ಇಂದಿರಾ ಕ್ಯಾಂಟೀನ್ ಮುಚ್ಚಿದರೆ ಪರಿಣಾಮ ನೆಟ್ಟಗಿರಲ್ಲ: ಬಿಜೆಪಿ ಸರ್ಕಾರಕ್ಕೆ ಸಿದ್ದರಾಮಯ್ಯ ಎಚ್ಚರಿಕೆ
ಬಿಜೆಪಿ ಸರ್ಕಾರ ಬಡವರ ಹೊಟ್ಟೆಯ ಮೇಲೆ ಬರೆ ಹಾಕುವ ಕೆಲಸವನ್ನು ಕೈಬಿಡಬೇಕು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹುಬ್ಬಳ್ಳಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು
ಹುಬ್ಬಳ್ಳಿ, ಮಾರ್ಚ್, 15: ಬಡವರ, ಆರ್ಥಿಕವಾಗಿ ಹಿಂದುಳಿದವರ ಹಸಿವನ್ನು ನೀಗಿಸುವ ಇಂದಿರಾ ಕ್ಯಾಂಟೀನ್ ಮುಚ್ಚಲು ಹೊರಟಿರುವ ಬಿಜೆಪಿ ಸರ್ಕಾರದ ನಡೆ ನಿಜಕ್ಕೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬಡವರ ಹೊಟ್ಟೆಯ ಮೇಲೆ ಬರೆ ಹಾಕುವ ಕೆಲಸವನ್ನು ಮಾಡುತ್ತಿರುವ ಬಿಜೆಪಿ ಸರ್ಕಾರ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹುಬ್ಬಳ್ಳಿಯಲ್ಲಿ ಹೇಳಿದರು.
ಇಂದಿರಾ ಕ್ಯಾಂಟಿನ್ ಮುಚ್ಚುವುದು ಸರಿಯಲ್ಲ
ನಗರದಲ್ಲಿಂದು ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಅವರು, ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿಯವರ ಹೆಸರು ಇರುವ ಕಾರಣಕ್ಕೆ ಬಡವರ ಹಸಿವನ್ನು ನೀಗಿಸುವ ಕ್ಯಾಂಟಿನ್ ಮುಚ್ಚಲು ಹೊರಟಿದ್ದಾರೆ. ಕಡಿಮೆ ದರದಲ್ಲಿ ಉಪಹಾರ, ಊಟ ಒದಗಿಸುವ ಇಂದಿರಾ ಕ್ಯಾಂಟಿನ್ ಮುಚ್ಚುವುದು ಸರಿಯಲ್ಲ. ಇದು ಸಾರ್ವಜನಿಕರ ಹಾಗೂ ಬಡವರಿಗೆ ಮಾಡುವ ದೊಡ್ಡ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

400 ಇಂದಿರಾ ಕ್ಯಾಂಟೀನ್‌ಗಳ ನಿರ್ಮಾಣ
ಹಸಿವು ಮುಕ್ತ ರಾಜ್ಯ ನಿರ್ಮಾಣದ ಕನಸನ್ನು ಕಂಡಿರುವ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸುಮಾರು 400 ಇಂದಿರಾ ಕ್ಯಾಂಟಿನ್ ನಿರ್ಮಾಣ ಮಾಡಲಾಗಿತ್ತು. ಬಡವರು, ವಿದ್ಯಾರ್ಥಿಗಳು, ಆಟೋ ಚಾಲಕರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಊಟ ಒದಗಿಸುವ ಇಂದಿರಾ ಕ್ಯಾಂಟಿನ್ ರಾಜಕೀಯ ಉದ್ದೇಶದಿಂದ ಮುಚ್ಚಲು ಹೊರಟಿರುವುದು ನಿಜಕ್ಕೂ ಜನ ವಿರೋಧಿ ನಡೆಯಾಗಿದೆ. ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟಿನ್ ಮುಚ್ಚಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಯಾವ ಪಕ್ಷದ ನಾಯಕರು ಯಾರನ್ನು ಭೇಟಿ ಮಾಡಿದರೂ ಕುತೂಹಲ ಆರಂಭವಾಗುತ್ತದೆ. ಕಾಂಗ್ರೆಸ್ ಶಾಸಕಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿರುವುದು ಸಹ ಈಗ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಪ್ರಜಾಧ್ವನಿ ಸಮಾವೇಶ ರದ್ದಾದ ಬಳಿಕ ಹುಬ್ಬಳ್ಳಿಯಲ್ಲಿ ಭೇಟಿಗೆ ಆಗಮಿಸಿದ್ದು ಕುತೂಹಲ ಮೂಡಿಸಿದೆ.

ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಸಮಾವೇಶ ಆಯೋಜನೆ ಮಾಡಲಾಗಿತ್ತು. ಆದರೆ ಸಮಾವೇಶ ರದ್ದುಗೊಳಿಸಲಾಗಿದೆ. ಇದೇ ಸಂದರ್ಭದಲ್ಲಿ ಸ್ಥಳೀಯ ಶಾಸಕಿ ಕುಸುಮಾ ಶಿವಳ್ಳಿ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗಾಗಿ ಆಗಮಿಸಿದ್ದು, ಚರ್ಚೆಗೆ ಕಾರಣವಾಗಿದೆ.












Click it and Unblock the Notifications