Darshan Case: ಇದು ರಾಕ್ಷಸ ಪ್ರವೃತ್ತಿ, ಹೇಯ ಕೃತ್ಯ: ಜಗದೀಶ್ ಶೆಟ್ಟರ್ ತೀವ್ರ ಅಸಮಾಧಾನ
ಹುಬ್ಬಳ್ಳಿ, ಜೂನ್ 12: ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿದ್ದಾರೆ. ಈ ಪ್ರಕರಣ ಕುರಿತು ಇಡೀ ರಾಜ್ಯವೇ ಖಂಡನೇ, ಆಕ್ರೋಶ ವ್ಯಕ್ತಪಡಿಸುತ್ತಿದೆ. ಇದೀಗ ಒಬ್ಬೊಬ್ಬರೇ ರಾಜಕಾರಣಗಳು ಪ್ರಕರಣ ಸಂಬಂಧ ಮುಕ್ತವಾಗಿ ಮಾತನಾಡುತ್ತಿದ್ದಾರೆ.
ಇದೀಗ ಈ ಕೇಸ್ ಬಗ್ಗೆ ಮಾತನಾಡಿರುವ ನೂತನ ಬೆಳಗಾವಿ ಬಿಜೆಪಿ ಸಂಸದ ಹಾಗೂ ಬಿಜೆಪಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕೃತ್ಯವನ್ನು ಖಂಡಿಸಿದ್ದಾರೆ. ದರ್ಶನ ಮಾಡಿರುವುದು ಹೇಯ ಕೃತ್ಯ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಬುಧವಾರ ಸುದ್ದಿಗಾರರ ಜೊತೆಗೆ ಅವರು, ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ತಮ್ಮ ಅಭಿಪ್ರಾಯ ಹಂಚಿಕೊಳ್ಳುವುದು ಸಾಮಾನ್ಯವಾಗಿ ಆಗಿದೆ. ಅದರೆ ಅದನ್ನ ಇಷ್ಟೊಂದು ಗಂಭೀರವಾಗಿ ಪರಿಗಣಿಸುವುದು ಸರಿಯಲ್ಲ. ದರ್ಶನ ಹಾಗೂ ಅವರ ತಂಡದವರು ಮಾಡಿದ್ದು ರಾಕ್ಷಸ ಪ್ರವೃತ್ತಿ ಆಗಿದ್ದು ಮಾನವೀಯತೆ ಮರೆತು ನಡೆಸಲಾಗದ ಕೃತ್ಯವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗ ಮೂಲಕ ಮೃತ ರೇಣುಕಾ ಸ್ವಾಮಿ ಮಾಡಿದ್ದು ತಪ್ಪು ಆಗಿದ್ದರೆ ಕಾನೂನು ಮೂಲಕ ಬಗೆಹರಿಸಿಕೊಳ್ಳಲು ಸಾಕಷ್ಟು ಅವಕಾಶಗಳು ಇದ್ದವು. ಆದರೆ ಹೀಗೆ ಕೊಲೆ ಮಟ್ಟಕ್ಕೆ ಹೋಗುವುದು ಸರಿಯಲ್ಲ ಎಂದು ಅವರು ತಿಳಿಸಿದರು.
5 ಗ್ಯಾರೆಂಟಿ ನಿಲ್ಲಿಸಲು ಕಾಂಗ್ರೆಸ್ ಶಾಸಕರೇ ಹೇಳಿದ್ದಾರೆ
ಇನ್ನು ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ಸ್ಥಗಿತಗೊಳ್ಳಿಸಲು ಸ್ವತಃ ಕಾಂಗ್ರೆಸ್ ಶಾಸಕರೇ ಹೇಳುತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ನಾನು ಮೊದಲೇ ಹೇಳಿದ್ದು ಐದು ಗ್ಯಾರಂಟಿಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದ್ದು ಗ್ಯಾರಂಟಿಗಳಿಂದ ಆರ್ಥಿಕ ವ್ಯವಸ್ಥೆ ಹೆದಗೆಟ್ಟಿದ್ದು ಅವರ ಪಕ್ಷದ ಶಾಸಕರೇ ಹೇಳಿದರಲ್ಲಿ ತಪ್ಪಿಲ್ಲ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ತಾವು ಸಹ ಸಚಿವ ಸ್ಥಾನದ ಆಕಾಂಕ್ಷಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಕೇಂದ್ರ ಮಂತ್ರಿಗಿರಿ ಆಕಾಂಕ್ಷಿ ಎಂದು ಎಲ್ಲಿಯೋ ಹೇಳಿಲ್ಲ. ಆದರೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಹೆಚ್ಚು ಮತಗಳ ಅಂತರದಿಂದ ಆಯ್ಕೆ ಆಗಿದ್ದು ಪಕ್ಷ ಯಾವ ಜವಾಬ್ದಾರಿ ಕೊಡುತ್ತದೆ. ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸಿಕೊಂಡು ಹೋಗಲು ಸಿದ್ಧ ಎಂದು ಅವರು ಸ್ಪಷ್ಟಪಡಿಸಿದರು.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರ ಮೇಲೆ ಚಾಕು ಇರಿತ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು ಈ ರೀತಿಯಾಗಿ ನಡೆಯಬಾರದು ಪೊಲೀಸರು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ರೇಣುಕಾಸ್ವಾಮಿ ಕೊಲೆ ಖಂಡಿಸಿ ಬೃಹತ್ ಪ್ರತಿಭಟನೆ
ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ನಟ ದರ್ಶನ್ ಹಾಗೂ ಸಹಚರರು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ರೇಣುಕಾ ಸ್ವಾಮಿಯ ಅಮಾನುಷ ಹತ್ಯೆಯನ್ನು ಖಂಡಿಸಿ ಬುಧವಾರ ವಿವಿಧ ಸಂಘಟನೆಗಳು ಸದಸ್ಯರು ಪ್ರತಿಭಟನೆ ನಡೆಸಿದರು.
ನಗರದ ಕೊಪ್ಪೀಕರ ರಸ್ತೆಯಿಂದ ಆರಂಭಗೊಂಡ ಪ್ರತಿಭಟನೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿ ಲ್ಯಾಮಿಂಗ್ಟನ್ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ ಮೂಲಕ ಸಾಗಿ ಮಿನಿ ವಿಧಾನಸೌಧ ತಲುಪಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದರು. ನಟನು ಸೇರಿದಂತೆ ಬಂಧಿತ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಅವರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವೀರಶೈವ ಸಮಾಜ, ವೀರಶೈವ ಲಿಂಗಾಯತ ಮಹಾಸಭಾ, ಜಂಗಮ ಸಮುದಾಯ ವತಿಯಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯರು ಮತ್ತು ರಾಜ್ಯ ಬೇಡ ಜಂಗಮ ಸಂಘಟನೆಯ ಯುವ ಘಟಕದ ಅಧ್ಯಕ್ಷರು ನೇಹಾ ತಂದೆ ನಿರಂಜನ ಹಿರೇಮಠ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲಾಯಿತು.












Click it and Unblock the Notifications