Budget 2024 of India: ಬಜೆಟ್ ಬಗ್ಗೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ
ಬೆಂಗಳೂರು, ಫೆಬ್ರವರಿ 01: ವಿಧಾನಸಭಾ ಚುನಾವಣೆ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ತೆರಳಿ, ಲೋಕಸಭಾ ಚುನಾವಣೆ ಮೊದಲು ಮರಳಿ ಬಿಜೆಪಿಗೆ ಬಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇಂದು (ಫೆಬ್ರವರಿ 1) ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಮಂಡನೆ ಬಳಿಕ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡನೆ ಮಾಡಿದ್ದಾರೆ. ಯುವ ಸಬಲೀಕರಣಕ್ಕೆ, ರೈತರ ಕ್ಷೇಮಾಭವೃದ್ಧಿ, ಬಡವರ ಕಲ್ಯಾಣ, ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಸ್ಕಿಲ್ ಇಂಡಿಯಾ, ಆಯುಷ್ಮಾನ್ ಭಾರತ, ರಾಷ್ಟ್ರೀಯ ಶಿಕ್ಷಣ ನೀತಿಗೆ ಆದ್ಯತೆ ಕೊಟ್ಟಿದ್ದಾರೆ. ಕನಿಷ್ಠ ಬೆಂಬಲ ಬೆಲೆಗೆ ಒತ್ತು ಕೊಡುವ ಕೆಲಸವಾಗಿದೆ. ಶಿಕ್ಷಣ, ಆರೋಗ್ಯ, ಕೈಗಾರಿಕೆ, ಪ್ರವಾಸೋದ್ಯಮಕ್ಕೆ ಒತ್ತು ಕೊಡಲಾಗಿದೆ. ಅಭಿವೃದ್ಧಿ ಹೊಂದಿದ ಭಾರತ ಮಾಡಲು ಮೋದಿಯವರ ಸರ್ಕಾರ ಎಲ್ಲಾ ಕೆಲಸ ಮಾಡುತ್ತಿದೆ.
ಕರ್ನಾಟಕಕ್ಕೂ ಅನುದಾನ ಹಂಚಿಕೆ ಆಗಿದೆ
ಎಲ್ಲಾ ರಾಜ್ಯಗಳಿಗೆ ಆಗಿರುವ ರೀತಿ ಕರ್ನಾಟಕಕ್ಕೂ ಅನುದಾನ ಹಂಚಿಕೆಯಾಗಿದೆ. ಕಡಿಮೆ ಹಣ ಬಂದಿದೆ ಅನಿಸಿದ್ದರೆ ಅದನ್ನು ಚರ್ಚಿಸಲು ವೇದಿಕೆಯಿದೆ. ನೀತಿ ಆಯೋಗದಲ್ಲಿ ಕಾಂಗ್ರೆಸ್‌ನವರೂ ಇದ್ದು ಅಲ್ಲಿ ಚರ್ಚೆ ಮಾಡಬೇಕು ಎಂದು ಹೇಳಿದರು.
ನಾನು ಪಕ್ಷ ಕೊಡುವ ಯಾವುದೇ ಜವಾಬ್ದಾರಿಯನ್ನಾದರೂ ನಿರ್ವಹಿಸಲು ಸಿದ್ಧ. ಪಕ್ಷ ಹೇಳಿದ್ರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ. ಬಿಜೆಪಿ ವರಿಷ್ಠರು ಗೌರವಯುತ ಸ್ಥಾನ ಕೊಡುತ್ತೇವೆ ಅನ್ನುವಂತಹ ಭರವಸೆ ನೀಡಿದ್ದಾರೆ. ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡಬೇಕು ಎನ್ನುವುದೇ ನಮ್ಮ ಗುರಿ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಸೇರಿದವರು ಮರಳಿ ಬಿಜೆಪಿ: ಶೆಟ್ಟರ್
ನನ್ನ ಜೊತೆ ಕಾಂಗ್ರೆಸ್ ಸೇರಿದವರು ಎಲ್ಲರೂ ಮತ್ತೆ ವಾಪಸ್ ಬಿಜೆಪಿಗೆ ಬರುತ್ತಾರೆ. ಬೇರೆ ಬೇರೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಕೂಡ ಬಿಜೆಪಿ ಸೇರಲು ಇಚ್ಛೆ ವ್ಯಕ್ತಪಡಿಸುತ್ತಿದ್ದಾರೆ. ನಿಮ್ಮ ಜೊತೆಗೆ ಬಿಜೆಪಿಗೆ ಬರುತ್ತೇವೆ ಎನ್ನುತ್ತಿದ್ದಾರೆ. ರಾಜ್ಯಾದ್ಯಂತ ಸಂಚಾರ ಮಾಡಿದಾಗ ಕಾಂಗ್ರೆಸ್ ನ ಬಹಳಷ್ಟು ಜನ ನನ್ನ ಸಂಪರ್ಕಕ್ಕೆ ಬಂದಿದ್ದಾರೆ. ಅವರೆಲ್ಲಾ ಆದಷ್ಟು ಶೀಘ್ರ ಬಿಜೆಪಿ ಸೇರಲಿದ್ದಾರೆ ಎಂದು ಶೆಟ್ಟರ್ ಬಾಂಬ್ ಸಿಡಿಸದರು.
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದರೂ ಪಕ್ಷದ ವರ್ಚಸ್ಸು ಬೆಳೆಯುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ತೊರೆಯಲು ಅಲ್ಲಿನವರು ಮನಸ್ಸು ಮಾಡುತ್ತಿದ್ದಾರೆ ಎಂದು ಬಿಜೆಪಿ ಮರಳುತ್ತಿರುವುದಕ್ಕೆ ಶೆಟ್ಟರ್ ಕಾರಣ ನೀಡಿದರು.
ಶಾಸಕ ಬಾಲಕೃಷ್ಣ ಹೇಳಿಕೆ ಕಾಂಗ್ರೆಸ್‌ನ ಮನಸ್ಥಿತಿ ತೋರಿಸುತ್ತದೆ. ಚುನಾವಣೆಗಾಗಿ ಭಾಗ್ಯಗಳನ್ನು ಕೊಟ್ಟರು ಎನ್ನವು ಭಾವನೆ ಜನರಲ್ಲಿ ಮೂಡಿದೆ. ಲೋಕಸಭೆ ಚುನಾವಣೆ ನಂತರ ಭಾಗ್ಯಗಳು ಇರುವುದಿಲ್ಲ ಎಂಬ ಪರಿಸ್ಥಿತಿ ಈಗಾಗಲೇ ಕಾಣಿಸುತ್ತಿದೆ ಎಂದು ತಿಳಿಸಿದರು..












Click it and Unblock the Notifications