ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಕಾರ್ಗೋ ಸೇವೆ ಆರಂಭ
ಹುಬ್ಬಳ್ಳಿ, ಆಗಸ್ಟ್ 23 : ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸರಕು ಸಾಗಣೆ ಸೇವೆ (ಕಾರ್ಗೋ) ಆರಂಭಿಸಲು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಒಪ್ಪಿಗೆ ನೀಡಿದೆ. ಹುಬ್ಬಳ್ಳಿ ಕೈಗಾರಿಕೋದ್ಯಮಿಗಳು ಸೇವೆ ಆರಂಭಿಸಲು ಮನವಿ ಮಾಡಿದ್ದರು.
ಇಂಡಿಗೋ ಮತ್ತು ಸ್ಪೈಸ್ ಜೆಟ್ ವಿಮಾನಗಳು ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಕಾರ್ಗೋ ಸೇವೆಯನ್ನು ಆರಂಭಿಸಲಿವೆ. ಕೆಲವೇ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಹ ಈ ಸೇವೆಯನ್ನು ಪ್ರಾರಂಭಿಸಲಿದೆ.
'ಪ್ರಯಾಣಿಕರ ವಿಮಾನದಲ್ಲಿಯೇ ಸರಕು ಸಾಗಣೆ ಮಾಡಲು ಅನುಮತಿ ನೀಡಲಾಗಿದೆ. ಅಗತ್ಯ ಸೌಲಭ್ಯವನ್ನು ಒದಗಿಸಲಾಗಿದೆ. ಹುಬ್ಬಳ್ಳಿಗೆ ಸರಕುಗಳನ್ನು ತರಿಸಿಕೊಳ್ಳಲು ಮತ್ತು ಕಳುಹಿಸಲು ಅವಕಾಶವಿದೆ. ಇದಕ್ಕಾಗಿಯೇ ಪ್ರತ್ಯೇಕ ಕಟ್ಟಡ ಒದಗಿಸಿಕೊಡುವ ಕಾರ್ಯ ನಡೆಯುತ್ತಿದೆ' ಎಂದು ಅಧಿಕಾರಿಗಳು ಹೇಳಿದ್ದಾರೆ.

ಹುಬ್ಬಳ್ಳಿ ಕೈಗಾಕೋದ್ಯಮಿಗಳ ಸಂಘ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಕಾರ್ಗೋ ಸೇವೆ ಆರಂಭಿಸಲು ಅನುಮತಿ ನೀಡಬೇಕು ಎಂದು ಕೋರಿತ್ತು. ಸದ್ಯ ಬೆಂಗಳೂರಿಗೆ ನಾಲ್ಕು ವಿಮಾನಗಳು ಹುಬ್ಬಳ್ಳಿಯಿಂದ ಹಾರಾಟ ನಡೆಸುತ್ತಿವೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸರಕು ಸಾಗಣೆ ಸೇವೆ ಒದಗಿಸಲು ಸಾಕಷ್ಟು ಅವಕಾಶಗಳಿವೆ. ಇಂಡಿಗೋ ಸ್ಪರ್ಧಾತ್ಮಕ ಬೆಲೆಯಲ್ಲಿ ಸೇವೆಯನ್ನು ನೀಡುತ್ತಿದೆ. ನಿಯಮಿತವಾಗಿ ಸೇವೆ ಬಳಸುವವರಿಗೆ ವಿಶೇಷ ಆಫರ್‌ಗಳನ್ನು ನೀಡಲು ಸಂಸ್ಥೆ ನಿರ್ಧರಿಸಿದೆ.












Click it and Unblock the Notifications