ಇಂಡಿಗೋ ವಿಮಾನ ಹಾರಾಟ ರದ್ದು: ಹುಬ್ಬಳ್ಳಿಯಲ್ಲಿ ವಧು-ವರರಿಲ್ಲದೆ ಆರಕ್ಷತೆ: ಭಾರೀ ವೈರಲ್
Wedding ceremony news: ಭಾರತೀಯ ಅತೀ ದೊಡ್ಡ ವಿಮಾನ ಸಂಸ್ಥೆಗಳಲ್ಲಿ ಒಂದಾಗಿರುವ ಇಂಡಿಗೋ ವಿಮಾನ ಹಾರಾಟ ಸ್ಥಗಿತವಾಗಿದೆ. ದೇಶಾದ್ಯಂತ 500ಕ್ಕೂ ಅಧಿಕ ವಿಮಾನ ಹಾರಾಟ ಸ್ಥಗಿತವಾಗಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಅಲ್ಲದೆ, ವಿಮಾನಯಾನ ಸಂಸ್ಥೆ ವಿರುದ್ಧ ಕೆಂಡಕಾರುತ್ತಿದ್ದಾರೆ. ಈ ನಡುವೆಯೇ ವಧು ವರರಿಲ್ಲದೆ ಆರಕ್ಷತೆ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ನಡೆದಿದೆ. ಹಾಗಾದ್ರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಾಮಾನ್ಯವಾಗಿ ಆರಕ್ಷತೆಯನ್ನು ನವ ವಧು-ವರರಿಗೆ ಮಾಡಲಾಗುತ್ತದೆ. ಆದರೆ, ವಧುವಿನ ತಂದೆ-ತಾಯಿಯೇ ಮಗಳು ಹಾಗೂ ಅಳಿಯನ ಸ್ಥಾನದಲ್ಲಿ ಕುಳಿತು ಆರಕ್ಷತೆ ನೆರವೇರಿಸಿದ ವಿಚಿತ್ರ ಘಟನೆಯೊಂದು ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ನಡೆದಿದೆ. ಮುಂದೇನಾಯ್ತು ಎನ್ನುವ ಪ್ರಶ್ನೆಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ವಧು-ವರನ ಆರತಕ್ಷತೆಗೆ ಎಲ್ಲಾ ಸಿದ್ಧತೆಯೇನೋ ಆಗಿತ್ತು. ಆದರೆ, ಸಮಾರಂಭ ಆರಂಭ ಆಗಬೇಕು ಎನ್ನುವಷ್ಟರಲ್ಲೇ ವಧು-ವರ ಆಗಮಿಸಬೇಕಿದ್ದ ವಿಮಾನ ರದ್ದುಗೊಂಡಿತು. ಇದನ್ನ ತಿಳಿದ ವಧುವಿನ ತಂದೆ-ತಾಯಿ ಸೇರಿ ಪ್ಲಾನ್ ಮಾಡಿಕೊಂಡು ಈ ಕಾರ್ಯಕ್ರಮ ಯಾವುದೇ ಕಾರಣಕ್ಕೂ ನಿಲ್ಲಬಾರದು ಎಂಬ ತೀರ್ಮಾನ ಮಾಡಿ ತಾವೇ ವಧು-ವರನ ಚೇರ್‌ನಲ್ಲಿ ಕುಳಿತು ಆರಕ್ಷತೆಯನ್ನು ನೆರವೇರಿಸಿದ್ದಾರೆ.
ವಧುವಿನ ತಂದೆ-ತಾಯಿಯೇ ವಧು-ವರರ ಕುರ್ಚಿಯಲ್ಲಿ ಕುಳಿತು ಬಂದತಹ ಬಂಧುಗಳಿಂದ ಶುಭ ಹಾರೈಕೆ ಸ್ವೀಕರಿಸಿ ಗಮನ ಸೆಳೆದಿದ್ದಾರೆ. ಇನ್ನೂ ಈ ಆರಕ್ಷತೆ ಕಾರ್ಯಕ್ರಮ ಯಾವುದೇ ಕಾರಣಕ್ಕೂ ರದ್ದಾಗಬಾರದು ಎಂದು ತಲೆ ಓಡಿಸಿ ಈ ನಿರ್ಧಾರ ತೆಗೆದುಕೊಂಡಿರುವ ವಧುವಿನ ಪೋಷಕರನ್ನು ಮೆಚ್ಚಲೇಬೇಕು ಎನ್ನುವ ಮಾತುಗಳು ಕೇಳಿಬರುತ್ತಿವೆ.
ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ಬುಧವಾರ ವಧು ಮೇಧಾ ಕ್ಷೀರಸಾಗರ ಹಾಗೂ ವರ ಸಂಗಮ ದಾಸ್ ಅವರ ಆರತಕ್ಷತೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ನವೆಂಬರ್ 23ರಂದು ಭುವನೇಶ್ವರದಲ್ಲಿ ವಿವಾಹ ಆದ ಈ ಜೋಡಿ ಬೆಂಗಳೂರಿಗೆ ಆಗಮಿಸಿ ಅಲ್ಲಿಂದ ಹುಬ್ಬಳ್ಳಿಗೆ ಬರಲು ಡಿಸೆಂಬರ್ 2ರ ವಿಮಾನ ಬುಕ್ ಮಾಡಿದ್ದರು. ಇವರ ಕೆಲ ಸಂಬಂಧಿಕರು ಸಹ ಭುವನೇಶ್ವರ-ಮುಂಬೈ-ಹುಬ್ಬಳ್ಳಿ ಮಾರ್ಗದಲ್ಲಿ ವಿಮಾನ ಟಿಕೆಟ್ ಬುಕ್ ಮಾಡಿದ್ದರು. ಆದರೆ, ಕೊನೇ ಗಳಿಗೆಯಲ್ಲಿ ಇಂಡಿಗೋ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.
