ಹುಬ್ಬಳ್ಳಿ ಗಲಾಟೆಯಲ್ಲಿ ಅಮಾಯಕರ ಬಂಧನವಾಗಿಲ್ಲ; ಹೆಚ್‌ಡಿಕೆ ಟೀಕೆಗೆ ಸಿಎಂ ತಿರುಗೇಟು

ಚಿಕ್ಕಮಗಳೂರು, ಏಪ್ರಿಲ್ 19: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯಾವುದೇ ಅಮಾಯಕರನ್ನು ಬಂಧಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.

ಶೃಂಗೇರಿ ಮೆಣಸೆ ಹೆಲಿಪ್ಯಾಡ್ ನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ವಿರೋಧ ಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು. ಹುಬ್ಬಳ್ಳಿ ಘಟನೆಯಲ್ಲಿ ಅಮಾಯಕರನ್ನು ಸರ್ಕಾರ ಬಂಧಿಸಿದೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದರು. ಈ ಪ್ರಕರಣದಲ್ಲಿ ಯಾವುದೇ ಅಮಾಯಕರ ಬಂಧನವೂ ಆಗಿಲ್ಲ, ಎಲ್ಲ ಸಾಕ್ಷ್ಯಾಧಾರಗಳ ಮೇಲೆ ಬಂಧಿಸಲಾಗಿದೆ ಎಂದರು.

ಇನ್ನು, ಕಾಂಗ್ರೆಸ್ ಮುಖಂಡನ ಹತ್ಯೆಗೆ ಪ್ರಚೋದನೆ ನೀಡಿರುವ ಬಗ್ಗೆ ವೈರಲ್ ಆಗಿರುವ ವಿಡಿಯೋದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಕುರಿತು ಪೊಲೀಸ್ ಆಯುಕ್ತರು ಕ್ರಮ ಕೈಗೊಳ್ಳಲಿದ್ದಾರೆ ಎಂದರು.

Innocent People Are Not Arrested in Hubballi Violence Incident; CM Basavaraj Bommai

"ಜನರು ಏನು ಹೇಳುತ್ತಾರೆ ಎನ್ನುವುದೇ ಮುಖ್ಯ":

ರಾಮನ ಹೆಸರಿನಲ್ಲಿ ರಾವಣ ರಾಜ್ಯವನ್ನು ಮಾಡಲು ಹೊರಟಿದ್ದಾರೆ ಎಂಬ ವಿರೋಧ ಪಕ್ಷದ ನಾಯಕರ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು. ಅವರು ಅವರ ವ್ಯಾಖ್ಯಾನಗಳನ್ನು ನೀಡುತ್ತಾರೆ. ವಿರೋಧ ಪಕ್ಷದ ನಾಯಕರು ಏನು ಹೇಳುತ್ತಾರೆ ಎನ್ನುವುದು ಮುಖ್ಯವಲ್ಲ. ಜನರು ಏನು ಹೇಳುತ್ತಾರೆ ಎನ್ನುವುದು ಮುಖ್ಯ ಎಂದು ಸಿಎಂ ಹೇಳಿದರು.

Innocent People Are Not Arrested in Hubballi Violence Incident; CM Basavaraj Bommai

ಯಾವುದೇ ರೀತಿ ವಿಳಂಬ ಧೋರಣೆ ಅನುಸರಿಸುತ್ತಿಲ್ಲ:

ರಾಜ್ಯದಲ್ಲಿ ನಡೆದ ಗಲಭೆ, ಆತ್ಮಹತ್ಯೆ ಮತ್ತು ಗಲಾಟೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರು ಮೃದು ಧೋರಣೆ ಹೊಂದಿದ್ದಾರೆಯೇ ಎಂಬ ಪ್ರಶ್ನೆಗೆ ಬಸವರಾಜ ಬೊಮ್ಮಾಯಿ ಉತ್ತರ ನೀಡಿದರು. ಹುಬ್ಬಳ್ಳಿ ಗಲಭೆ, ಶಿವಮೊಗ್ಗದ ಘಟನೆಗಳಲ್ಲಿ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. ಇನ್ನು ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಧಾರವಾಡದ ಹಣ್ಣಿನ ಅಂಗಡಿ ಪ್ರಕರಣದಲ್ಲಿಯೂ ಕ್ರಮ ತೆಗೆದುಕೊಳ್ಳಲಾಗಿದೆ. ಈ ವಿಷಯಗಳಲ್ಲಿ ಯಾವುದೂ ವಿಳಂಬ ಆಗಿಲ್ಲ. ಪೊಲೀಸ್ ನೇಮಕಾತಿಯಲ್ಲಿ ನಾವೇ ಕ್ರಮ ವಹಿಸಿದ್ದೇವೆ. ಇದಕ್ಕಿಂತ ಇನ್ನೇನು ಮಾಡಬೇಕು ಎಂದು ಸಿಎಂ ಬೊಮ್ಮಾಯಿ ಮರು ಪ್ರಶ್ನೆ ಹಾಕಿದರು.

ಹೆಚ್‌ಡಿಕೆ ಟೀಕೆ ಮಾಡಿದ್ದೇನು?:

ತಿಳಿಗೇಡಿ ಯುವಕನ ಪ್ರಚೋದನಾತ್ಮಕ ಪೋಸ್ಟ್ ನಿಂದ ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಯಲ್ಲಿ ಕಿಡಿಗೇಡಿಗಳ ಜತೆಗೆ ಕೆಲ ಅಮಾಯಕರನ್ನೂ ಪೊಲೀಸರು ಬಂಧಿಸಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಉದ್ರಿಕ್ತ ಮತಿಗೇಡಿ ಯುವಕರು ಎಸಗಿದ ಕೃತ್ಯಕ್ಕೆ ಸಂಬಂಧವಿಲ್ಲದವರನ್ನೂ ವಶಕ್ಕೆ ಪಡೆಯಲಾಗಿದೆ. ಕೆಲ ಕುಟುಂಬಗಳ ತಂದೆ-ತಾಯಂದಿರು ನನಗೆ ನಿರಂತರವಾಗಿ ಮೊಬೈಲ್ ಕರೆ ಮಾಡಿ ಕಣ್ಣೀರು ಹಾಕುತ್ತಿದ್ದಾರೆ. ಈ ಬಗ್ಗೆ ನಾನು ಈಗಾಗಲೇ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರ ಜತೆ ಮಾತನಾಡಿದ್ದೇನೆ. ಪೊಲೀಸ್ ಠಾಣೆ, ಆಸ್ಪತ್ರೆ, ದೇವಾಲಯದ ಮೇಲೆ ಕಲ್ಲು ಹೊಡೆದವರನ್ನು ಬಿಡಬೇಡಿ, ಅಮಾಯಕರಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದ್ದೇನೆ' ಎಂದು ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+