ಬಿಜೆಪಿ ಮುಖಂಡ ರವಿ ದಂಡಿನ ಮನೆ, ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ
ಹುಬ್ಬಳ್ಳಿ, ಅಕ್ಟೋಬರ್ 24: ಕನಕದಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಬಿಜೆಪಿ ಮುಖಂಡ ರವಿ ದಂಡಿನ ಅವರ ಮನೆ ಹಾಗೂ ಹೋಟೆಲ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ತನಿಖೆ ಮುಂದುವರೆದಿದೆ.
ಗದಗ ಹಾಗೂ ಇಲ್ಲಿನ ವಿದ್ಯಾನಗರದ ಕೆಎಸ್ ಎಸ್ ಶಿಕ್ಷಣ ಸಂಸ್ಥೆಯ ಕಚೇರಿ ಮೇಲೆ ಹುಬ್ಬಳ್ಳಿ, ಬೆಂಗಳೂರು ಹಾಗೂ ಗೋವಾದ 10 ಐಟಿ ಅಧಿಕಾರಿಗಳು ನಿನ್ನೆ ಬುಧವಾರ ಏಕಕಾಲಕ್ಕೆ ದಾಳಿ ಮಾಡಿ ಮಹತ್ವದ ದಾಖಲೆ ಪತ್ರಗಳನ್ನು ಪರಿಶೀಲನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಹಿವಾಟು ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ಸಂಸ್ಥೆಯ ಕಚೇರಿ, ಶಾಲಾ - ಕಾಲೇಜು, ಹೋಟೆಲ್ ಗಳ ಮೇಲೆ ದಾಳಿ ನಡೆಸಿ, ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಕೆಲವು ದಾಖಲೆ ಪತ್ರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.












Click it and Unblock the Notifications