ಘಟನೆ ಹಿನ್ನೆಲೆ: ಡಿಸೆಂಬರ್ 2ರ ಬೆಳಗ್ಗೆ 9ರಿಂದ ಇಂಡಿಗೋ ವಿಮಾನ ಸಂಚಾರದಲ್ಲಿ ವ್ಯತ್ಯ ಉಂಟಾಗಿದೆ. ಅನೇಕ ವಿಮಾನಗಳ ಹಾರಾಟ ರದ್ದಾಗಿದೆ. ಭುವನೇಶ್ವರದಿಂದ ಮೇಧಾ ಕ್ಷೀರಸಾಗರ ಹಾಗೂ ಸಂಗಮ ದಾಸ್ ಪ್ರಯಾಣ ಮಾಡಬೇಕಿದ್ದ ವಿಮಾನ ಸಂಚಾರ ಮುಂದಿನ ದಿನ ಅಂದರೆ ಡಿಸೆಂಬರ್ 3ರ ಬೆಳಗಿನ 4-5 ಗಂಟೆಗಳವರೆಗೆ ವಿಳಂಬ ಆಗಲಿದೆ ಎಂದು ಸಂದೇಶ ಬಂದಿತ್ತು.
ಆದ್ದರಿಂದ ಅವರು ಯಾವುದೇ ಪರ್ಯಾಯ ಪ್ರಯಾಣಕ್ಕೆ ಯೋಚನೆ ಮಾಡಿರಲಿಲ್ಲ. ಆದರೆ, ಕೊನೇ ಗಳಿಗೆಯಲ್ಲಿ ದಿಢೀರ್ ಡಿಸೆಂಬರ್ 3ರಂದು ಬೆಳಗ್ಗೆ ವಿಮಾನ ಸಂಚಾರವನ್ನೇ ರದ್ದುಪಡಿಸಲಾಯಿತು. ಪರಿಣಾಮ ವಧು-ವರರು ಹುಬ್ಬಳ್ಳಿಗೆ ಆರಕ್ಷತೆ ವೇಳೆಗೆ ತಲುಪಲು ಸಾಧ್ಯ ಆಗಲಿಲ್ಲ. ಈ ನಡುವೆಯೇ ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ಆರತಕ್ಷತೆಗೆ ಎಲ್ಲಾ ಸಿದ್ಧತೆಗಳು ನಡೆದಿದ್ದವು. ಆದ್ದರಿಂದ ಕೊನೆಗೆ ವಧುವಿನ ತಂದೆ-ತಾಯಿ ತಮ್ಮ ಮಗಳು ಹಾಗೂ ಅಳಿಯನ ಬದಲು ವಧು-ವರರ ಸ್ಥಾನದಲ್ಲಿ ಕುಳಿತುಕೊಂಡು ಶಾಸ್ತ್ರಗಳನ್ನು ನೆರವೇರಿಸಿದರು. ಈ ಘಟನೆ ಇಡೀ ದೇಶದ ಗಮನ ಸೆಳೆದಿದೆ.
ಇನ್ನೂ ವಧು ಮೇಧಾ ಮತ್ತು ವರ ಸಂಗಮ ದಾಸ್ ಇಬ್ಬರೂ ಯಾವುದೇ ಪರ್ಯಾಯ ದಾರಿಯಿಲ್ಲದೆ, ಭುವನೇಶ್ವರದಲ್ಲೇ ಸಿದ್ಧರಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆರತಕ್ಷತೆಯಲ್ಲಿ ಭಾಗವಹಿಸಿದ್ದಾರೆ. ಈ ವಿಡಿಯೋ, ಫೋಟೋಗಳು ಇದೀಗ ಎಲ್ಲೆಡೆ ಭಾರೀ ವೈರಲ್ ಆಗುತ್ತಿವೆ. ಅಲ್ಲದೆ, ವಧುವಿನ ತಂದೆ-ತಾಯಿಯ ಈ ಆಲೋಚನೆಗೆ ಮೆಚ್ಚುಗೆಗಳ ಸುರಿಮಳೆಯೇ ಹರಿದುಬರುತ್ತಿವೆ.
ಇಂಡಿಗೋ ವಿಮಾನ ಹಾರಾಟ ರದ್ದು: ಇನ್ನೂ ಕಳೆದ ಕೆಲ ದಿನಗಳಿಂದ ದೇಶಾದ್ಯಂತ ಇಂಡಿಗೋ ವಿಮಾನಗಳ ಹಾರಟವನ್ನು ರದ್ದುಪಡಿಸಲಾಗಿದೆ. ಈ ವಿಚಾರ ಇದೀಗ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಗುರುವಾರ ಬೆಂಗಳೂರು ಸೇರಿದಂತೆ ದೇಶದ ಹಲವೆಡೆ 500ಕ್ಕೂ ಅಧಿಕ ವಿಮಾನಗಳನ್ನು ರದ್ದುಗೊಳಿಸಿದ್ದ ಇಂಡಿಗೋ ಇದೀಗ ಮತ್ತೆ ಶುಕ್ರವಾರ 400 ವಿಮಾನಗಳ ಹಾರಾಟವನ್ನು ರದ್ದುಪಡಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನೂ ವಿಮಾನ ಹಾರಾಟ ರದ್ದುಪಡಿಸಿರುವುದರಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ. ಜೊತೆಗೆ ವಿಮಾನಯಾನ ಸಂಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಲಿದ್ದಾರೆ.












Click it and Unblock the Notifications