Jagadish Shettar: ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ
ಹುಬ್ಬಳ್ಳಿ, ಜೂನ್ 05: ಬೆಳಗಾವಿಗೆ ನಾನು ವಲಸಿಗ, ಹೊರಗಿನವನು ಎಂದು ಟೀಕಿಸಿದವರಿಗೆ ಜನರೇ ಚುನಾವಣೆಯಲ್ಲಿ ಉತ್ತರ ಕೊಟ್ಟಿದ್ದಾರೆ. ಇದೀಗ 1ಲಕ್ಷ 80 ಸಾವಿರ ಅಂತರದಿಂದ ಜಯಗಳಿಸಿದ್ದೇವೆ. ನಾನು ಯಾವುದೇ ಮಂತ್ರಿ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಅವರು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ ಮೊದಲ ಬಾರಿಗೆ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಶೆಟ್ಟರ್ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು. ದೇವರ ಗದ್ದುಗೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದು ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

ಲೋಕಸಭಾ ಚುನಾವಣೆಯಲ್ಲಿ ನಾನು ಭಾರೀ ಅಂತರದಿಂದ ಗೆದ್ದಿದ್ದು, ಇದಕ್ಕೆ ಸ್ಥಳೀಯ ನಾಯಕರು, ಕಾರ್ಯಕರ್ತರು ಸಹಕಾರ ಕಾರಣ. ಅವರಿಂದ ನನಗೆ ಗೆಲುವು ಸಿಕ್ಕಿದೆ. ನಾನು ಹೊರಗಿನವನು ಎಂದವರಿಗೆ ಜನರೇ ಜನರು ಉತ್ತರ ಕೊಟ್ಟಿದ್ದಾರೆ. ನಾನು ಯಾವುದೇ ಮಂತ್ರಿ ಸ್ಥಾನದ ಆಕಾಂಕ್ಷಿ ಅಲ್ಲ ಎಂದ ಅವರು, ಹೈಕಮಾಂಡ್ ಯಾವುದೇ ಜವಾಬ್ದಾರಿ ಕೊಟ್ಟರು ನಿಭಾಯಿಸುವಂತೆ ಎಂದು ಅವರು ಹೇಳಿದರು.
ನಾನು ಧಾರವಾಡದ ಬಗ್ಗೆ ಗಮನ ಹರಿಸಿಲ್ಲ
ಇನ್ನೂ ಧಾರವಾಡದಲ್ಲಿ ಬಿಜೆಪಿ ಪ್ರಹ್ಲಾದ್ ಜೋಶಿ ಅವರು ಕಡಿಮೆ ಅಂತರದಲ್ಲಿ ಗೆದ್ದಿದ್ದಾರೆ. ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಧಾರವಾಡ ಕ್ಷೇತ್ರದ ಕುರಿತು ಗಮನ ಹರಿಸಿಲ್ಲ. ನನ್ನ ಬೆಳಗಾವಿ ಚುನಾವಣೆ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ಕೆಲಸ ಮಾಡಿದ್ದೆ.
ಬೆಳಗಾವಿ ಅಭಿವೃದ್ಧಿಗೆ ನನ್ನ ಶ್ರಮ ಮೀಸಲು
ಮುಂದಿನ ದಿನಗಳಲ್ಲಿ ಬೆಳಗಾವಿ ಕ್ಷೇತ್ರದ ಪರಿಪೂರ್ಣ ಅಭಿವೃದ್ಧಿಗಾಗಿ ಹೆಚ್ಚು ಕೆಲಸ ಮಾಡುತ್ತೇವೆ. ನಾಳೆ ಗುರುವಾರ ನವದೆಹಲಿಗೆ ಹೋಗಿ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡುವ. ಯುಪಿಎದವರಿಗೆ ಮೊದಲು ಎರಡು ಸಲ ಬಹುಮತ ಸಿಕ್ಕಿರಲಿಲ್ಲ. ಆ ವೇಳೆಯಲ್ಲಿ ಅವರು ಸರ್ಕಾರ ರಚನೆ ಮಾಡಿದ್ದರು ಎಂದು ಎನ್‌ಡಿಗೆ ಕಡಿಮೆ ಸ್ಥಾನ ಬಂದಿರುವುದು ಹಾಗೂ ಕೇಂದ್ರ ಸರ್ಕಾರ ರಚನೆ ಬಗ್ಗೆ ಅವರು ಉತ್ತರಿಸಿದರು.
ಈ ಚುನಾವಣೆಯಲ್ಲಿ ನಮ್ಮ ಎನ್ ಡಿಎಗೆ ಬಹುಮತ ಬಂದಿದೆ. ನಮ್ಮ ಪಕ್ಷಕ್ಕೆ ಸೀಟು ಕಡಿಮೆ ಬಂದರೂ ಕೂಡ ನಾವು ಸರ್ಕಾರವನ್ನು ರಚನೆ ಮಾಡುತ್ತೇವೆ ಎಂದು ಅವರು ಭರವಸೆ ನೀಡಿದರು.
ಬೆಳಗಾವಿಯಲ್ಲಿ ರಾಜ್ಯ ಕಾಂಗ್ರೆಸ್ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿ ಅಧಿಕಾರಕ್ಕೆ ತರುವಲ್ಲಿ ಜಗದೀಶ್ ಶೆಟ್ಟರ್ ಯಶಸ್ವಿಯಾಗಿದ್ದಾರೆ. ಆರಂಭದಲ್ಲಿ ಇವರಿಗೆ ಸ್ಥಳೀಯಮಟ್ಟದಲ್ಲಿ ಭಾರೀ ವಿರೋಧ ವ್ಯಕ್ತವಾದರೂ ಸಹಿತ ನಿರಂತರ ಪ್ರಚಾರ, ರಾಜಕೀಯ ತಂತ್ರಗಳ ಮೂಲಕ ಇಂದು ಅವರು ಸಂಸತ್‌ಗೆ ಆಯ್ಕೆ ಆಗಿದ್ದಾರೆ.












Click it and Unblock the Notifications