ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿ-ಮುಂಬೈ ನಡುವೆ ಸೆ. 19ರಿಂದ ಇಂಡಿಗೋ ಹಾರಾಟ

|
Google Oneindia Kannada News

ಹುಬ್ಬಳ್ಳಿ, ಸೆಪ್ಟೆಂಬರ್ 11: ಇಂಡಿಗೋ ಉತ್ತರ ಕರ್ನಾಟಕ ಮತ್ತು ಮುಂಬೈ ನಡುವೆ ವಿಮಾನ ಸಂಪರ್ಕ ಕಲ್ಪಿಸಲಿದೆ. ಹುಬ್ಬಳ್ಳಿ-ಮುಂಬೈ ನಡುವೆ ವಿಮಾನ ಸೇವೆ ಸೆಪ್ಟೆಂಬರ್ 19ರಿಂದ ಆರಂಭವಾಗಲಿದೆ.

ಕೇಂದ್ರ ಸಚಿವ ಮತ್ತು ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಈ ಕುರಿತು ಮಾಹಿತಿ ನೀಡಿದ್ದಾರೆ. ವಾರದಲ್ಲಿ ಮೂರು ದಿನಗಳ ಕಾಲ ಹುಬ್ಬಳ್ಳಿ-ಮುಂಬೈ ವಿಮಾನ ಹಾರಾಟ ನಡೆಸಲಿದೆ.

ಹುಬ್ಬಳ್ಳಿ: ಕೆಳಗಿಳಿಯಲು ಆಗದೆ ಒಂದು ಗಂಟೆ ಆಗಸದಲ್ಲೇ ಸುತ್ತು ಹೊಡೆದ ವಿಮಾನಹುಬ್ಬಳ್ಳಿ: ಕೆಳಗಿಳಿಯಲು ಆಗದೆ ಒಂದು ಗಂಟೆ ಆಗಸದಲ್ಲೇ ಸುತ್ತು ಹೊಡೆದ ವಿಮಾನ

ಮಂಗಳವಾರ, ಗುರುವಾರ ಮತ್ತು ಶನಿವಾರ ಈ ವಿಮಾನ ಹಾರಾಟ ನಡೆಸಲಿದೆ. "ಈ ವಿಮಾನ ಸೇವೆಯಿಂದಾಗಿ ಉತ್ತರ ಕರ್ನಾಟಕ ಮತ್ತು ವಾಣಿಜ್ಯ ನಗರಿ ಮುಂಬೈಗೆ ಸಂಚಾರ ನಡೆಸುವ ಜನರಿಗೆ ಸಹಾಯಕವಾಗಲಿದೆ" ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿ ರೈಲ್ವೇ ನಿಲ್ದಾಣಕ್ಕೆ ಸಿದ್ಧಾರೂಢ ಸ್ವಾಮೀಜಿ ಹೆಸರು ನಾಮಕರಣ: ಕೇಂದ್ರ ಒಪ್ಪಿಗೆಹುಬ್ಬಳ್ಳಿ ರೈಲ್ವೇ ನಿಲ್ದಾಣಕ್ಕೆ ಸಿದ್ಧಾರೂಢ ಸ್ವಾಮೀಜಿ ಹೆಸರು ನಾಮಕರಣ: ಕೇಂದ್ರ ಒಪ್ಪಿಗೆ

IndiGo To Start Hubballi Mumbai Flights From September 19

ವೇಳಾಪಟ್ಟಿ : ವಾರದಲ್ಲಿ ಮೂರು ದಿನಗಳ ಕಾಲ ಮುಂಬೈನಿಂದ ಬೆಳಗ್ಗೆ 6.
35ಕ್ಕೆ ಹೊರಡುವ ವಿಮಾನ 8 ಗಂಟೆಗೆ ಹುಬ್ಬಳ್ಳಿಗೆ ಬರಲಿದೆ. ಹುಬ್ಬಳ್ಳಿಯಿಂದ 8.40ಕ್ಕೆ ಹೊರಡುವ ವಿಮಾನ 10.5ಕ್ಕೆ ಮುಂಬೈ ತಲುಪಲಿದೆ.

ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಬಗ್ಗೆ ಮಹತ್ವ ನಿರ್ಣಯಗಳು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಬಗ್ಗೆ ಮಹತ್ವ ನಿರ್ಣಯಗಳು

Recommended Video

Zameer Ahmed ಗರಂ Sambargi ವಿರುದ್ಧ ಬಿತ್ತು ಸಿಕಾಪಟ್ಟೆ ಸೆಕ್ಷನ್ | Oneindia Kannada

ಇಂಡಿಗೋ ಈಗಾಗಲೇ ಬೆಂಗಳೂರಿನಿಂದ ಅಹಮದಾಬಾದ್, ಕಣ್ಣೂರು, ಚೆನ್ನೈ, ಕೊಚ್ಚಿ ಮುಂತಾದ ನಗರಗಳಿಗೆ ವಿಮಾನ ಸೇವೆಯನ್ನು ಒದಗಿಸುತ್ತಿದೆ. ಇದೇ ಮೊದಲ ಬಾರಿಗೆ ಹುಬ್ಬಳ್ಳಿಗೆ ವಿಮಾನ ಸೇವೆ ಆರಂಭಿಸುತ್ತಿದೆ.

English summary
IndiGo announced new flight between Karnataka's Hubballi and Mumbai 3 days in week from September 19, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X