ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಆಹ್ವಾನಿಸುವ ಮಾತೇ ಇಲ್ಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ, ಜೂನ್, 13: ನಾನು ಈಗಾಗಲೇ ನಮ್ಮ ಪಕ್ಷದ ಸೋಲಿನ ನೈತಿಕ ಹೊಣೆಯನ್ನು ಹೊತ್ತಿದ್ದೇನೆ. ಮುಂದಿನ ಲೋಕಸಭೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಪ್ರಶ್ನೆ ಸದ್ಯಕ್ಕಿಲ್ಲ. ರಾಜಕಾರಣದಲ್ಲಿ ಭವಿಷ್ಯ ನುಡಿಯುವುದು ಬಹಳ ಕಷ್ಟ. ಹಾಗೆಯೇ ಜಗದೀಶ್ ಶೆಟ್ಟರ್ ಅವರನ್ನು ಪುನಃ ಪಕ್ಷಕ್ಕೆ ಕರೆಯುವ ಪ್ರಶ್ನೆಯೇ ಇಲ್ಲ. ಅವರು ಕಾಂಗ್ರೆಸ್ ಪಕ್ಷದಲ್ಲಿ ಸಮಾಧಾನ ಇದೆಯೆಂ ಹೇಳಿಕೆ ನೀಡಿದ್ದಾರೆ. ಹೀಗಿದ್ದಾಗ ಅವರ ಬಗ್ಗೆ ಹೆಚ್ಚು ವ್ಯಾಖ್ಯಾನ ಬೇಡ ಎಂದು ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಹೇಳಿದರು.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರ ವೈಯಕ್ತಿಕ ನಿರ್ಣಯ ಇದೆ. ಅದಕ್ಕೆ ನಮ್ಮ ಬೆಲೆ ಇದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು. ಇನ್ನು ಸದನಕ್ಕೂ ಮುಂಚೆ ವಿಪಕ್ಷ ನಾಯಕರ ಆಯ್ಕೆ ಮಾಡಲಾಗುತ್ತದೆ. ಈಗಾಗಲೇ ಶಾಸಕಾಂಗದ ಸಭೆ ಮಾಡಲಾಗಿದೆ. ನಮ್ಮ ಕೇಂದ್ರದ ನಾಯಕರಾದ ಅರುಣಸಿಂಗ್ ಅವರು ಶಾಸಕರ ಅಭಿಪ್ರಾಯ ಪಡೆದಿದ್ದಾರೆ ಎಂದರು.
ಮತ್ತೊಂದು ಸುತ್ತಿನ ಸಭೆ ಕರೆದು ವಿಪಕ್ಷ ನಾಯಕರನ್ನು ಘೋಷಣೆ ಮಾಡಲಾಗುವುದು. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ನಾನು ಆಕಾಂಕ್ಷಿ ಎಂಬ ಪ್ರಶ್ನೆಯೇ ಇಲ್ಲ. ಈವರೆಗೆ ಯಾವುದೇ ಹುದ್ದೆಯನ್ನು ಕೇಳಿ ಪಡೆದಿಲ್ಲ. ಹೀಗಾಗಿ ರಾಜ್ಯದಲ್ಲಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ. ಅದಕ್ಕೆ ಪಕ್ಷ ಕಟ್ಟುವುದು ಆಗಬೇಕಿದೆ ಎಂದರು.

ಬಿಜೆಪಿ ವಿರುದ್ಧ ಮಾಜಿ ಸಿಎಂ ವಾಗ್ದಾಳಿ
ಈಗಾಗಲೇ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಿದೆ. ಈಗ ಗ್ಯಾರಂಟಿ ಬಗ್ಗೆ ಕಾದುನೋಡುವ ತಂತ್ರ ನಮ್ಮದು. ಉಚಿತ ಬಸ್ ಪಾಸ್ ಆರಂಭದ ಶೂರತ್ವ ಸರ್ಕಾರ ತೋರುತ್ತಿದೆ. ಗ್ಯಾರಂಟಿ ರೂಪದಲ್ಲಿ ತಾಯಿಯಂದಿರಿಗೆ ಉಚಿತ ನೀಡುವ ಸಲುವಾಗಿ ಪುರುಷರಿಗೆ ಪ್ರಯಾಣ ಇಲ್ಲದಂತೆ ಆಗುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ಹೇಳಿದರು.
ನಗರದಲ್ಲಿ ಮಾಧ್ಯಮದವರ ಜೊತೆ ಮಾತ ನಾಡಿದ ಅವರು, ರಾಜ್ಯದಲ್ಲಿ ಬಸ್‌ಗಳ ಸಮಸ್ಯೆ ಆಗುತ್ತಿದೆ. ಈಗಾಗಲೇ ನಾವು ಡೀಸೆಲ್ ಅನುದಾನ ಬಿಡುಗಡೆ ಮಾಡಿದ್ದೇವೆ. ಅದನ್ನು ಮುಂದುವರಿಕೆ ಮಾಡಬೇಕು. ಕೆಎಸ್‌ಆರ್‌ಟಿಸಿ ಸಾಕಷ್ಟು ಡೀಸೆಲ್ ಬಳಕೆ ಮಾಡಬೇಕು. ಗ್ಯಾರಂಟಿಗಳಿಗೆ ಹಣಕಾಸಿನ ಬಗ್ಗೆ ಸರ್ಕಾರ ಸ್ಪಷ್ಟವಾಗಿ ಹೇಳುತ್ತಿಲ್ಲ. ಹಣಕಾಸಿನ ವಿಚಾರದಲ್ಲಿ ಜನರನ್ನು ಕತ್ತಲಲ್ಲಿ ಇಡಲು ಸರ್ಕಾರ ಮುಂದಾಗಿದೆ ಎಂದರು.
ಗ್ಯಾರಂಟಿ ವಿಚಾರದಲ್ಲಿ ಹಣಕಾಸಿನ ಬಗ್ಗೆ ಮಾಹಿತಿ ಪಡೆಯುವುದು ಪ್ರತಿಯೊಬ್ಬ ಕನ್ನಡಿಗನ ಹಕ್ಕು. ಆದರೆ ಈ ಕಾಂಗ್ರೆಸ್‌ನ ಗ್ಯಾರಂಟಿ ಒಂದು ಕೈಯಲ್ಲಿ ತೆಗೆದುಕೊಂಡು ಮತ್ತೊಂದು ಕೈಯಲ್ಲಿ ಕೂಡುವಂತಾಗಿದೆ. ನಾವು ವಿದ್ಯುತ್ ಬಿಲ್ ಏರಿಕೆ ಅನುಷ್ಠಾನವನ್ನು ಜಾರಿಗೆ ತಂದಿಲ್ಲ. ವಿದ್ಯುತ್ ಬಿಲ್ ದರವನ್ನು ನಮ್ಮ ಸರ್ಕಾರ ಏರಿಕೆ ಮಾಡಿಲ್ಲ ಅಂತಾ ಸ್ಪಷ್ಟಪಡಿಸಿದರು.
ದರ ಏರಿಕೆ ವರದಿಯನ್ನು ನಾವು ಒಪ್ಪಿರಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ಬಿಲ್ ದರ ಏರಿಕೆಯ ವರದಿಗೆ ಒಪ್ಪಿಗೆ ನೀಡಿದೆ.ಇದರಿಂದಾಗಿ ಬಿಲ್ ಜಾಸ್ತಿ ಆಗಿದೆ ಎಂದು ರಾಜ್ಯ ಸರ್ಕಾರದ ನಡೆ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು.












Click it and Unblock the Notifications