ಬೆಳಗಾವಿ: ಪ್ರತಿಸ್ಪರ್ಧಿ ಯುವಕನೆಂದು ನಿರ್ಲಕ್ಷ್ಯ ಮಾಡಲ್ಲ: ಪ್ರಚಾರದ ಬಗ್ಗೆ ಜಗದೀಶ್ ಶೆಟ್ಟರ್ ಹೇಳಿದ್ದೇನು?
ಹುಬ್ಬಳ್ಳಿ, ಮಾರ್ಚ್ 25: ಅಂದುಕೊಂಡಂತೆ ನನಗೆ ಬೆಳಗಾವಿ ಲೋಕಸಭಾ ಟಿಕೆಟ್ ಸಿಕ್ಕಿದೆ. ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಯುವಕ ಎಂಬ ಕಾರಣಕ್ಕೆ ನಿರ್ಲಕ್ಷ್ಯ ಮಾಡುವುದಿಲ್ಲ. ಈ ಚುನಾವಣೆಯಲ್ಲಿ ಜಾತಿ ಫ್ಯಾಕ್ಟರ್ ಕೆಲಸ ಮಾಡುವುದಿಲ್ಲ. ಬುಧವಾರದಿಂದ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಲಾಗುವುದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಸೋಮವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂದು ಹೋಲಿ ಹಬ್ಬ ಇರುವ ಕಾರಣ ಬುಧವಾರದಿಂದ ಬೆಳಗಾವಿಗೆ ತೆರಳಿ ಪ್ರಚಾರ ಪ್ರಾರಂಭಿಸುತ್ತೇನೆ. ಈ ಕುರಿತಂತೆ ಬೆಳಗಾವಿ ನಾಯಕರ ಜೊತೆಗೆ ಮಾತನಾಡಿದ್ದೇವೆ. ಬೆಳಗಾವಿಯಲ್ಲಿ ಎಲ್ಲ ಬಿಜೆಪಿ ನಾಯಕರು ಒಟ್ಟಾಗಿ ಚುನಾವಣೆ ಎದುರಿಸೋಣ ಎಂದು ಹೇಳಿದ್ದಾರೆ.

ಹುಬ್ಬಳ್ಳಿ ನನ್ನ ಜನ್ಮಭೂಮಿ, ಬೆಳಗಾವಿ ನನ್ನ ಕರ್ಮಭೂಮಿ. ಬೆಳಗಾವಿಯನ್ನು ಕರ್ಮಭೂಮಿಯಾಗಿ ತೆಗೆದುಕೊಳ್ಳುತ್ತೇನೆ. ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ಕಾಂಗ್ರೆಸ್ ಅಭ್ಯರ್ಥಿ (ಮೃಣಾಲ್ ಹೆಬ್ಬಾಳಕರ್) ಯುವಕ ಎಂದು ನಿರ್ಲಕ್ಷಿಸುವುದಿಲ್ಲ ಎಂದರು.
ರೆಡ್ಡಿ ಬಳಿಕ ಕೆಲವು ಬಿಜೆಪಿಗೆ ಬರಲಿದ್ದಾರೆ
ಚುನಾವಣೆಯಲ್ಲಿ ಜಾತಿ ಫ್ಯಾಕ್ಟರ್ ಕೆಲಸ ಮಾಡುವುದಿಲ್ಲ. ಹೀಗಾಗಿ ನಾನು ಎಲ್ಲರನ್ನು, ಎಲ್ಲಾ ವರ್ಗ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸಿ ನಾನು ಗೆದ್ದು ಬರುತ್ತೇನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (KRPP) ಸಂಸ್ಥಾಪಕ ರಾಜ್ಯಾಧ್ಯಕ್ಷ ಗಾಲಿ ಜನಾರ್ಧನ್ ರೆಡ್ಡಿಯವರು ಮರಳಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಅವರು ಈ ಹಿಂದೆ ಬಿಜೆಪಿ ಸಂಘಟನೆಗೆ ಸಾಕಷ್ಟು ಕೆಲಸ ಮಾಡಿದ್ದಾರೆ. ಜೆಪಿಗೆ ಅಸ್ತಿತ್ವವೇ ಇಲ್ಲದಿರುವಾಗ ಅವರು ಪಕ್ಷ ಸಂಘಟನೆಗೆ ಶ್ರಮಿಸಿದ್ದಾರೆ. ಜನಾರ್ಧನ ರೆಡ್ಡಿಯವರ ಹಾಗೆ ಸಾಕಷ್ಟು ಜನರು ಬಿಜೆಪಿಗೆ ಬರುತ್ತಾರೆ ಎಂದು ಅವರು ಭವಿಷ್ಯ ನುಡಿದರು.
ಹಾಲಿ ಸಂಸದರಿಂದ ಬೆಂಬಲ
ನಾನು ಬೆಳಗಾವಿ ಭಾಗದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಬೆಳಗಾವಿಯ ಎಲ್ಲಾ ನಾಯಕರ ಜೊತೆ ಮಾತಾಡಿದ್ದೇನೆ. ಪ್ರಧಾನಿ ನರೇಂದ್ರ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡಬೇಕು ಎನ್ನವುದು ಎಲ್ಲರ ಇಚ್ಛೇ ಆಗಿದೆ.
ಸಂಸದೆ ಮಂಗಳಾ ಅಂಗಡಿ ಸೇರಿದಂತೆ ಕುಟುಂಬಸ್ಥರು ನನಗೆ ಟಿಕೆಟ್ ನೀಡಿದ್ದಕ್ಕೆ ತುಂಬಾ ಸಂತೋಷ ವ್ಯಕ್ತಪಡಿಸಿದ್ದಾರೆ. ಮಂಗಳಾ ಅಂಗಡಿಯವರ ಕುಟುಂಬ ನನ್ನ ಪರ ಪ್ರಚಾರ ಮಾಡುತ್ತಾರೆ. ಅದೇ ರೀತಿ ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಅವರು ನನಗೆ ಬೆಂಬಲ ಕೊಡಲಿದ್ದಾರೆ ಎಂದು ಶೆಟ್ಟರ್ ಹೇಳಿದರು.
ನಾನು ಮೊದಲೇ ಹೇಳದಂತೆ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಕ್ಕಿದೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಬರದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ. ಶೀಘ್ರವೇ ಬೆಳಗಾವಿಯಲ್ಲಿ ಮನೆ ಮಾಡಲು ನಮ್ಮ ಬೀಗರಿಗೆ ತಿಳಿಸಿದ್ದೇನೆ ಅಲ್ಲಿಯೇ ಮನೆ ಮಾಡಿ ಅಲ್ಲಿನ ಜನರ ವಿಶ್ವಾಸ ಗಳುವೆ ಎಂದರು.












Click it and Unblock the Notifications