ಶೆಟ್ಟರ್ ಸೋಲಿಸಲು ಹೋಗಿ ಬಿಜೆಪಿ ಸೋತು ಸುಣ್ಣವಾಗಿದೆ : ಕಾಂಗ್ರೆಸ್ ಮುಖಂಡರ ಆತ್ಮಾವಲೋಕನ ಸಭೆ
ಹುಬ್ಬಳ್ಳಿ, ಮೇ 30: ರಾಜ್ಯ ರಾಜಕಾರಣದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿಗೆ ಬಹುದೊಡ್ಡ ಹೊಡೆತವನ್ನು ಕೊಟ್ಟಿದೆ. ಮಾಜಿ ಸಿಎಂ ಅವರನ್ನು ಸೋಲಿಸುವ ನಿಟ್ಟಿನಲ್ಲಿ ತಮ್ಮ ಸೋಲನ್ನು ಒಪ್ಪಿಕೊಂಡಿರುವ ಬಿಜೆಪಿ ಅಧಿಕಾರವನ್ನು ಕಳೆದುಕೊಂಡಿದೆ. ಆದರೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪರಾಭವಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಲಿನ ಆತ್ಮಾವಲೋಕನ ಮಾಡಿಕೊಳ್ಳಲು ಈಗ ಶೆಟ್ಟರ್ ಮುಂದಾಗಿದ್ದಾರೆ.
ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಈ ಬಾರಿಯ ಚುನಾವಣೆಯಲ್ಲಿ ನಿಜಕ್ಕೂ ಹೈ ವೋಲ್ಟೇಜ್ ಕಣವಾಗಿ ಪರಿಣಮಿಸಿತ್ತು. ಶಿಷ್ಯನ ವಿರುದ್ಧವೇ ಗುರುವಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೋಲನ್ನು ಅನುಭವಿಸಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನು ಆತ್ಮಾವಲೋಕನ ಮಾಡಿಕೊಳ್ಳಲು ಹುಬ್ಬಳ್ಳಿಯ ರಾಯ್ಕರ್ ಗೇಸ್ಟ್ ಹೌಸ್ ನಲ್ಲಿ ಕಾರ್ಯಕ್ರಮ ಮೂಲಕ ಆತ್ಮಾವಲೋಕನ ಮಾಡಿಕೊಳ್ಳುವ ಮೂಲಕ ಸೋಲಿನ ಕಾರಣವನ್ನು ಪರಾಮರ್ಶೆ ಮಾಡಿ ಕಾರ್ಯಕರ್ತರಿಗೆ ಉತ್ಸಾಹ ತುಂಬುವ ಕಾರ್ಯವನ್ನು ಮಾಡಿದ್ದಾರೆ.

ಇನ್ನೂ ಕಾರ್ಯಕ್ರಮಕ್ಕೆ ಪ್ರಫುಲ್ ಚಂದ್ರ ರಾಯನಗೌಡ್ರ, ಜಕ್ಕಪ್ಪನವರ, ಮಹೇಂದ್ರ ಸಿಂಘಿ, ಅನೀಲಕುಮಾರ್ ಪಾಟೀಲ, ಅಲ್ತಾಫ್ ಹಳ್ಳೂರ, ಸದಾನಂದ ಡಂಗನವರ ಸೇರಿದಂತೆ ನೂರಾರು ಮುಖಂಡರು ಸಾವಿರಾರು ಕಾರ್ಯಕರ್ತರು ಭಾಗವಹಿಸುವ ಮೂಲಕ ವಿನೂತನ ರೀತಿಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಲಾಯಿತು.
ಒಟ್ಟಿನಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೋಲಿಸಲು ಹೋಗಿ ರಾಜ್ಯದಲ್ಲಿ ಬಿಜೆಪಿ ಸೋಲನ್ನು ಅನುಭವಿಸಿದೆ ಎನ್ನುವಂತಹ ಮಾತನ್ನು ಕಾಂಗ್ರೆಸ್ ಮುಖಂಡರು ಸಭೆಯಲ್ಲಿ ಪುನರ್ ಉಚ್ಚರಿಸುವ ಮೂಲಕ ಶೆಟ್ಟರ್ ಸೋಲಿನ ಪರಾಮರ್ಶೆ ಮಾಡಿಕೊಂಡಿದ್ದಾರೆ.
ನಾನು ಡಿಪ್ರೆಶನ್‌ಗೆ ಹೋಗುವುದಿಲ್ಲ ಡಿಪ್ರೆಶನ್‌ಗೆ ಕಳಿಸುತ್ತೇನೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಸೋಲು ಎಂಬುವುದು ಫೈನಲ್ ಅಲ್ಲ. ಶೆಟ್ಟರ್ ಸೋತರೇ ಡಿಪ್ರೆಶನ್‌ಗೆ ಹೋಗುತ್ತಾರೆ ಎಂದು ಕೆಲವರು ಮಾತನಾಡಿದ್ದರು. ಆದರೆ ಶೆಟ್ಟರ್ ಡಿಡಿಪ್ರೆಶನ್‌ಗೆ ಹೋಗುವುದಿಲ್ಲ. ಡಿಪ್ರೆಶನ್‌ಗೆ ಕಳಿಸುತ್ತಾರೆ. ಸೋತವರೇ ಗೆದ್ದು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆತ್ಮಾವಲೋಕನ ಮಾಡಿಕೊಂಡಿದ್ದಾರೆ.

ಹುಬ್ಬಳ್ಳಿಯ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಚುನಾವಣಾ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಸೋಲು ಗೆಲುವಿನ ಸೋಪಾನ. ಅಧಿಕಾರ ಎಂದಿಗೂ ಶಾಶ್ವತವಲ್ಲ. ಈ ನಿಟ್ಟಿನಲ್ಲಿ ಜನರ ಮನಸ್ಸು ಮಾಡಿದರೇ ಏನು ಬೇಕಾದರೂ ಮಾಡಬಹುದು. ಆದರೆ ಸೋಲು ಫೈನಲ್ ಅಲ್ಲ ಎಂದರು.
ಇನ್ನು ಶೆಟ್ಟರ್ ವೈಯಕ್ತಿಕವಾಗಿ ಎಂದಿಗೂ ಕೂಡ ಸೋತಿಲ್ಲ. ಶೆಟ್ಟರ್ ಕುಟುಂಬಕ್ಕೆ ಸೋಲಿನ ಅನುಭವವಿದೆ. ಆದರೆ ಜಗದೀಶ್ ಶೆಟ್ಟರ್ ವೈಯಕ್ತಿಕವಾಗಿ ಸೋತಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಮ್ಮ ಬಗ್ಗೆ ಭರವಸೆಯ ಮಾತುಗಳನ್ನಾಡಿದರು.












Click it and Unblock the Notifications