ಮತಹಾಕಿದ ಜನ, ರೈತರಿಗೆ ಕುಮಾರಸ್ವಾಮಿ ದ್ರೋಹ: ಜಗದೀಶ್ ಶೆಟ್ಟರ್‌

ಹುಬ್ಬಳ್ಳಿ, ಮೇ 28: 'ನಾನು ಕರ್ನಾಟಕದ ಜನರ ಮುಲಾಜಿನಲ್ಲಿಲ್ಲ, ಕಾಂಗ್ರೆಸ್‌ನ ಮರ್ಜಿಯಲ್ಲಿದ್ದೇನೆ' ಎನ್ನುವ ಮೂಲಕ ಕುಮಾರಸ್ವಾಮಿ ಅವರು, ಮತ ಹಾಕಿದ ಜನರಿಗೆ, ರೈತರಿಗೆ ದ್ರೋಹ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದ್ದರು.

ರೈತರ ಸಾಲ ಮನ್ನಾ ಮಾಡಬೇಕು ಎಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ಅಧಿಕಾರ ವಹಿಸಿಕೊಂಡ 24 ಗಂಟೆಗಳಲ್ಲಿ ಸಾಲಮನ್ನಾ ಮಾಡುತ್ತೇನೆ ಎಂದು ಹೇಳಿದ್ದ ಕುಮಾರಸ್ವಾಮಿ ಅವರು ಈಗ ಯೂ ಟರ್ನ್‌ ಹೊಡೆದಿದ್ದಾರೆ' ಎಂದು ಅವರು ಆರೋಪಿಸಿದ್ದಾರೆ.

ಪೂರ್ಣ ಬಹುಮತ ಬಂದಿಲ್ಲ, ಪೂರ್ಣ ಬಹುಮತ ಬಂದಿದ್ದರೆ ಸಾಲ ಮನ್ನಾ ಮಾಡುತ್ತಿದ್ದೆ ಎಂದು ಕುಮಾರಸ್ವಾಮಿ ಅವರು ಹೇಳಿರುವುದು ಪಲಾಯನವಾದ ಎಂದು ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

Jagadish Shettar lambasted on Kumaraswamy on his statement about loan wavier

ಸಾಲಮನ್ನಾ ಕುರಿತ ಕುಮಾರಸ್ವಾಮಿ ಅವರ ಹೇಳಿಕೆಗಳನ್ನು ರೈತರು ಗಮನಿಸಬೇಕು, ಹೇಗೆ ಕುಮಾರಸ್ವಾಮಿ ಚುನಾವಣೆಗಾಗಿ ರೈತರನ್ನು ಬಳಸಿಕೊಳ್ಳುತ್ತಾರೆ ಎಂಬುದು ಇದರಿಂದ ಗೊತ್ತಾಗುತ್ತದೆ. ಅಧಿಕಾರಕ್ಕೆ ಬರಲು ಸುಳ್ಳುಗಳನ್ನು ಹೇಳಿ ಈಗ ಎಚ್‌ಡಿಕೆ ಪಲಾಯನ ಮಾಡಿದ್ದಾರೆ ಎಂದರು.

'ನಮಗೆ ಜನಾದೇಶ ಇಲ್ಲ, ಹಾಗಾಗಿ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಹೇಳಿರುವ ಕುಮಾರಸ್ವಾಮಿ ಅವರು ಜನಾದೇಶ ಇಲ್ಲದಿದ್ದರೆ ಅಧಿಕಾರದಲ್ಲಿ ಏಕಿದ್ದಾರೆ? ಕೂಡಲೇ ಅವರು ಸಿಎಂ ಹುದ್ದೆಯಿಂದ ಕೆಳಗಿಳಿಯಲಿ ಎಂದು ಜಗದೀಶ್ ಶೆಟ್ಟರ್ ಒತ್ತಾಯಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+