ರೈಲ್ವೇ ಪದೋನ್ನತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ; ಹುಬ್ಬಳ್ಳಿಯಲ್ಲಿ ಪ್ರತಿಭಟನೆ
ಹುಬ್ಬಳ್ಳಿ, ಸೆಪ್ಟೆಂಬರ್, 13: ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ಇಡೀ ದೇಶದಲ್ಲೇ ಸಂಚಲ ಮೂಡಿಸಿತ್ತು. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಬಗೆದಷ್ಟು ಅಪರಾಧಿಗಳು ಹೊರಬರುತ್ತಲೇ ಇದ್ದಾರೆ. ಈ ಅಕ್ರಮ ನೇಮಕಾತಿ ಪ್ರಕರಣ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕೆಟ್ಟ ಹೆಸರು ತಂದು ಕೊಟ್ಟಿದೆ. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಇನ್ನೂ ಹಸಿಯಾಗಿದ್ದಾಗಲೇ ರೈಲ್ವೇ ಪದೋನ್ನತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.
ನೇಮಕಾತಿ ಅಕ್ರಮ ಪ್ರಕರಣ ಎಲ್ಲೆಡೆಯೂ ಹರಡುತ್ತಿದೆ. ರಾಜ್ಯ ಸರ್ಕಾರದ ಬಹುತೇಕ ಹುದ್ದೆಗಳಲ್ಲಿ ಅಕ್ರಮ ನಡೆದಿದ್ದು, ತನಿಖೆ ಕೂಡ ನಡೆಯುತ್ತಿರುವ ಬೆನ್ನಲ್ಲೇ ಇದೀಗ ರೈಲ್ವೇ ಇಲಾಖೆಯಲ್ಲೊಂದು ಗಂಭೀರ ಆರೋಪ ಕೇಳಿ ಬಂದಿದೆ. ರೈಲ್ವೇ ಪರೀಕ್ಷೆ ವಿಧಾನದ ವಿರುದ್ಧ ಸಿಬ್ಬಂದಿಗಳೇ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಅಭ್ಯರ್ಥಿಗಳು ಮರು ಪರೀಕ್ಷೆಗೆ ಒತ್ತಾಯಿಸುತ್ತಿದ್ದಾರೆ. ದೊಡ್ಡಮಟ್ಟದ ಅಕ್ರಮ ನಡೆದಿದೆ ಎಂದು ಅಸಮಾಧಾನಗೊಂಡ ಸಿಬ್ಬಂದಿ, ಇದೆಲ್ಲದಕ್ಕೂ ಸಾಕ್ಷಿ ಆಗಿದ್ದು ಹುಬ್ಬಳ್ಳಿ ರೈಲ್ವೇ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಎಂದು ಹೇಳುತ್ತಿದ್ದಾರೆ.
ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಅಕ್ರಮದ ಸದ್ದು
ರೈಲ್ವೇಯ ಗೂಡ್ಸ್ ಟ್ರೈನ್ ಮ್ಯಾನೇಜರ್ ಸಿಇಟಿ ಪ್ರಶ್ನೆಪತ್ರಿಕೆ ಬಹಿರಂಗಗೊಳಿಸಿದ್ದಾರೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಜಿ.ಟಿ.ಎಂ. ಪರೀಕ್ಷಾರ್ಥಿಗಳು ಹುಬ್ಬಳ್ಳಿಯ ನೈರುತ್ಯ ರೈಲ್ವೇ ಜಿ.ಎಂ. ಕಛೇರಿ ಬಳಿ ಹೋರಾಟ ನಡೆಸಿದ್ದಾರೆ. ಸೆಪ್ಟೆಂಬರ್ 04ರಂದು ರೈಲ್ವೇ ಇಲಾಖೆಯಲ್ಲಿ ಪದೋನ್ನತಿಗಾಗಿ ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಸಿಇಟಿ ಜಿಟಿಎಲ್ ಆಂತರಿಕ ಸ್ಪರ್ಧಾ ಪರೀಕ್ಷೆಯನ್ನು ಆನ್‌ಲೈನ್ ಮೂಲಕ ನಡೆಸಲಾಗಿತ್ತು. ಪರೀಕ್ಷೆಗೂ ಮುನ್ನವೇ ಪ್ರಶ್ನೆಪತ್ರಿಕೆ ವಾಟ್ಸ್ ಆ್ಯಪ್‌ನಲ್ಲಿ ಹರಿದಾಡಿದೆ ಎಂಬ ಆರೋಪ ಕೇಳಿ ಬಂದಿದೆ.

147 ಹುದ್ದೆಗಳಿಗೆ ಒಟ್ಟು 4,685 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 200ಕ್ಕೂ ಹೆಚ್ಚು ಅಭ್ಯರ್ಥಿಗಳು ಶೇಕಡಾ 95 ರಿಂದ 96 ರಷ್ಟು ಅಂಕ ಪಡೆದಿದ್ದಾರೆ. ಹೀಗಾಗಿ ಇದನ್ನು ಖಂಡಿಸಿದ ಪರೀಕ್ಷಾರ್ಥಿಗಳು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಇನ್ನು ಸೂಕ್ತ ಕ್ರಮ ಕೈಗೊಳ್ಳುವಂತೆ ನೈರುತ್ಯ ರೈಲ್ವೇಯ ಜಿ.ಎಂ. ಗೆ ಮನವಿ ಸಲ್ಲಿಕೆ ಮಾಡದ್ದು, ಮರು ಪರೀಕ್ಷೆ ನಡೆಸುವಂತೆ ಅಭ್ಯರ್ಥಿಗಳು ಆಗ್ರಹಿಸಿದ್ದಾರೆ. ಪರೀಕ್ಷೆ ನಡೆದು ಎಂಟು ದಿನಗಳಾಗಿದೆ. ಪ್ರಶ್ನೆಪತ್ರಿಕೆ ಲೀಕ್ ಆಗಿದೆ ಎಂದು ಇದೀಗ ಕೆಲ ಅಭ್ಯರ್ಥಿಗಳು ಆರೋಪಿಸಿದ್ದಾರೆ. ಈ ಕುರಿತು ಪಾರದರ್ಶಕ ತನಿಖೆ ನಡೆಸುವುದಾಗಿ ಸಿ.ಪಿ.ಆರ್.ಒ ಅನೀಶ್ ಹೆಗ್ಡೆ ಮಾಹಿತಿ ನೀಡಿದ್ದಾರೆ.
ಒಟ್ಟಿನಲ್ಲಿ ಅಭ್ಯರ್ಥಿಗಳಿಂದ ಆರೋಪ ಗಂಭೀರವಾಗಿ ಕೇಳಿ ಬಂದಿದ್ದು, ಕೇಂದ್ರ ಸರ್ಕಾರದ ವ್ಯವಸ್ಥೆ ಹಾಳು ಮಾಡಲು ಕೆಲವೊಂದು ಜಾಲ ಸಕ್ರಿಯವಾಗಿರುವುದು ಕಂಡುಬರುತ್ತಿದೆ. ಈ ಬಗ್ಗೆ ರೈಲ್ವೇ ಇಲಾಖೆ ಸೂಕ್ತ ತನಿಖೆ ನಡೆಸಿ, ಕ್ರಮಗಳನ್ನು ಕೈಗೊಳ್ಳುವ ಮೂಲಕ ಅರ್ಹರಿಗೆ ಪದೋನ್ನತಿ ನೀಡುವ ಕೆಲಸವನ್ನು ಮಾಡಬೇಕಿದೆ.
-
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications