದರೇ ಅದು ಸತ್ಯವಾಗುತ್ತದೆ ಎನ್ನುವ ಭ್ರಮೆಯಲ್ಲಿ ಇದ್ದಾರೆ. ಸತ್ಯ ಸತ್ಯವೇ, ಸುಳ್ಳು ಸುಳ್ಳೆ ಆಗಿರುತ್ತದೆ. ಅವರು ಹೇಳಿದ ತಕ್ಷಣ ಸುಳ್ಳು ಸತ್ಯವಾಗುವುದಿಲ್ಲ, ಸತ್ಯ ಸುಳ್ಳಾಗುವುದಿಲ್ಲ. ಆದರೆ ಅತಿಯಾದ ಸುಳ್ಳು ಹೇಳಿದ ಮೇಲೆ ಸುಳ್ಳೇ ಸತ್ಯ ಅಂತಾ ಅವರಿಗೆ ನಂಬಿಕೆ ಬರಲಾರಂಭಿಸಿದೆ ಎಂದು ತಿರುಗೇಟು ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+