ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿಯ ವಿವಿಧೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ದಾಳಿ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಅಕ್ಟೋಬರ್ 5: ಇಲ್ಲಿನ ರಿಯಲ್ ಎಸ್ಟೇಟ್ ಉದ್ಯಮಿಗಳು, ಚಿನ್ನದ ಆಭರಣಗಳ ವ್ಯಾಪಾರಿಗಳಿಗೆ ಗೋವಾ ಮತ್ತು ಆಂಧ್ರ ಪ್ರದೇಶದ ಆದಾಯ ತೆರಿಗೆ ಅಧಿಕಾರಿಗಳು ಗುರುವಾರದಂದು ಆಘಾತ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಏಕಕಾಲದಲ್ಲಿ ನಾಲ್ಕು ಕಡೆ ಐಟಿ ದಾಳಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಗಳು, ಚಿನ್ನಾಭರಣ ವ್ಯಾಪಾರಿಗಳ ಮನೆ, ಕಚೇರಿ, ಮಳಿಗೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದು, ಕೆಲ ಡೆವಲಪರ್ಸ್ ಗಳ ಮನೆಗಳ ಮೇಲೂ ದಾಳಿ ನಡೆದಿದೆ.

ಐಟಿ ವಿಚಾರಣೆಗೆ ಹಾಜರಾದ ಸಚಿವ ಡಿಕೆ ಶಿವಕುಮಾರ್ಐಟಿ ವಿಚಾರಣೆಗೆ ಹಾಜರಾದ ಸಚಿವ ಡಿಕೆ ಶಿವಕುಮಾರ್

ಇನ್ನು ಹುಬ್ಬಳ್ಳಿಯ ಹೆಸರಾಂತ ಉದ್ಯಮಿ ದಿಲೀಪ್ ಸೆಲೇರಿ ಅವರ ಮನೆ ಹಾಗೂ ಕೊಪ್ಪಿಕರ್ ರಸ್ತೆಯ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಕೊಪ್ಪಿಕರ್ ರಸ್ತೆಯಲ್ಲಿ ಇರುವ ಮನೋಜ್ ಗೋಲ್ಡ್ ಅಂಡ್ ಡೈಮಂಡ್ ಜ್ಯೂವೆಲರಿ ಮಳಿಗೆ ಮೇಲೆ ದಾಳಿ ನಡೆಸಲಾಗಿದೆ. ಚೆನೈ, ಆಂಧ್ರಪ್ರದೇಶ ಹಾಗೂ ಗೋವಾದಿಂದ ಬಂದ ಆದಾಯ ತೆರಿಗೆ ಅಧಿಕಾರಿಗಳು ಬೆಳಗ್ಗೆ 6 ಗಂಟೆಗೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ.

Hubballi IT Raid

ಇನ್ನು ಕೊಪ್ಪಿಕರ್ ರಸ್ತೆಯಲ್ಲಿರುವ ಸ್ಯಾಟಲೈಟ್ ಶಾಪಿಂಗ್ ಮಳಿಗೆಯಲ್ಲಿ ಇರುವ ಕಲೆ ರಿಯಲ್ ಎಸ್ಟೇಟ್ ಉದ್ಯಮಿಗಳ ಕಚೇರಿ ಮೇಲೆ ದಾಳಿ ನಡೆದಿದೆ. ಈ ಉದ್ಯಮಿಗಳ ಮೇಲಿನ ಐಟಿ ದಾಳಿಯು ಸಾಕಷ್ಟು ಕುತೂಹಲ ಕೆರಳಿಸಿದೆ. ಸ್ಥಳೀಯ ಅಧಿಕಾರಿಗಳಿಗೆ ಸಣ್ಣ ಸುಳಿವು ನೀಡದೆ ದಾಳಿ ನಡೆದಿದ್ದು, ಕೋಟ್ಯಂತರ ರುಪಾಯಿ ಮೌಲ್ಯದ ಭೂ ದಾಖಲೆಗಳು ಪತ್ತೆಯಾಗಿವೆ ಎನ್ನಲಾಗಿದೆ.

English summary
IT raid in various places of Hubballi on Thursday. Goa and Andhra Income Tax officers raid on jewelry shops, real estate businessmans and developers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X