ಗಣಪತಿ ಪ್ರಕರಣ ಮುಚ್ಚಿಹಾಕಲು ಪ್ರಯತ್ನ: ಶೆಟ್ಟರ್

Posted By:
Subscribe to Oneindia Kannada

ಹುಬ್ಬಳ್ಳಿ, ಆಗಸ್ಟ್ 24 : ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆಜೆ ಜಾರ್ಜ್ ಅವರನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಕೆಲ ಮಹತ್ವದ ಸಾಕ್ಷಿಗಳನ್ನು ಅಳಿಸಿ ಹಾಕಿದ್ದಾರೆ ಎಂದು ವಿಪಕ್ಷನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

ಗಣಪತಿ ಆತ್ಮಹತ್ಯೆಯ ಪ್ರಮುಖ ಸಾಕ್ಷಿಗಳ ನಾಶ? ಇಲ್ಲಿದೆ ಸ್ಫೋಟಕ ಮಾಹಿತಿ

ಗುರುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ಈ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿಹಾಕಲು ಪ್ರಯತ್ನ ಮಾಡಿದ್ದಾರೆ. ತಮ್ಮ ಅಧೀನದಲ್ಲಿರುವ ಸಿಐಡಿಯನ್ನು ದುರ್ಬಳಕೆ ಮಾಡಿಕೊಂಡು ಈ ಕೆಲಸ ಮಾಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Jagadeesh Shetter demands govt to hand over Ganapati death case to CBI

ಪ್ರಕರಣ ವಿಚಾರಣೆಯಲ್ಲಿ ಇರುವಾಗಲೇ ಅವರ ಮೊಬೈಲ್ ನಲ್ಲಿರುವ ಮಾಹಿತಿಗಳನ್ನ ಡಿಲೀಟ್ ಆಗಿದ್ದು ಹೇಗೆ? ನೇರವಾಗಿ ಜಾರ್ಜ್ ಅವರು ಈ ಕೇಸ್ ನಲ್ಲಿ ಭಾಗಿಯಾಗಿ ಸಾಕ್ಷ್ಯನಾಶ ಮಾಡಿದ್ದಾರೆ.

DYSP MK Ganapathi last interview- Oneindia Kannada

ಹೀಗಾಗಿ ಕೂಡಲೇ ಜಾರ್ಜ್ ಅವರು ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ಅವರು ಜಾರ್ಜ್ ಅವರ ರಾಜೀನಾಮೆ ಪಡೆದು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Karnataka government to hand over DYSP Ganapati death case to CBI, said former Karnataka CM Jagadeesh shetter in Hubballi on August 24.
Please Wait while comments are loading...